ಮಂಗಳೂರು: ಹಲವು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‌ಗೇಟ್ ತೆರವು ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಇದೀಗ ಹೆಜಮಾಡಿಯಲ್ಲಿ ಟೋಲ್ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಭಾರಿ ಪ್ರತಿಭಟನೆಯ, ಹೋರಾಟದ ನಂತರ ಸುರತ್ಕಲ್ ಟೋಲ್ ರದ್ದಾಗಿದ್ದು ಹೇಜಮಾಡಿ ಟೋಲ್ ದರ ಡಬಲ್ ಆಗಿದೆ. ಇದರಿಂದ ನವಯುಗ ಕಂಪೆನಿಗೆ ಪರೋಕ್ಷವಾಗಿ ಪ್ರತಿಭಟನೆ ಸಹಕಾರಿಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಪಿಸುಮಾತು ಕೇಳಿ ಬರುತ್ತಿದೆ. ಈ ಹಿಂದೆ ಸುರತ್ಕಲ್ ಟೋಲ್ ನಲ್ಲಿ ನಡೆಸಬೇಕಾಗಿದ್ದ ಮೈಂಟೆನೆನ್ಸ್ ಚಾರ್ಚ್ ನವಯುಗ ಕಂಪೆನಿಗೆ ಸಂಪೂರ್ಣContinue reading “ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ”
Tag Archives: ಕರಾವಳಿ ಸುದ್ದಿ
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ
News by: ಜನತಾಲೋಕವಾಣಿನ್ಯೂಸ್ ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,Continue reading “ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ”
ಪಿ.ಎಫ್.ಐ ಬ್ಯಾನ್ – ಆರ್ಟಿಕಲ್ 370 ರದ್ದು – ರಾಮ ಮಂದಿರ ಸ್ಥಾಪನೆ ಮಂಗಳೂರು ಬ್ಲಾಸ್ಟ್ ಗೆ ಕಾರಣ : ತೇಜಸ್ವಿಸೂರ್ಯ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಿ.ಎಫ್.ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ನಡೆದಿದೆ. ಆರ್ಟಿಕಲ್ 370 ರದ್ದು ಹಾಗು ರಾಮ ಮಂದಿರವನ್ನು ಕಟ್ಟುತ್ತಿರುವುದನ್ನು ಸಹಿಸಿಕೊಳ್ಳಲಾಗದ ಉಗ್ರರು ಈ ರೀತಿ ಭಯೋತ್ಪಾದಕ ಚಟುವಟಿಕೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು. ಅವರು ಮಂಗಳವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲಿನಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದರು. ಪಿ.ಎಫ್.ಐ ಬ್ಯಾನ್ ವಿಚಾರ: ಈContinue reading “ಪಿ.ಎಫ್.ಐ ಬ್ಯಾನ್ – ಆರ್ಟಿಕಲ್ 370 ರದ್ದು – ರಾಮ ಮಂದಿರ ಸ್ಥಾಪನೆ ಮಂಗಳೂರು ಬ್ಲಾಸ್ಟ್ ಗೆ ಕಾರಣ : ತೇಜಸ್ವಿಸೂರ್ಯ”
ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಸರಕಾರದ ವಿರುದ್ಧ ಪ್ರತೀಕಾರದ ಭಯೋತ್ಪಾದನಾ ಕೃತ್ಯ: ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ
News by: ಜನತಾಲೋಕವಾಣಿನ್ಯೂಸ್ ಉಡುಪಿ, ನ.22 : ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ 1,680 ಪಿಎಫ್ಐ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆಗೊಳಿಸಿದ್ದರು. ಇದೀಗ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ. ಇದರಿಂದ ಕೆಲಸ ಕಳೆದುಕೊಂಡಿರುವ ಪಿಎಫ್ಐ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ದ ಪ್ರತೀಕಾರ ನಡೆಸಲು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಪ್ರಕರಣವು ಇದೇ ಕಾರಣಕ್ಕೆ ನಡೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಅವರು ನ.22ರಂದು ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿContinue reading “ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಸರಕಾರದ ವಿರುದ್ಧ ಪ್ರತೀಕಾರದ ಭಯೋತ್ಪಾದನಾ ಕೃತ್ಯ: ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ”
ನ.22ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆತಿಥ್ಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ನ.21ರಂದು ಸಂಜೆ 6.00 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ ಹೇಳಿದರು. ಅವರು ನ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.Continue reading “ನ.22ರಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಆತಿಥ್ಯದಲ್ಲಿ ರಾಜ್ಯ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ”
ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ
News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸಂಘಟನಾತ್ಮಕ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಾಧ್ಯಮ ವಿಭಾಗದ ‘ಚಿಂತನ ಮಂಥನ’ ವರ್ಗದೊಂದಿಗೆ ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕ್ರಿಯಾಶೀಲತೆ ಮತ್ತು ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಾಧ್ಯಮ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಾಧ್ಯಮ ತಂಡ ಮಂಡಲಾಧ್ಯಕ್ಷರ ನೇತೃತ್ವದಲ್ಲಿContinue reading “ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ”
ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ
News By: ಜನತಾಲೋಕವಾಣಿನ್ಯೂಸ್ ಉಡುಪಿ, ನ.14: ರಾಷ್ಟ್ರೀಯ ಚಿಂತನೆ, ಸಿದ್ದಾಂತವನ್ನು ಒಳಗೊಂಡು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕಾಲ ಕಾಲಕ್ಕೆ ರಾಷ್ಟ್ರದ ಹಿತಕ್ಕಾಗಿ ಪಕ್ಷ ಮತ್ತು ಕಾರ್ಯಕರ್ತನ ಜವಾಬ್ದಾರಿಯನ್ನು ತಿಳಿಸುವ, ಮಾರ್ಗಸೂಚಿ ನೀಡುವ ವ್ಯವಸ್ಥೆಯೇ ಪ್ರಶಿಕ್ಷಣ ವರ್ಗ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ಮಣಿಪಾಲದ ಸರಳೇಬೆಟ್ಟು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ”
ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ. ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ. ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರುContinue reading “ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ”
ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಅಶ್ಲೀಲ ಮಾನಸಿಕತೆಯ ಸತೀಶ್ ಜಾರಕಿಹೊಳಿ ಹೇಳಿಕೆಯು ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿಯನ್ನು ತಿಳಿಸುತ್ತದೆ. ಅಂದು ನೆಹರೂ ತನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಹಿಂದುಗಳ ಭಾವನೆಗೆ ಧಕ್ಕೆ ಉಂಟುಮಾಡುತ್ತಾ ಬಂದಿದೆ. ಕಾಶ್ಮೀರ, ರಾಮಸೇತು, ರಾಮ ಮಂದಿರ ವಿಚಾರಗಳಲ್ಲೂ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ದ ದೂರು ದಾಖಲಿಸಲಾಗುವುದು. ಹಿಂದೂ ಪದ ಅಶ್ಲೀಲ ಅರ್ಥವನ್ನು ಸೂಚಿಸುತ್ತದೆ ಎಂದಿರುವContinue reading “ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್”
ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ
NEWS By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿಗೆ ಜನತೆ ದೇಶ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಜನತೆಯ ನಿರೀಕ್ಷೆ ಈಡೇರಿಸುವಂತಹ ಪಕ್ಷ ಬಿಜೆಪಿ ಎಂಬ ವಿಶ್ವಾಸ ಜನತೆಯಲ್ಲಿದೆ. ಬಿಜೆಪಿ ಸರಕಾರದ ಆಡಳಿತಕ್ಕೆ ಬಂದಾಗ ಎಲ್ಲೆಡೆ ಅಭಿವೃದ್ಧಿಯ ಪರ್ವಕಾಲವನ್ನು ಜನತೆ ಕಂಡಿದ್ದಾರೆ. ಈ ನೆಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡContinue reading “ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ”