Design a site like this with WordPress.com
Get started

Breaking News: ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ

ಶಿವಮೊಗ್ಗ: ಉಡುಪಿ ಹೋಟೆಲ್ ಕೊಠಡಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಇರುಸುಮುರುಸು ಆಗಬಾರದೆಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆಂದು ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ಘೋಷಿಸಿದ ಸಚಿವ ಕೆಎಸ್ ಈಶ್ವರಪ್ಪ

ಹಿಜಾಬ್’ ಇಸ್ಲಾಂ ಅತ್ಯಗತ್ಯ ಭಾಗವಲ್ಲ – ‘ಹೈಕೋರ್ಟ್ ತ್ರಿಸದಸ್ಯ ಪೀಠ’ದಿಂದ ಮಹತ್ವದ ತೀರ್ಪು

ಬೆಂಗಳೂರು: ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂಬುದಾಗಿ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಐತಿಹಾಸಿಕ ತೀರ್ಪು ನೀಡಿ, ಹಿಜಾಬ್ ಧರಿಸಲು ಅನುಮತಿ ಕೋರಿದ್ದಂತಹ ರಿಟ್ ಅರ್ಜಿಗಳನ್ನು ವಜಾಗೊಳಿಸಿದೆ. ಇಂದು ಫೆಬ್ರವರಿ 25ರಿಂದ 11 ದಿನಗಳ ವಾದ-ಪ್ರತಿವಾದ ಆಲಿಸಿದ್ದಂತ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು, ತನ್ನ ತೀರ್ಪನ್ನು ಪ್ರಕಟಿಸಿದೆ. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್,Continue reading “ಹಿಜಾಬ್’ ಇಸ್ಲಾಂ ಅತ್ಯಗತ್ಯ ಭಾಗವಲ್ಲ – ‘ಹೈಕೋರ್ಟ್ ತ್ರಿಸದಸ್ಯ ಪೀಠ’ದಿಂದ ಮಹತ್ವದ ತೀರ್ಪು”

ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆಯನ್ನು ಮತ್ತು ಜನರ ವಿಶ್ವಾಸÀವನ್ನು ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷ ಹಿಜಾಬ್ ಒಳಗೆ ಸೇರಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ಗಲಭೆಯನ್ನು ಪ್ರಾರಂಭಿಸಲು ಎರಡು ಶಕ್ತಿಗಳು ಒಂದುಗೂಡಿವೆ. ಇದರಲ್ಲಿ ಮಾನಸಿಕ ಮತ್ತು ಬೌದ್ಧಿಕ ಚಿಂತನೆ ಕಾಂಗ್ರೆಸ್ ಪಕ್ಷದ್ದಾದರೆ,Continue reading “ಕಾಂಗ್ರೆಸ್ ಮತ್ತು ಎಸ್‍ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್‍ಕುಮಾರ್ ಕಟೀಲ್”

ಹಿಜಾಬ್ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೂರ್ಣ ಪೀಠ ರಚನೆ, ನಾಳೆ ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಗೆ ಹೈಕೋರ್ಟ್ ನಿಂದ ವಿಶೇಷ ಪೂರ್ಣ ಪೀಠವನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೋನ್ ಅವರ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2:30 ಕ್ಕೆ ಹಿಜಾಬ್ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.

ಕರ್ನಾಟಕದಲ್ಲಿ ಕರ್ಪ್ಯೂ ಅವಧಿಯಲ್ಲಿ ಬದಲಾವಣೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗಿದೆ. ಇಂದಿನಿಂದ (ಜನವರಿ 7 ) ರಿಂದ ಸೋಮವಾರದ ವರೆಗೆ ಕರುನಾಡು ಸಂಪೂರ್ಣವಾಗಿ ಸ್ತಬ್ದವಾಗಲಿದೆ. ಆದ್ರೀಗ ರಾಜ್ಯದಲ್ಲಿ ವೀಕೆಂಡ್‌ ಕರ್ಪ್ಯೂ ಅವಧಿಯನ್ನು (Weekend Curfew Timings Change) ರಾತ್ರಿ 8 ರ ಬದಲು 10 ಗಂಟೆಯಿಂದ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌ ತಿಳಿಸಿದ್ದಾರೆ. ಕೊರೊನಾ ಹಾಗೂ ಓಮಿಕ್ರಾನ್‌ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್‌ ಅಧಿಕಾರಿಗಳು ಹಾಗೂ ಕೋವಿಡ್‌ ತಜ್ಞರ ಜೊತೆಗೆ ಸಭೆContinue reading “ಕರ್ನಾಟಕದಲ್ಲಿ ಕರ್ಪ್ಯೂ ಅವಧಿಯಲ್ಲಿ ಬದಲಾವಣೆ”

ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ

ಬೆಂಗಳೂರು: ಕೊರೊನಾ ವೈರಸ್‌ ಮಹಾಮಾರಿ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಎರಡನೇ ಅಲೆ ನಂತರ ಈಗ ಒಮಿಕ್ರಾನ್ ಭಯ ಆರಂಭವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಮಿಕ್ರಾನ್ ನ ಎರಡು ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ಈಗ ಬುಡಕ್ಕೆ ಬಂದಿದ್ದು, ಭಯ ಹೆಚ್ಚಾಗಿದೆ. ಎರಡನೇ ಅಲೆಯಲ್ಲಿ ಮಾಡಿದ ನಿರ್ಲಕ್ಷ್ಯವನ್ನು ಈಗಲೂ ಮುಂದುವರಿಸದೆ ಕೆಲವೊಂದು ಎಚ್ಚರಿಕೆ ಕ್ರಮಕೈಗೊಂಡಲ್ಲಿ ಕೊರೊನಾದಿಂದ ನಿಮ್ಮನ್ನು ರಕ್ಷಿಸಬಹುದು. ಒಮಿಕ್ರಾನ್ ನಿಂದ ರಕ್ಷಣೆ ಪಡೆಯುವುದು ಹೇಗೆ? : ಲಸಿಕೆ : ಭಾರತದಲ್ಲಿ ಲಸಿಕೆContinue reading “ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ”

ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಪುನೀತ್ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ಪುನೀತ್ ತೀವ್ರ ಎದೆನೋವಿನಿಂದ ಬಳಲುತ್ತಿದ್ದರು ಬೆಳಿಗ್ಗೆ 11:30ಕ್ಕೆ ಆಸ್ಪತ್ರೆಗೆ ಆಗಮಿಸಿದ್ದರು. ವಿಕ್ರಂ ಆಸ್ಪತ್ರೆಗೆ ಬರುವ ಮೊದಲೇ ಇಸಿಜಿ ಮಾಡಿಸಿಕೊಂಡು ಬಂದಿದ್ದರು. ಅವರು ಆಸ್ಪತ್ರೆಗೆ ಬರುವಷ್ಟರಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆContinue reading “ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ”

ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು

ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು | ಹೀಗಿದೆ ಪ್ರಕ್ರಿಯೆರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಅಥವಾ ಹೆಸರು ತಿದ್ದುಪಡಿಯನ್ನು ನಿಮ್ಮ ಸ್ಮಾರ್ಟ್‌ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ಮಾಡಬಹುದಾಗಿದೆ.ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್‌ಲೈನ್ ಸಹಾಯದಿಂದ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು ಹಾಗೂ ಹೆಸರು ತಿದ್ದುಪಡಿ ಮಾಡಬಹುದು.ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದContinue reading “ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು”

ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ online ಕಾರ್ಯಕ್ರಮ

ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮದ online live streaming link ಈ ಕಾರ್ಯಕ್ರಮವು ನಾಳೆ ದಿನಾಂಕ 05.09.2021 ರಂದು ಬೆಳಿಗ್ಗೆ 10.30 ಕ್ಕೆ ನೇರಪ್ರಸಾರವಾಗಲಿದೆ. ಲಿಂಕ್ ಬಳಸಿ ರೈತರು ತಮ್ಮ ಮನೆಗಳಿಂದಲೇ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ. https://youtube.com/channel/UCc_FfAZF6jmbMP2LPBcqMBA/live

ಕೊರೊನಾ ಭೀತಿ : ಆಗಸ್ಟ್ 15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗಿದ್ದು, ಶ್ರಾವಣ ಮಾಸದ ಸೋಮವಾರ ಮತ್ತು ಭೀಮನ ಅಮಾವಾಸ್ಯೆ ದಿನ ಜನ ದೇವಸ್ಥಾನಗಳಿಗೆ ಲಗ್ಗೆ ಇಟ್ಟಿದ್ದರು. ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.ರಾಜ್ಯದಲ್ಲಿ ಕೊರೊನಾContinue reading “ಕೊರೊನಾ ಭೀತಿ : ಆಗಸ್ಟ್ 15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್”