ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ರಾಜ್ಯದಲ್ಲೇ ವೈಶಿಷ್ಟ್ಯಪೂರ್ಣ: ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲೆಯ ಎಲ್ಲಾ ಮೋರ್ಚಾಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ನಿರಂತರ ವೈವಿಧ್ಯಮಯ ಕಾರ್ಯ ಚಟುವಟಿಕೆಗಳಿಂದ ಜಿಲ್ಲೆಯ ಮೋರ್ಚಾಗಳಲ್ಲೇ ಮೂಂಚೂಣಿಯಲ್ಲಿರುವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಲ್ಪೆ ಕಡಲ ತೀರದ ತುದಿಯಲ್ಲಿರುವ ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಂಡಿರುವುದು ರಾಜ್ಯಕ್ಕೇ ಮಾದರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ-ಮಲ್ಪೆ ಕಡಲContinue reading “ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ”
Tag Archives: ಕರಾವಳಿ ಸುದ್ದಿ
ಜಿಲ್ಲಾ ಬಿಜೆಪಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಡಿ.8ರಂದು ತಮಿಳುನಾಡಿನ ವೆಲ್ಲಿಂಗ್ಟನ್ ಬಳಿಯ ಕೂನೂರಿನಲ್ಲಿ ಅಪಘಾತಕ್ಕೀಡಾದ ಭಾರತೀಯ ವಾಯುಸೇನೆಯ ಎಂಐ-17ವಿ5 ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ಅಪ್ಪಟ ದೇಶಪ್ರೇಮಿ, ದೇಶದ ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರೆನಿಸಿದ್ದ ಜನರಲ್ ಬಿಪಿನ್ ರಾವತ್ ರವರಿಗೆ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರು ನುಡಿ ನಮನಗಳನ್ನು ಸಲ್ಲಿಸಿ,Continue reading “ಜಿಲ್ಲಾ ಬಿಜೆಪಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ”
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಬಹುಮತದಿಂದ ಗೆಲ್ಲಿಸಿ: ಕುಯಿಲಾಡಿ ಸುರೇಶ್ ನಾಯಕ್ ಮನವಿ
ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಅಪಾರ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಕಳೆದ 13 ವರ್ಷಗಳಿಂದ ಮೇಲ್ಮನೆ ಶಾಸಕರಾಗಿ, ಸಚಿವರಾಗಿ ಪರಿಣಾಮಕಾರಿ ಹೆಜ್ಜೆಗಳ ಮೂಲಕ ಅಧಿಕಾರ ವಿಕೇಂದ್ರೀಕರಣ ಹಾಗೂ ಪಂಚಾಯತ್ ರಾಜ್ ಮತ್ತು ನಗರಾಡಳಿತ ವ್ಯವಸ್ಥೆಯ ಬಲವರ್ಧನೆಯ ಜೊತೆಗೆ ಸದಸ್ಯರ ಗೌರವಧನ ಹೆಚ್ಚಿಸುವಲ್ಲಿ ಶ್ರಮ ವಹಿಸಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ. ಡಿ.10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಳೀಯಾಡಳಿತ ಸಂಸ್ಥೆಗಳ ದ.ಕ. ಮತ್ತು ಉಡುಪಿ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಏಕೈಕ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸContinue reading “ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಬಹುಮತದಿಂದ ಗೆಲ್ಲಿಸಿ: ಕುಯಿಲಾಡಿ ಸುರೇಶ್ ನಾಯಕ್ ಮನವಿ”
ಬಿಜೆಪಿ ಹಿರಿಯ ನಾಯಕ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ
ಉಡುಪಿ: ದ.ಕ. ಜಿಲ್ಲಾ ಬಿಜೆಪಿಯ ಭೀಷ್ಮರೆನಿಸಿಕೊಂಡಿದ್ದ ಜನಸಂಘದ ಹಿರಿಯ ನಾಯಕ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.ವೃತ್ತಿಯಲ್ಲಿ ವಕೀಲರಾಗಿ, ಪ್ರವೃತ್ತಿಯಲ್ಲಿ ಮೌಲ್ಯಾಧಾರಿತ ರಾಜಕಾರಿಣಿಯಾಗಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿ, ಪ್ರೇರಣಾ ಶಕ್ತಿಯಾಗಿ ಪಕ್ಷ ಸಂಘಟನೆಯಲ್ಲಿ ಕೆ.ರಾಮ ಭಟ್ ರವರ ಪಾತ್ರ ಅತ್ಯಂತ ಹಿರಿದು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿContinue reading “ಬಿಜೆಪಿ ಹಿರಿಯ ನಾಯಕ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”
ಕೋಟ ಶ್ರೀನಿವಾಸ ಪೂಜಾರಿ ಅಂತರದ ಗೆಲುವಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ
ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಕುಂದಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಬಿಜೆಪಿ ಸರಣಿ ಸಭೆಗಳು ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನ ಮುಂದೆ | ಬರೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಚಲಾಯಿಸಿ, ಕೋಟರವರ ದೊಡ್ಡ ಅಂತರದ ಗೆಲುವಿಗೆ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಕಾರಣರಾಗುವ ಜೊತೆಗೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಕೈಜೋಡಿಸಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿContinue reading “ಕೋಟ ಶ್ರೀನಿವಾಸ ಪೂಜಾರಿ ಅಂತರದ ಗೆಲುವಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ”
ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್
ಡಿ.27ರಂದು ನಡೆಯಲಿರುವ ಕಾಪು ಪುರಸಭೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂಘಟಿತ ಪ್ರಯತ್ನದ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಡಿ.1ರಂದು ಕಾಪು ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳು, ಕಳೆದ ಮೂರೂವರೆ ವರ್ಷದContinue reading “ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್”
ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿಯವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ಜರಗಿತು. ಸುಮಾರು ಐನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕವನ್ನು ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಕುಟುಂಬದContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ”
ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜ್ಯಕ್ಕೇ ಮಾದರಿ: ಶಾಸಕ ಕೆ.ರಘುಪತಿ ಭಟ್
ಉಡುಪಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್ ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದು ನಮ್ಮ ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ನವರ ಅವಧಿಯಲ್ಲಿ ರೂ.250 ಗೌರವ ಧನವನ್ನು ಮಂಜೂರು ಮಾಡಿಸಲು ಶ್ರಮ ಪಟ್ಟಿದ್ದಲ್ಲದೇ ಗೌರವ ಧನ ಹೆಚ್ಚಳಕ್ಕೆ ನಿರಂತರವಾಗಿ ಹೋರಾಟ ಮಾಡಿ ಈಗ ರೂ.1,000ಕ್ಕೆ ಗೌರವ ಧನವನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ವಿಧಾನ ಪರಿಷತ್ ನಲ್ಲಿ ಸಭಾ ನಾಯಕರಾಗಿ ರೂ.1,000 ಇದ್ದ ಗೌರವ ಧನವನ್ನುContinue reading “ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಕೋಟ ಶ್ರೀನಿವಾಸ ಪೂಜಾರಿ ರಾಜ್ಯಕ್ಕೇ ಮಾದರಿ: ಶಾಸಕ ಕೆ.ರಘುಪತಿ ಭಟ್”
ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಸರಣಿ ಸಭೆಗಳು
ಕಾಪು: ಕಾಪು ವಿಧಾಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿಯಾಗಿ ಸರಣಿ ಸಭೆಗಳು ನಡೆದವು. ಮಹಾಶಕ್ತಿಕೇಂದ್ರವಾರು ಹಾಗು ನಾಲ್ಕೈದು ಪಂಚಾಯತ್ ಒಟ್ಟು ಸೇರಿಸಿ ಅಲೆವೂರು, ಮುದರಂಗಡಿ ಹಿರಿಯಡ್ಕ ಕಟಪಾಡಿ ಉಚ್ಚಿಲ ಹಾಗೂ ಪಡುಬಿದ್ರೆಯಲ್ಲಿ ಒಟ್ಟು ಆರು ಕಡೆ ಪಂಚಾಯತ್ ಸದಸ್ಯರಿಗೆ ಚುನಾವಣೆಯ ಮಹತ್ವ ಮತದಾನ ಮಾಡುವ ರೀತಿ ಇತ್ಯಾದಿಗಳ ಮಾಹಿತಿ ನೀಡಿದೆವು. ನಮ್ಮ ಅಭ್ಯರ್ಥಿಯೂ ಕರ್ನಾಟಕ ಸರಕಾರದ ಸಚಿವರೂ ಆದ ಕೋಟ ಶ್ರೀನಿವಾಸ ಪೂಜಾರಿ ಎಲ್ಲ ಸಭೆಗಳಲ್ಲಿ ಭಾಗವಹಿಸಿ ತನಗೆ ಮತದಾನ ಮಾಡುವಂತೆ ವಿನಂತಿಸಿದರು. ಕಾಪು ಮಂಡಲContinue reading “ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಸರಣಿ ಸಭೆಗಳು”
ಉಡುಪಿ: ಕೋವಿಡ್ ರೂಪಾಂತರಿ ತಳಿ “ಒಮಿಕ್ರಾನ್” ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್
ಉಡುಪಿ: ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ನ ಹೊಸ ರೂಪಾಂತರಿ ತಳಿ ಒಮಿಕ್ರಾನ್ ಪ್ರಸರಣದ ಆತಂಕ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವುದರಿಂದ ಸರ್ವೇಕ್ಷಣ ಚಟುವಟಿಕೆಗಳನ್ನು ತೀವ್ರಗೊಳಿಸುವ ನಿಟ್ಟಿನಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯ ಗುರಿಯನ್ನು ಹೆಚ್ಚಿಸಿ ಕರ್ನಾಟಕ ಸರ್ಕಾರ ಸುತ್ತೋಲೆಯನ್ನು ಹೊರಡಿಸಿದೆ. ಅದರಂತ ಜಿಲ್ಲೆಯಲ್ಲಿ ಕೋವಿಡ್ ನ ಹೊಸ ರೂಪಾಂತರಿ ಪ್ರಸರಣ ತಡೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಡಿಸಿ ಕೂರ್ಮಾರಾವ್Continue reading “ಉಡುಪಿ: ಕೋವಿಡ್ ರೂಪಾಂತರಿ ತಳಿ “ಒಮಿಕ್ರಾನ್” ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಕೂರ್ಮಾರಾವ್”