Design a site like this with WordPress.com
Get started

ಅಂಬೇಡ್ಕರ್ ಜಯಂತಿ, ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ಸ್ವಚ್ಛತಾ ಸೈನಿಕರಿಗೆ ಸನ್ಮಾನ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠ ಮತ್ತು ಜಿಲ್ಲಾ ಮೀನುಗಾರರ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮವು ಉಡುಪಿ ನಗರಸಭೆಯ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಂಬೇಡ್ಕರ್ ರವರ ತತ್ವಾದರ್ಶಗಳು ಎಂದೆಂದಿಗೂ ಅತ್ಯಂತ ಪ್ರಸ್ತುತ. ಸಾಮಾಜಿಕ ಪ್ರಜಾಪ್ರಭುತ್ವ ಉಳಿದರೆ ಮಾತ್ರContinue reading “ಅಂಬೇಡ್ಕರ್ ಜಯಂತಿ, ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ಸ್ವಚ್ಛತಾ ಸೈನಿಕರಿಗೆ ಸನ್ಮಾನ”

ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ: ಕುಯಿಲಾಡಿ

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಉಡುಪಿ: ಇಂದು ಎಲ್ಲಾ ಸ್ತರಗಳಲ್ಲಿ ಮಹಿಳೆಯರಿಗೆ ವಿಶೇಷ ಜವಾಬ್ದಾರಿ ಇದೆ. ಸಮೃದ್ಧ, ಸದೃಢ ಭಾರತ ನಿರ್ಮಾಣದತ್ತ ಪಕ್ಷದ ಸಂಸ್ಥಾಪಕರು ಕಂಡ ಕನಸನ್ನು ನನಸಾಗಿಸುವಲ್ಲಿ ಸಂಘಟಿತ ಶ್ರಮ ಅತ್ಯವಶ್ಯಕ. ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆಯಲ್ಲಿ ಎ.13ರಂದು ಬಿಜೆಪಿ ಜಿಲ್ಲಾContinue reading “ಸದೃಢ ಪಕ್ಷ ಸಂಘಟನೆಯಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ: ಕುಯಿಲಾಡಿ”

ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು; ಅಧಿಕಾರವಿಲ್ಲದೆ ಸೊರಗಿದ ಸೊರಕೆ ಮುಖವಾಡ ಬಯಲಾಗಿದೆ: ಕುಯಿಲಾಡಿ

ಉಡುಪಿ:ಉಡುಪಿಯಲ್ಲಿ ಹಿಜಾಬ್ ವಿವಾದವನ್ನು ಹುಟ್ಟು ಹಾಕಿದವರು ಯಾರು, ವಿವಾದವನ್ನು ಬೆಂಬಲಿಸಿ ಪೋಷಿಸಿದವರು ಯಾರು ಹಾಗೂ ವಿದ್ಯಾರ್ಥಿನಿಯರ ದಾರಿ ತಪ್ಪಿಸಿದವರು ಯಾರು ಎಂಬ ಎಲ್ಲಾ ವಿಚಾರಗಳನ್ನು ಜಿಲ್ಲೆಯ ಬುದ್ಧಿವಂತ ಜನತೆ ಚೆನ್ನಾಗಿಯೇ ಅರಿತುಕೊಂಡಿದ್ದಾರೆ. ಆದರೆ ತನ್ನ ನೆಚ್ಚಿನ ಎಸ್ಡಿಪಿಐ ಜೊತೆ ಶಾಮೀಲಾಗಿ ಸಿಎಎ, ಎನ್ಆರ್ಸಿ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡು ಇದೀಗ ಹಿಜಾಬ್ ವಿವಾದದ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡುತ್ತಾ, ಅಧಿಕಾರವಿಲ್ಲದೆ ಸೊರಗಿದ ಸೊರಕೆ ನೈಜ ಮುಖವಾಡ ಬಯಲಾಗಿದೆ. ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷContinue reading “ಎಸ್ಡಿಪಿಐ ಕಾಂಗ್ರೆಸ್ಸಿನ ಪಾಪದ ಕೂಸು; ಅಧಿಕಾರವಿಲ್ಲದೆ ಸೊರಗಿದ ಸೊರಕೆ ಮುಖವಾಡ ಬಯಲಾಗಿದೆ: ಕುಯಿಲಾಡಿ”

ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ: ಕುಯಿಲಾಡಿ

ಉಡುಪಿ: ಕೇವಲ ಒಂದೇ ವರ್ಗದ ಓಲೈಕೆ ರಾಜಕಾರಣ ಮಾಡುತ್ತಾ ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್, ಅವರ ಸಾಧನೆ, ಘನತೆ, ಅರ್ಹತೆಗೆ ಭಾರತ ರತ್ನ ಗೌರವವನ್ನೂ ನೀಡದೆ, ಕನಿಷ್ಠ ಅವರ ಅಂತಿಮ ಸಂಸ್ಕಾರಕ್ಕೂ ದೆಹಲಿಯಲ್ಲಿ ಅವಕಾಶ ನೀಡದೇ ಅವಮಾನಿಸಿರುವುದು ಕರಾಳ ಇತಿಹಾಸವಾಗಿದೆ. ಮಾಜಿContinue reading “ದೇಶದ ಏಕತೆ ಮತ್ತು ಸಮಗ್ರತೆಗೆ ಅಡ್ಡಿಯಾಗಿರುವ ಕಾಂಗ್ರೆಸ್ ಎಂದೂ ದೇಶಕ್ಕೆ ಅಪಾಯಕಾರಿ: ಕುಯಿಲಾಡಿ”

ಪಕ್ಷದ ಸಂಸ್ಥಾಪಕರ ತ್ಯಾಗ ಬಲಿದಾನ ಆದರ್ಶ ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾಂಗ್ರೆಸ್ ನ ದುರಾಡಳಿತ, ತುಷ್ಟೀಕರಣ ನೀತಿ ಅಂದು ಡಾ! ಶ್ಯಾಮ ಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ದಿವ್ಯ ಚೇತನಗಳಿಂದ ಭಾರತೀಯ ಜನ ಸಂಘದ ಹುಟ್ಟಿಗೆ ಕಾರಣವಾಯಿತು. ಬಳಿಕ ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ತಳಹದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯವರಂತಹ ಧೀಮಂತ ನಾಯಕರ ಪರಿಶ್ರಮದಿಂದ ಎಪ್ರಿಲ್ 6, 1980ರಂದು ಭಾರತೀಯ ಜನತಾ ಪಾರ್ಟಿ ಸ್ಥಾಪನೆಗೊಂಡಿತು. ಪಕ್ಷದ ಸಂಸ್ಥಾಪಕರ ತ್ಯಾಗ, ಬಲಿದಾನ, ಆದರ್ಶಗಳು ಕಾರ್ಯಕರ್ತರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದು ಕರ್ನಾಟಕ ಸರಕಾರದContinue reading “ಪಕ್ಷದ ಸಂಸ್ಥಾಪಕರ ತ್ಯಾಗ ಬಲಿದಾನ ಆದರ್ಶ ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿ: ಕೋಟ ಶ್ರೀನಿವಾಸ ಪೂಜಾರಿ”

ವಿಸ್ತಾರಕ ಯೋಜನೆ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣಗೈದ ಕೋಟ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂದಟ್ಟು ಮತ್ತು ಪಡುಕರೆಯ 4 ಮತ್ತು 5 ನೇ ವಾರ್ಡಿನ ಬಿಜೆಪಿ ಬೂತ್ ಗಳ ಅಧ್ಯಕ್ಷರ ಮನೆಯಲ್ಲಿ ಬೂತ್ ಅಧ್ಯಕ್ಷರ ನಾಮ ಫಲಕವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅನಾವರಣಗೊಳಿಸಿ ಶುಭ ಹಾರೈಸಿದರು. ವಿಸ್ತಾರಕ ಅಭಿಯಾನದ ಅಂಗವಾಗಿ ‘ಸಶಕ್ತ ಬೂತ್ – ಸದೃಢ ಭಾರತ’ ಪರಿಕಲ್ಪನೆಯಡಿ ಬೂತ್ ಸಮಿತಿಯ ಅಧ್ಯಯನ ಹಾಗೂ ಪರಿಶೀಲನಾ ಸಭೆ ನಡೆಯಿತು. ಈContinue reading “ವಿಸ್ತಾರಕ ಯೋಜನೆ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣಗೈದ ಕೋಟ”

ಪಕ್ಷದ ಬೆಳವಣಿಗೆಯಲ್ಲಿ ಪ್ರಕೋಷ್ಠಗಳ ಕ್ರಿಯಾಶೀಲತೆ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಬಿಜೆಪಿ ಇಂದು ಸರ್ವ ಸ್ಪರ್ಶಿ ಸರ್ವ ವ್ಯಾಪಿ ಎನಿಸಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷದ ಬೆಳವಣಿಗೆಯಲ್ಲಿ ಪ್ರಕೋಷ್ಠಗಳ ಕ್ರಿಯಾಶೀಲತೆ ಮಹತ್ವಪೂರ್ಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ಪ್ರಕೋಷ್ಠಗಳು ತಮ್ಮ ವ್ಯಾಪ್ತಿಯ ಇತಿ ಮಿತಿಯೊಳಗೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಮಹತ್ತರವಾದ ಕೊಡುಗೆಯನ್ನುContinue reading “ಪಕ್ಷದ ಬೆಳವಣಿಗೆಯಲ್ಲಿ ಪ್ರಕೋಷ್ಠಗಳ ಕ್ರಿಯಾಶೀಲತೆ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಸಭೆ

ಉಡುಪಿ: ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಬಿಜೆಪಿ ಹೆರ್ಗ ಮಹಾ ಶಕ್ತಿ ಕೇಂದ್ರದ ಸಭೆಯು ಮಹಾ ಶಕ್ತಿಕೇಂದ್ರದ ಸಂಚಾಲಕ ಹೇಮಂತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಎ.4ರಂದು ಕೆಳ ಪರ್ಕಳದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಜಿಲ್ಲಾ ಉಸ್ತುವಾರಿ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಪಕ್ಷದ ವಿಸ್ತಾರಕ ಯೋಜನೆಯ ಹಿನ್ನೆಲೆಯಲ್ಲಿ ಸಶಕ್ತ ಬೂತ್ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈContinue reading “ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಸಭೆ”

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ

ಉಡುಪಿ: ಜಿಲ್ಲಾ ಬಿಜೆಪಿ ಕಛೇರಿಗೆ ಎ.4ರಂದು ಭೇಟಿ ನೀಡಿದ ಕರ್ನಾಟಕ ಸರಕಾರದ ಮಾನ್ಯ ಬ್ರಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಡಾ! ಮುರುಗೇಶ್ ನಿರಾಣಿ ಅವರನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿContinue reading “ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರಿಗೆ ಜಿಲ್ಲಾ ಬಿಜೆಪಿಯಿಂದ ಸನ್ಮಾನ”

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್ ಉಡುಪಿ: ಎ.6ರಂದು ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಪಕ್ಷದ ಧ್ವಜಾರೋಹಣಗೈದು ಬಿಜೆಪಿಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಬೇಕು ಹಾಗೂ ಎ.14ರಂದು ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆಯನ್ನು ಸೇವಾ ಕಾರ್ಯಗಳ ಮೂಲಕ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆContinue reading