Design a site like this with WordPress.com
Get started

ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಹಿಂದೂ ದೇವಸ್ಥಾನಗಳ ಸ್ವಾಯತ್ತೆ ಮುಂತಾದ ಜನಪರ ಕಾಯ್ದೆ ಕಾನೂನುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸಿ ವಿರೋಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಜನತೆ ಜಾಗರೂಕರಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾContinue reading “ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್”

ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ಜ.3ರಂದು ರಾಮನಗರದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಿ.ಆರ್. ಅಂಬೇಡ್ಕರ್ ಮತ್ತು ನಾಡ ಪ್ರಭು ಕೆಂಪೇಗೌಡ ರವರ ಪ್ರತಿಮೆ ಅನಾವರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿ ಗೂಂಡಾಗಿರಿ ಪ್ರದರ್ಶಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯContinue reading “ಕಾಂಗ್ರೆಸ್ ನ ಗೂಂಡಾ ಸಂಸ್ಕೃತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ”

ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಕುಯಿಲಾಡಿ ಸುರೇಶ್ ನಾಯಕ್

ರಾಮನಗರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಅವರಿಗೆ ಬೆಂಬಲ ನೀಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾಗಿರಿಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ರಾಮನಗರದಲ್ಲಿ ನಡೆದಿರುವುದು ಕಾಂಗ್ರೆಸ್ ಗೂಂಡಾಗಿರಿಯ ಒಂದು ಮಾದರಿಯಷ್ಟೇ. ಗ್ರಾಮ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಗೂಂಡಾಗಿರಿ,Continue reading “ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಕುಯಿಲಾಡಿ ಸುರೇಶ್ ನಾಯಕ್”

ಬಸ್ತಿ ವಾಮನ್ ಶೆಣೈ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಉಡುಪಿ: ಕೊಂಕಣಿ ಸಾಹಿತ್ಯ ಲೋಕದ ದಿಗ್ಗಜ, ಅಪ್ರತಿಮ ಸಂಘಟಕ, ವಿಶ್ವ ಕೊಂಕಣಿ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ್ ಶೆಣೈ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ. ಬಸ್ತಿ ವಾಮನ್ ಶೆಣೈಯವರ ನಿಧನ ಕೊಂಕಣಿ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್

ಉಡುಪಿ: ಮನೋಲ್ಲಾಸ ಹಾಗೂ ಮನೋವಿಕಾಸಕ್ಕಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ರೀಡಾ ಭಾರತಿ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜ.2ರಂದು ಅಜ್ಜರಕಾಡು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಉಡುಪಿ ಶಾಸಕ, ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಕೆ.ರಘುಪತಿ ಭಟ್ ಕ್ರೀಡಾಭಿಮಾನಿಗಳಿಗೆ ಕರೆ ನೀಡಿದರು. ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ.2ರಂದು ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನ 2021-22 ಇದರ ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೈಹಿಕ ಶ್ರಮContinue reading “ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್”

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಯನಾ ಗಣೇಶ್ ಉದ್ಯಾವರ ಆಯ್ಕೆ: ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ನಯನಾ ಗಣೇಶ್ ಉದ್ಯಾವರ ಇವರು ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಗ್ಗೆ ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದೆ. ಪಕ್ಷದ ಕ್ರಿಯಾಶೀಲ ಪದಾಧಿಕಾರಿ ನಯನಾ ಗಣೇಶ್ ರವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನಿಯುಕ್ತಿಗೊಳಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಯನಾ ಗಣೇಶ್ ಉದ್ಯಾವರ ಆಯ್ಕೆ: ಜಿಲ್ಲಾ ಬಿಜೆಪಿ ಅಭಿನಂದನೆ”

ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ

ಉಡುಪಿ: ಉಡುಪಿ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಕಾಶೀ ಮಠ ಸಂಸ್ಥಾನದ ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಕೊಡಮಾಡಿದ ಪಚ್ಚೆ ಕಲ್ಲಿನ ಸ್ವರ್ಣ ಹಾರವನ್ನು ಶುಕ್ರವಾರ ಗೌಡ ಸಾರಸ್ವತ ಸಮಾಜದ ದೇವಸ್ಥಾನಗಳ ಪ್ರಮುಖರು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ಹಸ್ತಾಂತರಿಸಿದರು. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚಿಸಿ ಪ್ರಪಂಚದ ಎಲ್ಲಾ ವಸ್ತುಗಳೂ ಭಗವಂತನ ಕೊಡುಗೆಗಳಾಗಿವೆ ಎಂಬ ಅನುಸಂಧಾನದ ಮೂಲಕ ದೇವರಿಗೆ ವಸ್ತುಗಳ ಸಮರ್ಪಣೆಯಾಗಬೇಕು. ಶ್ರೀಕೃಷ್ಣನ ವಿಗ್ರಹದಲ್ಲಿ ದೇವರನ್ನು ನೋಡಿ ಈ ಹಾರವನ್ನು ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಸಮರ್ಪಿಸುತ್ತಿದ್ದಾರೆ ಎಂದುContinue reading “ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ”

ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರಕಾರದ ಕೊಡುಗೆ ಸ್ವಾಗತಾರ್ಹ: ಜಿಲ್ಲಾ ಬಿಜೆಪಿ

ವರ್ಷದ ಪ್ರಥಮ ದಿನದಂದೇ ನಾಡಿನ ರೈತಾಪಿ ವರ್ಗಕ್ಕೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 10ನೇ ಕಂತು ಬಿಡುಗಡೆಯ ಪ್ರಧಾನಿ ನರೇಂದ್ರ ಮೋದಿ ನಡೆ ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. *ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಶೋಭಾ ಕರಂದ್ಲಾಜೆಗೆ ಅಭಿನಂದನೆ:* ಉಡುಪಿ ಜಿಲ್ಲೆಯ ಕೇಂದ್ರ ಸ್ಥಾನವಾಗಿರುವ ಉಡುಪಿ ನಗರವನ್ನು ಜೋಡಿಸುವ ರಾಷ್ಟ್ರೀಯ ಹೆದ್ದಾರಿ 169ಎ ಇದರ 2 ಪ್ರಮುಖ ಕೊಂಡಿಗಳಾಗಿರುವ ಹೆಬ್ರಿ-ಪರ್ಕಳ ಮತ್ತು ಆದಿವುಡುಪಿ ಕರಾವಳಿ ಜಂಕ್ಷನ್-ಮಲ್ಪೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರContinue reading “ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರಕಾರದ ಕೊಡುಗೆ ಸ್ವಾಗತಾರ್ಹ: ಜಿಲ್ಲಾ ಬಿಜೆಪಿ”

ಕಾಪು ಪುರಸಭೆ ಚುನಾವಣೆ ಬಿಜೆಪಿ ಗೆಲುವು ಐತಿಹಾಸಿಕ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಪು ಪುರಸಭೆ ಚುನಾವಣೆಯ 23 ಸ್ಥಾನಗಳಲ್ಲಿ 12 ಅಭ್ಯರ್ಥಿಗಳು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿರುವ ಬಿಜೆಪಿ ಗೆಲುವು ಐತಿಹಾಸಿಕ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹರ್ಷ ವ್ಯಕ್ತ ಪಡಿಸಿದ್ದಾರೆ. ಬಿಜೆಪಿಗೆ ಬಹುಮತ ನೀಡಿದ ಕಾಪು ಪುರಸಭಾ ವ್ಯಾಪ್ತಿಯ ಮತದಾರರಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುವ ಜೊತೆಗೆ ಚುನಾವಣಾ ಗೆಲುವಿಗೆ ಹಗಲಿರುಳು ಶ್ರಮಿಸಿರುವ ಸಚಿವರು, ಸಂಸದರು, ಶಾಸಕರು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.Continue reading “ಕಾಪು ಪುರಸಭೆ ಚುನಾವಣೆ ಬಿಜೆಪಿ ಗೆಲುವು ಐತಿಹಾಸಿಕ: ಕುಯಿಲಾಡಿ ಸುರೇಶ್ ನಾಯಕ್”

ಕೊರಗ ಸಮುದಾಯದ ಮದುವೆ ಮನೆಗೆ ಪೊಲೀಸರ ದಾಳಿ ಖಂಡನೀಯ, ಎಸ್.ಐ. ಮೇಲೆ ಅಗತ್ಯ ಶಿಸ್ತು ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಒತ್ತಾಯ: ಜಿಲ್ಲಾ ಬಿಜೆಪಿ

ಉಡುಪಿ: ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ ಕೊರಗ ಸಮುದಾಯದ ಮದುವೆ ಮನೆಗೆ ಮೆಹಂದಿ ಸಂದರ್ಭದಲ್ಲಿ ನುಗ್ಗಿ ಮದುಮಗನೂ ಸೇರಿದಂತೆ ಹಲವರ ಮೇಲೆ ಲಾಠಿ ಪ್ರಹಾರ ನಡೆಸಿರುವ ಪೊಲೀಸರ ಅಮಾನವೀಯ ಕ್ರಮವನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಮೆಹಂದಿ ಕಾರ್ಯಕ್ರಮದಲ್ಲಿ ಡಿ.ಜೆ. ಹಾಕಿರುವ ನೆಪವೊಡ್ಡಿ ಆಕ್ಷೇಪ ವ್ಯಕ್ತಪಡಿಸಿ ಅನಗತ್ಯ ಲಾಠಿ ಚಾರ್ಜ್ ಮಾಡಿರುವ ಪೊಲೀಸರು ಮತ್ತು ಕರ್ತವ್ಯದಲ್ಲಿದ್ದ ಸಬ್ ಇನ್ಸ್ಪೆಕ್ಟರ್ ವಿರುದ್ಧ ಅಗತ್ಯ ಶಿಸ್ತುContinue reading “ಕೊರಗ ಸಮುದಾಯದ ಮದುವೆ ಮನೆಗೆ ಪೊಲೀಸರ ದಾಳಿ ಖಂಡನೀಯ, ಎಸ್.ಐ. ಮೇಲೆ ಅಗತ್ಯ ಶಿಸ್ತು ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಒತ್ತಾಯ: ಜಿಲ್ಲಾ ಬಿಜೆಪಿ”