News by: ಜನತಾಲೋಕವಾಣಿನ್ಯೂಸ್ ಬೆಂಗಳೂರು, ನ.18: ಕಾಂಗ್ರೆಸ್ ಮುಖಂಡರು ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದವು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಟೀಕಿಸಿದರಲ್ಲದೆ, ಬಿಜೆಪಿ ನುಡಿದಂತೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ಇದೇ 20ರಂದು ಬಿಜೆಪಿ ಎಸ್.ಟಿ. ಮೋರ್ಚಾ ನವಶಕ್ತಿ ಸಮಾವೇಶ ನಡೆಯುವContinue reading “ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ; ಎಸ್.ಸಿ., ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ : ಬಿ.ಶ್ರೀರಾಮುಲು”
Tag Archives: ರಾಜ್ಯ
ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿ, ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರತ್ಯುತ್ತರ ನೀಡಿದೆ. ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆContinue reading “ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು”
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಜನಸಂಕಲ್ಪ ಸಮಾವೇಶ
News By: ಜನತಾಲೋಕವಾಣಿನ್ಯೂಸ್ https://youtu.be/KHnxIQxT7cA
ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್
News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು. ಹಾಸನದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಸೆಂಬ್ಲಿ ಚುನಾವಣೆContinue reading “ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್”
ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ
ಚಿಕ್ಕಬಳ್ಳಾಪುರ : ಕಳೆದ 75 ವರ್ಷದಲ್ಲಿ ಭಾವುಟಗಳನ್ನೇ ಮರೆತಿದ್ದವರು, ರಾಷ್ಟ್ರಧ್ವಜವನ್ನೇ ಮರೆತಿದ್ದವರು ಪ್ರಧಾನಿಯವರು ಹರ್ ಘರ್ ತಿರಂಗ ಘೋಷಣೆ ನಂತರ ಬೆಂಗಳೂರಿನ ಬೀದಿಗಳಲ್ಲಿ ಧ್ವಜ ಹಿಡಿದು ಪಾದಯಾತ್ರೆ ಮಾಡಿರುವುದು ಬಯಲು ನಾಟಕವಲ್ಲವೇ ಎಂದು ಆರೋಗ್ಯ ಸಚಿವ ಡಾ! ಕೆ. ಸುಧಾಕರ್ ಪ್ರಶ್ನಿಸಿದ್ದಾರೆ. ಹರ್ ಘರ್ ತಿರಂಗ ಎಂಬುದು ನಾಟಕ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಯಲು ನಾಟಕ ಮಾಡುತ್ತಿರುವ ಕಾಂಗ್ರೆಸ್ ಗೆ ಕಳೆದ 75 ವರ್ಷದಲ್ಲಿ ರಾಷ್ಟ್ರಧ್ವಜ ನೆನಪಿತ್ತೇ? ಈಗContinue reading “ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ”
ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್
ಆರ್‌ಎಸ್‌ಎಸ್ ಮತ್ತು ಸಾವರ್ಕರ್ ಬಗ್ಗೆ ಮಾತನಾಡುವುದು ಕಾಂಗ್ರೆಸ್ ದೌರ್ಬಲ್ಯ ಬೆಂಗಳೂರು, ಭಾನುವಾರ, ಆಗಸ್ಟ್ 21: ಸತ್ಯಕ್ಕೆ ಎರಡು ಮುಖಗಳಿರುತ್ತವೆ. ಈಗ ಕಾಂಗ್ರೆಸ್ ಕಾರ್ಯಕರ್ತರೇ ಅವರ ನಾಯಕರ ಮೇಲೆ ಮುಗಿ ಬಿದ್ದಿದ್ದಾರೆ. *ಕೈ ಪಕ್ಷದ ನಾಯಕರು ಸಮಾಜದಲ್ಲಿ ಹೇಗೆ ಇರಬೇಕು ಅನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು* ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರ ಬಗ್ಗೆ ಕಾಂಗ್ರೆಸ್ ನಾಯಕರು ಲಘುವಾಗಿ ಮಾತನಾಡಿರುವುದು ಕಾರ್ಯಕರ್ತರಿಗೆ ಕೋಪ ತರಿಸಿದೆ. ಭಾವೋದ್ವೇಗಕ್ಕೆ ಒಳಗಾಗಿ ಮೊಟ್ಟೆContinue reading “ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರೇ ತಮ್ಮ ನಾಯಕರ ಮೇಲೆ ಅಟ್ಟಹಾಸ ಮೆರೆಯುತ್ತಿದ್ದಾರೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ,ಕೆ. ಸುಧಾಕರ್“
ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ
ಬೆಂಗಳೂರು: ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಬೆಂಗಳೂರಿನ ಬಿಜೆಪಿ ನಗರ ಕಾರ್ಯಾಲಯ “ಭಾವುರಾವ್ ದೇಶಪಾಂಡೆ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಡಿಯೋ ಮಾಡಿContinue reading “ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ”
ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ಇಂದು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 1,109 ಕೇಸ್ ಜೊತೆಗೆ ಏಕೈಕ ಮರಣ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,393ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ 31 ಮತ್ತು ದಕ್ಷಿಣ ಕನ್ನಡದಲ್ಲಿ 29 ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕContinue reading “ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೋನ ಪ್ರಕರಣಗಳು!!”
ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ
ಬೆಂಗಳೂರು: ಜಖನ್ 3. ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಬಿಡುಗಡೆ ಮಾಡಿದ್ದು , ಛಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ,ಲಕ್ಷ್ಮಣ ಸವದಿ, ಮತ್ತು ಎಸ್. ಕೇಶವ ಪ್ರಸಾದ್ ಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ
ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್‍ಕುಮಾರ್ ಕಟೀಲ್ ವಿಶ್ವಾಸ
ಬೆಂಗಳೂರು: ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೇ ಒಂದು ಸಂದೇಶ ನೀಡಲಿದೆ. ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು ಪಡೆಯಲಿದೆ. ಯಡಿಯೂರಪ್ಪ ಅವರು ರೈತಬಂಧುವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬೆಳೆದಿದೆ; ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೊಸಪೇಟೆಯ ಸಂಕಲ್ಪ ಸಭೆಯುContinue reading “ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150 ಪ್ಲಸ್ ಸೀಟು ಪಡೆಯುವ ಚಿಂತನೆ ಯಶಸ್ಸು: ನಳಿನ್‍ಕುಮಾರ್ ಕಟೀಲ್ ವಿಶ್ವಾಸ”