News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಕಾಂಗ್ರೆಸ್‍ನವರು ಜನರನ್ನು ಮರುಳು ಮಾಡಲು, ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುತ್ತಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಕು! ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ನೀವು 2013ರಿಂದ 2018ರವರೆಗೆ ಅಧಿಕಾರ ನಡೆಸಿದ್ದೀರಿ. ಆಗ ನೀವು ಒಂದು ಸಮುದಾಯದ ಓಲೈಕೆಗಾಗಿContinue reading “ಜನರಿಗೆ ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಹಂಚುವ ಕಾಂಗ್ರೆಸ್ ಪಕ್ಷ: ಶೋಭಾ ಕರಂದ್ಲಾಜೆ”
Tag Archives: ಪ್ರಾದೇಶಿಕ
ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ
ದೆಹಲಿ: ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಇಂದು ಸಂಸತ್ತಿನಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಭೇಟಿ ಮಾಡಿದರು. ಸಂಘ ಪರಿವಾರದ ಕಾರ್ಯಕರ್ತ ಶ್ರೀ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದುದಕ್ಕೆ ಅವರಿಗೆ ಧನ್ಯವಾದ ತಿಳಿಸಿ, ಕರಾವಳಿಯಲ್ಲಿ ನಡೆಯುತ್ತಿರುವ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಚಾರ ಮಂಡಿಸಿದ ಕೆ.ಉದಯಕುಮಾರ್ ಶೆಟ್ಟಿ
ವಿಜಯಪುರ: ವಿಜಯಪುರದ ಹಂಪಿಯಲ್ಲಿ ಎಪ್ರಿಲ್ 16ರಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಷಯಗಳ ಬಗ್ಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿಯವರು ವಿಚಾರ ಮಂಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಚಿವರಾದ ಆನಂದ್Continue reading “ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಚಾರ ಮಂಡಿಸಿದ ಕೆ.ಉದಯಕುಮಾರ್ ಶೆಟ್ಟಿ”
ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್
ಶಿವಮೊಗ್ಗ: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಶಿವಮೊಗ್ಗ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಒಟ್ಟು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 24 ಘಂಟೆಯ ಒಳಗಡೆ ಆರೋಪಿಗಳನ್ನು ಬಂಧಿಸಿದ್ದು ರಾಜ್ಯ ಗೃಹ ಇಲಾಖೆ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಹರ್ಷ ಹತ್ಯೆ ಪ್ರಕರಣದಲ್ಲಿ ಸಯ್ಯದ್ ನದೀಮ್, ಖಾಸಿಫ್, ಅಫಾನ್, ಖಾಸಿ ಅಲಿಯಾಸ್ ಸಲ್ಮಾನ್, ಚಿಕು, ಸಲ್ಮಾನ್ ಸೇರಿದಂತೆ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದ್ದು 12 ಮಂದಿಯನ್ನು ವಿಚಾರಣೆಗೆ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದಲ್ಲಿ ಬೀಡುಬಿಟ್ಟಿರುವ ಎಡಿಜಿಪಿ ಮುರುಗನ್Continue reading “ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳು ಅರೆಸ್ಟ್”
ಶಿವಮೊಗ್ಗ: ಜಿಲೆಟಿನ್ ಸ್ಪೋಟ ದುರಂತ ಗುತ್ತಿಗೆದಾರ ಸುಧಾಕರ್ ಜಿಲೆಟಿನ್ ಪೂರೈಕೆದಾರ ನರಸಿಂಹ ಬಂಧನ…!
ಶಿವಮೊಗ್ಗ ಜಿಲ್ಲೆಯ ಅಬ್ಬಲಗೇರಿ ಹತ್ತಿರ ರೈಲ್ವೇ ಕ್ರಷರ್ ನಲ್ಲಿ ಜಿಲೆಟಿನ್ ಸ್ಫೋಟ ದುರಂತಕ್ಕೆ ಸಂಬಂಧಿಸಿ ಪೊಲೀಸರು ಇದೀಗ ಕಲ್ಲು ಗಣಿಗಾರಿಕೆಯ ಗುತ್ತಿಗೆದಾರ ಸುಧಾಕರ್, ಜಿಲೆಟಿನ್ ಪೂರೈಕೆ ಮಾಡುತ್ತಿದ್ದ ನರಸಿಂಹ ಎಂಬುವರನ್ನು ಪೋಲಿಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಅಬ್ಬಲಗೆರೆ–ಹುಣಸೋಡು ನಡುವೆ ಇರುವ ಜಲ್ಲಿ ಕ್ರಷರ್ ಬಳಿಯಲ್ಲಿ ಸಂಗ್ರಹಿಸಿದ್ದ ಭಾರಿ ಪ್ರಮಾಣದ ಡೈನಾಮೈಟ್ ನಿನ್ನೆ ರಾತ್ರಿ ಸ್ಫೋಟಿಸಿ, ಇಲ್ಲಿವರೆಗೆ ಸುಮಾರು 8 ಕಾರ್ಮಿಕರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಸ್ಫೋಟದ ತೀವ್ರತೆಗೆ ಮೃತ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ ಎಂದು ತಿಳಿದುContinue reading “ಶಿವಮೊಗ್ಗ: ಜಿಲೆಟಿನ್ ಸ್ಪೋಟ ದುರಂತ ಗುತ್ತಿಗೆದಾರ ಸುಧಾಕರ್ ಜಿಲೆಟಿನ್ ಪೂರೈಕೆದಾರ ನರಸಿಂಹ ಬಂಧನ…!”
ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರಿಂದ ಶಂಕುಸ್ಥಾಪನೆ
ಹೆಜಮಾಡಿ ಕೋಡಿಯಲ್ಲಿ ಇಂದು ದಿನಾಂಕ 19-01-2021 ರಂದು ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರು ಇದರ ಶಂಕುಸ್ಥಾಪನೆಯನ್ನು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ರವರು ನೆರವೇರಿಸಿದರು. . ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮೀನುಗಾರಿಕೆ ಇಲಾಖೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಕೆ.Continue reading “ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರಿಂದ ಶಂಕುಸ್ಥಾಪನೆ”
ರಘುಪತಿ ಭಟ್ ಮನವಿ ಮೇರೆಗೆ ಕರಂಬಳ್ಳಿಯಲ್ಲಿ ಡಾll ವಿ. ಎಸ್. ಆಚಾರ್ಯ ಸ್ಮರಣಾರ್ಥ ಸಭಾಭವನ – ಅನ್ನಛತ್ರ ನಿರ್ಮಿಸಲು ರೂ. 4.00 ಕೋಟಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ
ಉಡುಪಿಯ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಇಂದು ದಿನಾಂಕ 18-01-2021ರಂದು ನಡೆದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡ ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡುತ್ತಾ ಶಾಸಕ ಕೆ. ರಘುಪತಿ ಭಟ್ ಅವರು ಮನವಿ ಮಾಡಿರುವಂತೆ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಡಾll ವಿ. ಎಸ್. ಆಚಾರ್ಯ ಸ್ಮರಣಾರ್ಥ ಸಭಾಭವನ ಹಾಗೂ ಅನ್ನಛತ್ರ ನಿರ್ಮಾಣಕ್ಕೆ ಸರ್ಕಾರದಿಂದ ರೂ. 4.00 ಕೋಟಿ ನೀಡುವುದಾಗಿ ಘೋಷಣೆ ಮಾಡಿದರು. ಶ್ರೀ ವೆಂಕಟರಮಣ ದೇವಸ್ಥಾನ ಕರಂಬಳ್ಳಿContinue reading “ರಘುಪತಿ ಭಟ್ ಮನವಿ ಮೇರೆಗೆ ಕರಂಬಳ್ಳಿಯಲ್ಲಿ ಡಾll ವಿ. ಎಸ್. ಆಚಾರ್ಯ ಸ್ಮರಣಾರ್ಥ ಸಭಾಭವನ – ಅನ್ನಛತ್ರ ನಿರ್ಮಿಸಲು ರೂ. 4.00 ಕೋಟಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ”
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ : ಜಿಲ್ಲಾಧಿಕಾರಿ ಜ.ಜಗದೀಶ್
ಉಡುಪಿ ಜುಲೈ 28 : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈಗಾಗಲೇ ಆಯುಷ್ಮಾನ್ ಭಾರತ್ ಯೋಜನೆಯಡಿ ನೊಂದಾಯಿಸಿಕೊAಡಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆಯಲ್ಲಿ 50 ಶೇಕಡಾ ಬೆಡ್ ಗಳನ್ನು ಕಡ್ಡಾಯವಾಗಿ ಮೀಸಲಿಡುವಂತೆ ಸೂಚಿಸಿ, ಬೆಡ್ ಗಳನ್ನು ಮೀಸಲಿಡದ ಆಸ್ಪತ್ರೆಗಳ ನೊಂದಣಿಯನ್ನು ಕೆಪಿಎಂಇ ಕಾಯ್ದೆಯಡಿ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.ಅವರು ಮಂಗಳವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಜಿಲ್ಲೆಯಲ್ಲಿ ಆಯುಷ್ಮಾನ್Continue reading “ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಶೇ.50 ಬೆಡ್ ಮೀಸಲು ಕಡ್ಡಾಯ : ಜಿಲ್ಲಾಧಿಕಾರಿ ಜ.ಜಗದೀಶ್”
ಉಡುಪಿಯಲ್ಲಿ ಸಮುದಾಯ ಮಟ್ಟದಲ್ಲಿ ಸೋಂಕು: ಡಾ.ಶಶಿಕಿರಣ್ ಎಚ್ಚರಿಕೆ.
ಉಡುಪಿ: ಜಿಲ್ಲೆಯಲ್ಲಿ ತೀವ್ರ ಉಸಿರಾಟದ ಸಮಸ್ಯೆ ಹಾಗೂ ಶೀತಜ್ವರ ರೋಗ ಲಕ್ಷಣ ಇರುವವರರಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಸಮುದಾಯ ಮಟ್ಟದಲ್ಲಿ ಸೋಂಕು ಹರಡಿರುವ ಭೀತಿ ಸೃಷ್ಟಿಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಡಾ.ಟಿಎಂಎ ಪೈ ಆಸ್ಪತ್ರೆಯ ತಜ್ಞ ವೈದ್ಯ ಡಾ.ಶಶಿಕಿರಣ್ ಉಮಾಕಾಂತ್.
ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಸ್ವಾಮೀಜಿಗಳಿಗೆ ಕೊರೋನಾ ಸೋಂಕು ದೃಢ
ಉಡುಪಿ , ಜು.21: ಕೃಷ್ಣ ನಗರಿಯಲ್ಲಿ ಕೊರೋನಾ ದಿನದಿಂದ ದಿನಕ್ಕೆ ಸದ್ದು ಮಾಡುತ್ತಲೇ ಇದೆ. ಇಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೂ ಕೊವೀಡ್ -19 ಸೋಂಕು ತಗುಲಿರುವುದು ದೃಢವಾಗಿದೆ. ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುಗುಣೇಂದ್ರ ಶ್ರೀಗಳಿಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅವರ ಗಂಟಲ ದ್ರವ ಪರೀಕ್ಷೆಗೆ ರವಾನಿಸಲಾಗಿತ್ತು. ಮಂಗಳವಾರ ವರದಿ ಕೈ ಸೇರಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ಶ್ರೀಗಳನ್ನು ದಾಖಲಿಸಲಾಗಿದೆ.Continue reading “ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಸ್ವಾಮೀಜಿಗಳಿಗೆ ಕೊರೋನಾ ಸೋಂಕು ದೃಢ”