Design a site like this with WordPress.com
Get started

ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ನಗರದ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಸಚಿವ ಡಾ ಕೆ ಸುಧಾಕರ್ (Dr K Sudhakar) ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಪ್ರಣಾಳಿಕೆ ಪ್ರಮುಖ ಅಂಶಗಳು: 🪷ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆContinue reading “ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ”

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಒಂದು ಕ್ಷೇತ್ರಕ್ಕೆ ಒಂದೇ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ರಾ ಮಾಜಿ ಸಚಿವ ಈಶ್ವರಪ್ಪ? ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.ಕಳೆದContinue reading “ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ”

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶ್ರೀರಾಮನವಮಿ ಆಚರಣೆ

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್

News By : ಜನತಾಲೋಕವಾಣಿನ್ಯೂಸ್ ಬೆಂಗಳೂರು: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯು ಇದೇ ಬರುವ 10 ಮೇ 2023ರಂದು ನಡೆಯಲಿದೆ ಎಂದು ಚುನಾವಣಾ ಆಯೋಗವು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು ಮೇ 10ರಂದು ಮತದಾನ ನಡೆಸಿ ಮೇ13ರಂದೇ ಫಲಿತಾಂಶ ಘೋಷಣೆಯಾಗಲಿದೆ. ಎಪ್ರಿಲ್ 20 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು 5.22Continue reading “ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್”

ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.

ಬೆಂಗಳೂರು: ಅರಶಿನ ಬೆಳೆಗೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ‌ ಕಾರಣ ಮಾರುಕಟ್ಟೆ ಮದ್ಯಸ್ಥಿಕೆ‌ ಯೋಜನೆಯಡಿಯಲ್ಲಿ ಅರಶಿನ ಬೆಳೆಯನ್ನು ಖರೀದಿಸಬೇಕೆಂದು ರಾಜ್ಯದ ಅರಶಿನ ಬೆಳೆಗಾರರ ನಿಯೋಗ ಕಳೆದ ವಾರವಷ್ಟೆ ನನಗೆ ಮನವಿ ಸಲ್ಲಿಸಿ, ಅರಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ಮನವಿ‌ ಮಾಡಿದ್ದರು. ಕರ್ನಾಟಕ ರಾಜ್ಯ ಸರ್ಕಾರವು ಸಹ ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿತ್ರು. ಮನವಿಗೆ ಸ್ಪಂದಿಸಿ ನಾನು ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿದ್ದೆ. ಶೀಘೃವಾಗಿ‌‌ ಕೇಂದ್ರದಿಂದ‌ ಆದೇಶ ಹೊರಡಿಸಿ, ಅರಿಸಿಣ ಬೆಳೆಯ ರೈತರ ಕಷ್ಟಕ್ಕೆContinue reading “ರಾಜ್ಯದ ಅರಶಿನ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಸ್ಪಂದಿಸಿದ ಕೇಂದ್ರ ಸರ್ಕಾರ- ಶೋಭಾ ಕರಂದ್ಲಾಜೆ.”

ದಶಪಥ ಹೆದ್ದಾರಿ ಮೂಲಕ ಬೆಂಗಳೂರು-ಮೈಸೂರಿನ ಸಮಗ್ರ ಅಭಿವೃದ್ಧಿ : ಶೋಭಾ ಕರಂದ್ಲಾಜೆ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನಮ್ಮ ಕರ್ನಾಟಕದಲ್ಲಿ ಬಿಜೆಪಿ ಪರ ಅಲೆ ಇದೆ. ನಿರೀಕ್ಷೆಗೂ ಮೀರಿದ ಬೆಂಬಲ ರಥ ಯಾತ್ರೆಗೆ ಸಿಗುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಮತ್ತು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು! ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ಯಾತ್ರೆ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯು ನಡ್ಡಾ,Continue reading “ದಶಪಥ ಹೆದ್ದಾರಿ ಮೂಲಕ ಬೆಂಗಳೂರು-ಮೈಸೂರಿನ ಸಮಗ್ರ ಅಭಿವೃದ್ಧಿ : ಶೋಭಾ ಕರಂದ್ಲಾಜೆ”

ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ

NEWS BY: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಅಭಿವೃದ್ಧಿಯ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಕೊಪ್ಪಳದಲ್ಲಿ, ಕೊಪ್ಪಳ ಸೇರಿದಂತೆ ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮರ್ಥ ಪ್ರಧಾನಿ ನರೇಂದ್ರ ಮೋದಿಜಿ ನೇತೃತ್ವ, ಯಡಿಯೂರಪ್ಪ, ಬೊಮ್ಮಾಯಿ ಅವರ ನೇತೃತ್ವದಲ್ಲಿ ದೇಶ – ರಾಜ್ಯದಲ್ಲಿ ಮಹಿಳಾ ಸಶಕ್ತೀಕರಣ ಕಾರ್ಯ ನಡೆಯಿತು. 12Continue reading “ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಜೆ.ಪಿ. ನಡ್ಡಾ”

ಡಿ.15ರಂದು 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆ, 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯು ಡಿಸೆಂಬರ್ 15ರಂದು ನಡೆಯಲಿದೆ ಎಂದು ಕಟ್ಟಡ ಸಮಿತಿ ರಾಜ್ಯ ಅಧ್ಯಕ್ಷ ಮತ್ತು ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷ ಮಾ. ನಾಗರಾಜ್ ಅವರು ತಿಳಿಸಿದ್ದಾರೆ. ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಗದಗದಲ್ಲಿ ನಿರ್ಮಿಸಿದ ನೂತನ ಕಾರ್ಯಾಲಯಗಳನ್ನು ಕೊಪ್ಪಳದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರುContinue reading “ಡಿ.15ರಂದು 10 ಜಿಲ್ಲೆಗಳ ಬಿಜೆಪಿ ನೂತನ ಕಾರ್ಯಾಲಯ ಭವನ ಉದ್ಘಾಟನೆ, 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ”

ಸಿದ್ದರಾಮಯ್ಯ ಗೋಸುಂಬೆ ರಾಜಕಾರಣಿ: ಛಲವಾದಿ ನಾರಾಯಣಸ್ವಾಮಿ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಗೋಸುಂಬೆ ರಾಜಕಾರಣಿ ಎಂದು ಬಿಜೆಪಿ ಎಸ್‍.ಸಿ. ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಂಕಿ ಬಿದ್ದಾಗ ಕೈಕಾಯಿಸಿಕೊಳ್ಳುವ ಸಿದ್ದರಾಮಯ್ಯ ಅವರು ಒಬ್ಬ ಗೋಸುಂಬೆ ರಾಜಕಾರಣಿ ಎಂದು ಅವರು ನುಡಿದರು. ಸಿದ್ದರಾಮಯ್ಯ ಅವರು ಯಾವತ್ತೂ ಒಳ ಮೀಸಲಾತಿ ಪರ ಇರಲಿಲ್ಲ. ಹುಬ್ಬಳ್ಳಿಯಲ್ಲಿ 2017ರಲ್ಲಿ ನಡೆದ ಮಾದಿಗ ಸಮುದಾಯದ ಮೀಸಲಾತಿ ಒತ್ತಾಯಿಸುವContinue reading “ಸಿದ್ದರಾಮಯ್ಯ ಗೋಸುಂಬೆ ರಾಜಕಾರಣಿ: ಛಲವಾದಿ ನಾರಾಯಣಸ್ವಾಮಿ”

ಕಬ್ಬು ಬಿಲ್ ಪಾವತಿಗೆ ಎಥನಾಲ್ ಪರಿಗಣನೆ: ಶಂಕರ ಪಾಟೀಲ್ ಮುನೇನಕೊಪ್ಪ ಧನ್ಯವಾದ

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯ ಸರಕಾರವು ಇಲ್ಲಿನವರೆಗೆ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ಆದಾಯ ಹಂಚಿಕೆ ಮಾಡುವಾಗ ಸಕ್ಕರೆ, ಬಗಾಸ್, ಮೊಲಾಸಿಸ್, ಪ್ರೆಸ್‍ಮಡ್‍ಗಳಿಂದ ಬರುವ ಆದಾಯವನ್ನು ಮಾತ್ರ ಪರಿಗಣಿಸುತ್ತಿತ್ತು. ಸಕ್ಕರೆ ಉದ್ಯಮದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ವರ್ಷದಲ್ಲಿ ಎಫ್‍ಆರ್‍ಪಿ ದರದ ಮೇಲೆ ಹೆಚ್ಚುವರಿಯಾಗಿ ಕಬ್ಬಿನ ಬಿಲ್ಲನ್ನು ಪಾವತಿಸಲು ಅನುಕೂಲವಾಗುವಂತೆ ಉಪ ಉತ್ಪನ್ನವಾದ ಎಥನಾಲ್ ಅನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯದ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಬಿ. ಪಾಟೀಲ್ ಮುನೇನಕೊಪ್ಪContinue reading “ಕಬ್ಬು ಬಿಲ್ ಪಾವತಿಗೆ ಎಥನಾಲ್ ಪರಿಗಣನೆ: ಶಂಕರ ಪಾಟೀಲ್ ಮುನೇನಕೊಪ್ಪ ಧನ್ಯವಾದ”