ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು. ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.ರಾಜ್ಯದಲ್ಲಿ ಕೊರೊನಾContinue reading “ಕೊರೊನಾ ಭೀತಿ : ಆಗಸ್ಟ್ 15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್”
Category Archives: Uncategorized
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ
ಕರ್ನಾಟಕ ರಾಜ್ಯ ಸರಕಾರದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಆಗಸ್ಟ್ 12, ಗುರುವಾರ ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಅವರನ್ನು ಉಡುಪಿ ಜಿಲ್ಲಾ ವ್ಯಾಪ್ತಿಯ ಹೆಜಮಾಡಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಗುವುದು. ಮುಖ್ಯಮಂತ್ರಿಗಳು ಮಧ್ಯಾಹ್ನ 3.30ಕ್ಕೆ ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ, ಸಂಜೆ 4.00ಕ್ಕೆ ಉಡುಪಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಕೋವಿಡ್ ಕುರಿತು ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.30ಕ್ಕೆ ಉಡುಪಿ ಜಿಲ್ಲಾContinue reading “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲಾ ಪ್ರವಾಸ”
ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬೇಟಿ
ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಚಿವರನ್ನು ಸ್ವಾಗತಿಸಿ ಶಾಲು ಹೊದೆಸಿ ಪುಸ್ತಕ ನೀಡಿ ಗೌರವಿಸಿದರು. ಸಚಿವರು ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷContinue reading “ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬೇಟಿ”
ಉಡುಪಿ ಪುರಭವನದಲ್ಲಿ ಜಿಲ್ಲಾ ಬಿಜೆಪಿಯಿಂದ ಆಶೀರ್ವಾದ ಯಾತ್ರೆ, ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಅಭಿನಂದನೆ.
ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ’ವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16, ಸೋಮವಾರ ಬೆಳಿಗ್ಗೆ 11.45ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರContinue reading “ಉಡುಪಿ ಪುರಭವನದಲ್ಲಿ ಜಿಲ್ಲಾ ಬಿಜೆಪಿಯಿಂದ ಆಶೀರ್ವಾದ ಯಾತ್ರೆ, ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಅಭಿನಂದನೆ.”
ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಉಡುಪಿ ಮತ್ತು ದ.ಕ. ಜಿಲ್ಲೆಗಳ ನೂತನ ಸಚಿವರಿಗೆ ಪ್ರಮುಖ ಖಾತೆಗಳ ಹಂಚಿಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲೆಯ ಸುಳ್ಯ ಶಾಸಕ ಎಸ್.ಅಂಗಾರ ಮೀನುಗಾರಿಕೆ, ಬಂದರು ಮತ್ತುContinue reading “ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ “
ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ
ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರು ಹಾಗೂ ಕರಾಟೆ ಮುಖ್ಯ ಶಿಕ್ಷಕರು, ಮುಖ್ಯ ಪರೀಕ್ಷಕರು ಆಗಿರುವ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ ಇವರು ಕರಾಟೆ ಕ್ರೀಡೆಯ ಪ್ರಮುಖ ಘಟ್ಟವಾಗಿರುವ ಬ್ಲ್ಯಾಕ್ ಬೆಲ್ಟ್ ಆರನೇ ಪದವಿಯನ್ನು ಪಡೆಯುವುದರೊಂದಿಗೆ ಶಿಹಾನ್ ಶ್ರೇಣಿಯಿಂದ ರೆಂಷಿ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ. ಇವರು ಕರಾಟೆ ಬ್ಲ್ಯಾಕ್ ಬೆಲ್ಟ್ ಆರನೇ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ, ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಆಸ್ಟ್ರೇಲಿಯಾ ಇದರ ಏಷ್ಯಾ ಮುಖ್ಯ ಶಿಕ್ಷಕ ಹಂಷಿ ಬಿ. ಪರಮೇಶ್Continue reading “ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ”
ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ
ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ. ಪ್ರತಿದಿನ ಸುಮಾರು 3-8 ಸಾವಿರ ರೂ ಗಳಿಸಬಹುದು ಎಂದು ವಾಟ್ಸ್ ಆಪ್ ಮೂಲಕ ಬಂದ ಸಂದೇಶ ನಂಬಿ ಪೂರ್ಣಿಮಾ ಅವರು 3 ತಿಂಗಳ ಅಂತರದಲ್ಲಿ ಒಟ್ಟು 5.61 ಲಕ್ಷ ರೂ.Continue reading “ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ”
ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ
ದಿನಕ್ಕೆ 3-8 ಸಾವಿರ ರೂ. ಗಳಿಸುವ ಆಮಿಷಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 5.61 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ಬೆಳ್ತಂಗಡಿಯಲ್ಲಿ ಇದೀಗ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಚರ್ಚ್ ರಸ್ತೆಯ ಕಲ್ಕಣಿಯ ರವಿಶಂಕರ್ ಡಿ.ಕೆ ಅವರ ಪತ್ನಿ ಪೂರ್ಣಿಮಾ ಎಂಬವರೇ ಈ ರೀತಿ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ. ಪ್ರತಿದಿನ ಸುಮಾರು 3-8 ಸಾವಿರ ರೂ ಗಳಿಸಬಹುದು ಎಂದು ವಾಟ್ಸ್ ಆಪ್ ಮೂಲಕ ಬಂದ ಸಂದೇಶ ನಂಬಿ ಪೂರ್ಣಿಮಾ ಅವರು 3 ತಿಂಗಳ ಅಂತರದಲ್ಲಿ ಒಟ್ಟು 5.61 ಲಕ್ಷ ರೂ.Continue reading “ದಿನಕ್ಕೆ 8000 ಗಳಿಸುವ ದುರಾಸೆಗೆ ಬಿದ್ದು, 5.61 ಲಕ್ಷ ಕಳೆದುಕೊಂಡು ತಲೆಯ ಮೇಲೆ ಸಾಲ ತುಂಬಿಕೊಂಡು ಕುಳಿತ ಗೃಹಿಣಿ”
ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ
ಕೊರೋನಾವೈರಸ್ ಮೂರನೇ ಅಲೆ ಹತ್ತಿರ ಬರುತ್ತಿರುವಂತೆ ಕಾಣುತ್ತಿದ್ದು ಸೋಂಕಿತರ ಸಂಖ್ಯೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಈಗಾಗಲೇ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು ಗಡಿಭಾಗಗಳಲ್ಲಿ ಎಚ್ಚರಿಕೆ ವಹಿಸಲಾಗುತ್ತಿದೆ. ಇನ್ನೂ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಾರೆ. ಇಂದು ರಾತ್ರಿ 9ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿದ್ದಾರೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂವನ್ನುContinue reading “ಇಂದಿನಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ!: ಹೊಸ ಮಾರ್ಗಸೂಚಿ ಬಿಡುಗಡೆ”
ನಾಳೆ ಆಗಸ್ಟ್ 7ರಂದು ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕಾರ
ನಾಳೆ ಆಗಸ್ಟ್ 7, 2021 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ನೂತನ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ರವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ಬಂಧುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.