ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ರಾಜ್ಯದಲ್ಲೇ ಮೂಂಚೂಣಿ ಸ್ಥಾನವನ್ನು ಪಡೆದಿದೆ. ಈ ಭರ್ಜರಿ ವಿಜಯದ ಹಿನ್ನೆಲೆಯಲ್ಲಿ ಪ್ರತೀ ಮಂಡಲ ಮತ್ತು ಜಿಲ್ಲೆಯ 1,111 ಬೂತ್ ಗಳಲ್ಲಿ ಆತ್ಮಾವಲೋಕನ ಸಭೆಗಳನ್ನು ನಡೆಸುವ ಜೊತೆಗೆ ಸದೃಢ ಪಕ್ಷ ಸಂಘಟನೆ ಮೂಲಕ ಮುಂಬರಲಿರುವ ಲೋಕಸಭೆ, ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳಲ್ಲಿ ಭರ್ಜರಿ ಯಶಸ್ಸು ಸಾಧಿಸಲು ತಕ್ಷಣದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದContinue reading “ಆತ್ಮಾವಲೋಕನ, ಸದೃಢ ಪಕ್ಷ ಸಂಘಟನೆ ಮೂಲಕ ಮುಂದಿನ ಚುನಾವಣೆಗಳಿಗೆ ಜಿಲ್ಲಾ ಬಿಜೆಪಿ ಸಜ್ಜು: ಕುಯಿಲಾಡಿ”
Tag Archives: ಕರಾವಳಿ ಸುದ್ದಿ
ಉಡುಪಿ ಜಿಲ್ಲೆಯ ನೂತನ ಬಿಜೆಪಿ ಶಾಸಕರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕಿರಣ್ ಕುಮಾರ್ ಕೊಡ್ಗಿ ಕುಂದಾಪುರ ಮತ್ತು ಗುರುರಾಜ್ ಶೆಟ್ಟಿ ಗಂಟಿಹೊಳಿ ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿContinue reading “ಉಡುಪಿ ಜಿಲ್ಲೆಯ ನೂತನ ಬಿಜೆಪಿ ಶಾಸಕರಿಗೆ ಜಿಲ್ಲಾ ಬಿಜೆಪಿಯಿಂದ ಅಭಿನಂದನೆ”
ಮೇ 25: ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ
ಉಡುಪಿ: ಮೇ 10ರಂದು ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮಗದೊಮ್ಮೆ ಭರ್ಜರಿ ವಿಜಯ ದಾಖಲಿಸಿರುವುದು ಉಡುಪಿ ಜಿಲ್ಲಾ ಬಿಜೆಪಿಗೆ ಹೆಮ್ಮೆ ತಂದಿದೆ. ಈ ಪ್ರಯುಕ್ತ ಮೇ 25, ಗುರುವಾರ ಸಂಜೆ ಗಂಟೆ 5.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ನೂತನ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ವಿ.ಸುನೀಲ್ ಕುಮಾರ್ ಕಾರ್ಕಳ,Continue reading “ಮೇ 25: ಉಡುಪಿ ಜಿಲ್ಲೆಯ ನೂತನ ಶಾಸಕರಿಗೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ: ಕುಯಿಲಾಡಿ”
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ಪರ್ಕಳ(54 ವರ್ಷ) ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸಂಘದ ಪ್ರಚಾರಕರಾಗಿ ಮಣಿಪುರ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ ಸಂಘದ ಉಡುಪಿ ಜಿಲ್ಲೆಯ ಧರ್ಮ ಜಾಗರಣಾ ಇದರ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಶೋಕ್ ಪರ್ಕಳ ರವರು ಸರಳ ಸಜ್ಜನಿಕೆ ಹಾಗೂ ಸದಾ ಚುರುಕಿನ ವ್ಯಕ್ತಿತ್ವ ಹೊಂದಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆContinue reading “ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”
ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ಉಡುಪಿ ಜಿಲ್ಲೆಯ ಪ್ರಬುದ್ಧ ರಾಜಕಾರಿಣಿಗಳಲ್ಲೊಬ್ಬರು, ನೇರ ನಡೆ ನುಡಿಯ ಮಾಜಿ ಶಾಸಕ ಯು.ಆರ್. ಸಭಾಪತಿ ಯವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿದೆ. ನೂತನ ಉಡುಪಿ ಜಿಲ್ಲೆ ರಚನೆಯ ಸಂದರ್ಭದಲ್ಲಿ ಜಿಲ್ಲೆಯ ಇತರ ಹಿರಿಯ ರಾಜಕೀಯ ಮುತ್ಸದ್ಧಿಗಳ ಸಹಿತ ಮಾಜಿ ಶಾಸಕ ಯು.ಆರ್. ಸಭಾಪತಿಯವರ ಶ್ರಮ ಸ್ಮರಣೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆContinue reading “ಉಡುಪಿಯ ಮಾಜಿ ಶಾಸಕ ಯು.ಆರ್. ಸಭಾಪತಿ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”
ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ
ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ಕ್ಷೇತ್ರಗಳ ಭರ್ಜರಿ ಗೆಲುವು ಪಕ್ಷದ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಾರ್ಯ ತಂಡ ಮತ್ತು ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿಯನ್ನು ಬೆಂಬಲಿಸಿ ಮಗದೊಮ್ಮೆ ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜನತೆ ಅಭಿವೃದ್ಧಿ ಮತ್ತು ಹಿಂದುತ್ವದ ಪರ ವಿಶ್ವಾಸದContinue reading “ಜಿಲ್ಲೆಯ ಐದೂ ಸ್ಥಾನಗಳ ಗೆಲುವು ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಗೊಳಿಸಿದೆ: ಕುಯಿಲಾಡಿ”
ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ ಇದು?ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗ ಸಂಚಾಲಕ್ ಶ್ರೀನಿಧಿ ಹೆಗ್ಡೆ ಪ್ರಶ್ನೆ
ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ಸೂಚನೆ ದೊರಕುತ್ತಿದಂತೆ ಮತಾಂಧ ಜಿಹಾದಿಗಳು ಮತ್ತು ಕಾಂಗ್ರೆಸ್ ಕೃಪಾಕಟಾಕ್ಷ ಹೊಂದಿರುವ ಬೆಂಬಲಿಗರು ತಮ್ಮ ರಾಕ್ಷಸಿ ನಡೆ ಆರಂಭಿಸಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆಯಬಹುದಾದ ದುಷ್ಕೃತ್ಯಗಳ ಸರಮಾಲೆಯ ಟ್ರೇಲರ್ ಇದಾಗಿದ್ದು ಇನ್ನೆಷ್ಟು ಸರಣಿ ಕೊಲೆಗಳು ನಡೆಯುವ ಆತಂಕ ಎದುರಾಗಿದೆ. ಮತ ಎಣಿಕೆ ಕಾರ್ಯ ಮುಕ್ತಾಯವಾಗುತ್ತಿದ್ದಂತೆ ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ. ಯಾದಗಿರಿಯಲ್ಲೂ ದ್ವೇಷಕ್ಕೆ ಬಿಜೆಪಿ ಕಾರ್ಯಕರ್ತ ಬಲಿಯಾಗಿದ್ದಾನೆ. ಹೊನ್ನಾವರದಲ್ಲಿ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿಗೆ ವಾಹನ ನೀಡಿದ್ದಕ್ಕೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ಸಂದರ್ಭContinue reading “ಕಾಂಗ್ರೆಸ್ ನ ಸರಣಿ ಕೊಲೆಯ ಟ್ರೇಲರ್ ಕಾಂಗ್ರೆಸ್ ಆಡಳಿತದ ಕಾರ್ಯವೈಖರಿಯ ಸೂಚನೆಯೇ ಇದು?ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗ ಸಂಚಾಲಕ್ ಶ್ರೀನಿಧಿ ಹೆಗ್ಡೆ ಪ್ರಶ್ನೆ”
ಕಾಂಗ್ರೆಸ್ಸಿನ ಆರನೇ ಗ್ಯಾರಂಟಿ ರಿಲೀಸ್; ಇತರ ಗ್ಯಾರಂಟಿಗಳಿಗೆ ಷರತ್ತುಗಳು: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸ್ಸಿನಿಂದ ಆರನೇ ಗ್ಯಾರಂಟಿ ರಿಲೀಸ್ ಆಗಿದೆ. ಇದರನ್ವಯ ರಾಜ್ಯದಲ್ಲಿ ಮೊದಲ ಹತ್ಯೆ, ಅಲ್ಲಲ್ಲಿ ಹಿಂಸೆ, ದೇಶದ್ರೋಹದ ಪ್ರಕರಣಗಳು, ದೇಶ ವಿರೋಧಿ ಘೋಷಣೆ, ಪಾಕಿಸ್ತಾನ ಪರ ಘೋಷಣೆ, ಬಾವುಟ ವಿವಾದ ಇತ್ಯಾದಿಗಳು ಪ್ರಾರಂಭಗೊಂಡಿದ್ದು, ಕ್ರಮೇಣ ವಿಪರೀತ ಹಂತವನ್ನು ತಲುಪಲಿದೆ. ಭಾರತೀಯ ಜನತಾ ಪಾರ್ಟಿ ಇಂತಹ ಕುಕೃತ್ಯವನ್ನು ಸಹಿಸುವುದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅಧಿಕಾರ ಪಡೆಯುವ ಏಕೈಕ ಉದ್ದೇಶದಿಂದ ಜನರನ್ನು ಮರುಳುಗೊಳಿಸಲು ಘೋಷಿಸಿರುವContinue reading “ಕಾಂಗ್ರೆಸ್ಸಿನ ಆರನೇ ಗ್ಯಾರಂಟಿ ರಿಲೀಸ್; ಇತರ ಗ್ಯಾರಂಟಿಗಳಿಗೆ ಷರತ್ತುಗಳು: ಕುಯಿಲಾಡಿ ಸುರೇಶ್ ನಾಯಕ್”
ಜಿಲ್ಲೆಯ ಐದೂ ಸ್ಥಾನಗಳನ್ನು ಜಯಿಸಿರುವ ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ
ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಗೀತಾಂಜಲಿContinue reading “ಜಿಲ್ಲೆಯ ಐದೂ ಸ್ಥಾನಗಳನ್ನು ಜಯಿಸಿರುವ ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ”
ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಜಿಲ್ಲೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಂಘಟಿತ ಹೋರಾಟ ಹಾಗೂ ಕಾರ್ನರ್ ಮೀಟಿಂಗ್ ಗಳ ಮೂಲಕ ಜನತೆ ಕಾಂಗ್ರೆಸ್ಸಿನ ನಕಲಿ ಗ್ಯಾರಂಟಿ ಕಾರ್ಡ್ ಜಾಲದಿಂದ ಮೋಸ ಹೋಗದಂತೆ ಜಾಗೃತಿ ಮೂಡಿಸಿದ ಪರಿಣಾಮವಾಗಿ ದಾಖಲೆಯ ಅಂತರದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯದ ಇತರ ಎಲ್ಲಾ ಜಿಲ್ಲೆಗಳಿಗೆ ತುಲನೆ ಮಾಡಿದಾಗ, ಉಡುಪಿ ಜಿಲ್ಲೆಯ ಎಲ್ಲಾ ಐದುContinue reading “ಬಿಜೆಪಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆದ್ದಿರುವ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”