ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಜೂನ್ 14 ರಿಂದ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಆದೇಶ ಮುಂದುವರಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಉಸ್ತುವಾರಿ ಸಚಿವರ ಜೊತೆಗಿನ ಸಭೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಲಾಕ್ಡೌನ್ ಆದೇಶದಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂದು ಹೇಳಿದ್ದಾರೆ.Continue reading “11 ಜಿಲ್ಲೆಗಳಲ್ಲಿ ‘ಲಾಕ್ ಡೌನ್’ ಮುಂದುವರಿಸಲು ಸಿಎಂ ಯಡಿಯೂರಪ್ಪ ಘೋಷಣೆ”
Tag Archives: ರಾಜ್ಯ
ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ
ಬೆಂಗಳೂರು, ಜೂ.10: ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸುವ ಕುರಿತಂತೆ ಇಂದು(ಜೂ.10) ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. ಈ ವೇಳೆContinue reading “ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ”
ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್
ಭಾರತದ ಅತ್ಯಂತ ಕುರೂಪಿ ಭಾಷೆ’ ಎಂದು ಗೂಗಲ್‌ನಲ್ಲಿ ಟೈಪಿಸಿ ಸರ್ಚ್ ಮಾಡಿದರೆ ಮೊದಲು ಎದುರಾಗುವುದು ‘ಕನ್ನಡ’. ಕನ್ನಡಿಗರ ಸ್ವಾಭಿಮಾನ, ಭಾಷೆ, ನೆಲ, ಜಲದ ಕುರಿತಂತೆ ಪದೇ ಪದೇ ಕೆಣಕುವ ಪ್ರಯತ್ನಗಳು ನಡೆಯುತ್ತಲೇ ಇದೆ. ಅದಕ್ಕೆ ಇನ್ನೊಂದು ಸೇರ್ಪಡೆ ಇದು. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಕನ್ನಡ ಪ್ರೇಮಿಗಳು ಚರ್ಚೆ ನಡೆಸುತ್ತಿದ್ದರು. Ugliest Language In India (ಭಾರತದ ಅತ್ಯಂತ ಕುರೂಪಿ ಭಾಷೆ) ಎಂದು ಟೈಪ್ ಮಾಡಿದರೆ ಗೂಗಲ್ ಮೊದಲು ಪ್ರದರ್ಶಿಸುವುದು debtconsolidationsquad.com ಎಂಬ ಜಾಲತಾಣವೊಂದರಲ್ಲಿ ಪ್ರಕಟವಾದ ಅಂಶವನ್ನು. ದಕ್ಷಿಣ ಭಾರತದಲ್ಲಿ ಸುಮಾರುContinue reading “ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್”
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಸರ್ವತೋಮುಖ ಅಭಿವೃದ್ಧಿಗೆ, 2021-22 ನೇ ಆರ್ಥಿಕ ವರ್ಷದಲ್ಲಿ ಒಟ್ಟು 369.00 ಕೋಟಿ ರೂಪಾಯಿ ಕೇಂದ್ರ ಸರಕಾರದಿಂದ ಮಂಜೂರು- ಶೋಭಾ ಕರಂದ್ಲಾಜೆ.
2021-22ನೇ ಆರ್ಥಿಕ ವರ್ಷದಲ್ಲಿಉಡುಪಿ-ಚಿಕ್ಕಮಗಳೂರು ಕ್ಷೇತ್ರದ;ರಾಷ್ಟ್ರೀಯ ಹೆದ್ದಾರಿ 169A ಯ ಹೆಬ್ರಿ-ಪರ್ಕಳ ರಸ್ತೆ, ಕರಾವಳಿ ಜಂಕ್ಷನ್-ಮಲ್ಪೆ ಸಂಪರ್ಕಿಸುವ ರಸ್ತೆಗಳನ್ನು ಚತುಷ್ಪಥೀಕರಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಹಾಗೂ ಒಟ್ಟು 29.1 ಕಿ ಮೀ ಉದ್ದದ ಕಾಮಗರಿಗಳಿಗೆ ಭೂ ಸಾರಿಗೆ ಸಚಿವಾಲಯ ಅಂದಾಜು ಮೊತ್ತ 350.00 ಕೋಟಿ ರೂಪಾಯಿಗಳ ಅನುದಾನ ಮಂಜೂರು ಮಾಡಿ ಕಾಮಗಾರಿಗಳಿಗೆ ಅನುಮೋದನೆ ನೀಡಿದೆ.ರಾಷ್ಟ್ರೀಯ ಹೆದ್ದಾರಿ 169A ಸೀತಾನದಿ ಬಳಿಯಲ್ಲಿ ಮಳೆಗಾಲದ ಸಮಯದಲ್ಲಿ ಉಂಟಾಗುವ ತೊಂದರೆಗಳನ್ನು ಸರಿಪಡಿಸಲು, ತಡೆಗೋಡೆ ನಿರ್ಮಾಣ, ರಸ್ತೆ ಎತ್ತರಿಸುವುದು ಮತ್ತು ರಾಷ್ಟ್ರೀಯ ಹೆದ್ದಾರಿ 169ರContinue reading “ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಸರ್ವತೋಮುಖ ಅಭಿವೃದ್ಧಿಗೆ, 2021-22 ನೇ ಆರ್ಥಿಕ ವರ್ಷದಲ್ಲಿ ಒಟ್ಟು 369.00 ಕೋಟಿ ರೂಪಾಯಿ ಕೇಂದ್ರ ಸರಕಾರದಿಂದ ಮಂಜೂರು- ಶೋಭಾ ಕರಂದ್ಲಾಜೆ.”
ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್ ಅಭಿನಂದನೆ
ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಆದಿ ಉಡುಪಿಯಿಂದ ಮಲ್ಪೆ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಕೇಂದ್ರ ಹಸಿರು ನಿಶಾನೆ ತೋರಿಸಿದ್ದು, ಈ ಹೆದ್ದಾರಿ ಹಾದು ಹೋಗುವ ಪರ್ಕಳದಿಂದ ಹಿರಿಯಡ್ಕ ವರೆಗೆ ಚತುಷ್ಪಥ ಹಾಗೂ ಹಿರಿಯಡ್ಕದಿಂದ ಹೆಬ್ರಿ ವರೆಗೆ ದ್ವಿಪಥವಾಗಿ ಅಭಿವೃದ್ಧಿ ಪಡಿಸಲು ಒಟ್ಟು ರೂ. 350.00 ಕೋಟಿ ಅನುದಾನಕ್ಕೆ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಅನುಮೋದನೆ ನೀಡಲಾಗಿದೆ ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169A ಹೆದ್ದಾರಿಯ ಮಲ್ಪೆಯಿಂದ ಹೆಬ್ರಿವರೆಗೆContinue reading “ಆದಿ ಉಡುಪಿ – ಮಲ್ಪೆ ಚತುಷ್ಪಥವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಹಸಿರು ನಿಶಾನೆ – ಶಾಸಕ ರಘುಪತಿ ಭಟ್ ಅಭಿನಂದನೆ”
ಕೋವಿಡ್ ಸಂಕಷ್ಟದ ಹಿನ್ನೆಲೆ ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶContinue reading “ಕೋವಿಡ್ ಸಂಕಷ್ಟದ ಹಿನ್ನೆಲೆ ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ”
ರಾಜ್ಯದ ಜನತೆಗೆ ಸಿಎಂ ಬಿಎಸ್ ವೈ ಭರ್ಜರಿ ಗುಡ್ ನ್ಯೂಸ್ : 1,250 ಕೋಟಿ ರೂ. ಪರಿಹಾರ ಘೋಷಣೆ! ಯಾರಿಗೆ ಎಷ್ಟು ಪರಿಹಾರ? ಇಲ್ಲಿದೆ ಫುಲ್ ಡಿಟೇಲ್ಸ್
ಬೆಂಗಳೂರು : ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 1,250 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಕುರಿತಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಹಿರಿಯ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, 1250 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಹೂವು ಬೆಳಗಾರರಿಗೆ ಪ್ರತಿ ಹೆಕ್ಟರ್ ಹೂ ಹಾನಿಗೆ 10 ಸಾವಿರ ಸಹಾಯಧನ, ಹಣ್ಣುContinue reading “ರಾಜ್ಯದ ಜನತೆಗೆ ಸಿಎಂ ಬಿಎಸ್ ವೈ ಭರ್ಜರಿ ಗುಡ್ ನ್ಯೂಸ್ : 1,250 ಕೋಟಿ ರೂ. ಪರಿಹಾರ ಘೋಷಣೆ! ಯಾರಿಗೆ ಎಷ್ಟು ಪರಿಹಾರ? ಇಲ್ಲಿದೆ ಫುಲ್ ಡಿಟೇಲ್ಸ್”
ಕೊರೋನಾ ಸೋಂಕು ಲಕ್ಷಣ ಇದ್ದವರಿಗೆ ಟೆಸ್ಟ್ ವೇಳೆಯೇ ಔಷಧ ನೀಡುವಂತೆ ಆದೇಶ ಜಾರಿಗೊಳಿಸಿದ ಆರೋಗ್ಯ ಇಲಾಖೆ
ಬೆಂಗಳೂರು: ಕೊರೋನಾ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಪ್ರಾಥಮಿಕ ಸಂಪರ್ಕಿತರಿಗೆ ಆರ್‌ಟಿ-ಪಿಸಿಆರ್ ಸೋಂಕು ಪರೀಕ್ಷೆಗೆ ಒಳಪಟ್ಟ ಸಮಯದಿಂದಲೇ ಕೆಲವು ಮಾತ್ರೆಗಳನ್ನು ನೀಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಶೇ.30ಕ್ಕೂ ಅಧಿಕವಿದೆ. ಪರೀಕ್ಷೆಗೊಳಪಡುವ ಪ್ರತಿ ಮೂವರಲ್ಲಿ ಒಬ್ಬರಿಗೆ ಸೋಂಕು ದೃಢಪಡುತ್ತಿದೆ. ಹೀಗಾಗಿ, ಕೊರೊನಾ ಸೋಂಕು ನಿಯಂತ್ರಣ ತಜ್ಞರ ಸಮಿತಿ ಶಿಫಾರಸ್ಸಿನ ಮೇರೆಗೆ ಸೋಂಕು ಪರೀಕ್ಷೆಗೆ ಬಂದವರ ಪೈಕಿ ಸೋಂಕು ಲಕ್ಷಣ ಹೊಂದಿದವರಿಗೆ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದವರಿಗೆ ಸ್ಥಳದಲ್ಲಿಯೇ ಕೆಲ ಮಾತ್ರೆContinue reading “ಕೊರೋನಾ ಸೋಂಕು ಲಕ್ಷಣ ಇದ್ದವರಿಗೆ ಟೆಸ್ಟ್ ವೇಳೆಯೇ ಔಷಧ ನೀಡುವಂತೆ ಆದೇಶ ಜಾರಿಗೊಳಿಸಿದ ಆರೋಗ್ಯ ಇಲಾಖೆ”
ರಾಜ್ಯದಲ್ಲಿ ‘ಬ್ರಿಟನ್ ವೈರಸ್’ ಹೆಚ್ಚಳ ಹಿನ್ನಲೆ : ವೈರಸ್ ಹೆಚ್ಚಿರುವ ಜಿಲ್ಲೆಗಳಲ್ಲಿ ‘ಮತ್ತೆ ಲಾಕ್ ಡೌನ್’ ಸುಳಿವು ನೀಡಿದ ಸಚಿವರು
ಬೆಂಗಳೂರು : ರಾಜ್ಯದಲ್ಲಿ ಬ್ರಿಟನ್ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚು ಹೆಚ್ಚು ಗೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಕರ್ಪ್ಯೂ ಜಾರಿಗೊಳಿಸುವಂತ ಅಗತ್ಯವಿಲ್ಲ ಅಂತ ಹೇಳಿದ್ದಾರೆ. ಇದರ ಮಧ್ಯೆ ಕಂದಾಯ ಸಚಿವ ಆರ್.ಅಶೋಕ್ ಅವರು, ಬ್ರಿಟನ್ ರೂಪಾಂತರ ವೈರಸ್ ಸೋಂಕಿನ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದರಿಂದ ಸಂಪೂರ್ಣ ಲಾಕ್ ಡೌನ್ ಜಾರಿಯ ಅಗತ್ಯವಿಲ್ಲ. ಆದ್ರೇ, ಸೋಂಕಿನ ಪ್ರಕರಣಗಳು ಪತ್ತೆಯಾಗಿರುವಂತ ಜಿಲ್ಲೆಗಳಲ್ಲಿ ಮಾತ್ರವೇ ಲಾಕ್ ಡೌನ್ ಜಾರಿಗೊಳಿಸಿದ್ರೆ ಉತ್ತಮ ಎನ್ನಲಾಗುತ್ತಿದೆ. ಆ ಬಗ್ಗೆ ಸಿಎಂ ಜೊತೆಗೆContinue reading “ರಾಜ್ಯದಲ್ಲಿ ‘ಬ್ರಿಟನ್ ವೈರಸ್’ ಹೆಚ್ಚಳ ಹಿನ್ನಲೆ : ವೈರಸ್ ಹೆಚ್ಚಿರುವ ಜಿಲ್ಲೆಗಳಲ್ಲಿ ‘ಮತ್ತೆ ಲಾಕ್ ಡೌನ್’ ಸುಳಿವು ನೀಡಿದ ಸಚಿವರು”
ರಾಜಧಾನಿಗೆ ಕಾಲಿಟ್ಟ `ರೂಪಾಂತರಿ’ ಕೊರೊನಾ ವೈರಸ್ : ಬೆಂಗಳೂರಿನ ‘ಮೂವರಿಗೆ ಸೋಂಕು’ ದೃಢ
ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿರುವ ರೂಪಾಂತರಿ ಕೊರೊನಾ ವೈರಸ್ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಹಾಗೂ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನ ಉತ್ತರಹಳ್ಳಿ ಹಾಗೂ ರಾಜಾಜಿನಗರದ ಒಟ್ಟು ಮೂವರಿಗೆ ಸೋಂಕು ದೃಢಪಟ್ಟಿದೆ. ಇನ್ನು ಇವರಲ್ಲಿ ಇಬ್ಬರು ತಾಯಿ ಮಗಳು ಅಂತಾContinue reading “ರಾಜಧಾನಿಗೆ ಕಾಲಿಟ್ಟ `ರೂಪಾಂತರಿ’ ಕೊರೊನಾ ವೈರಸ್ : ಬೆಂಗಳೂರಿನ ‘ಮೂವರಿಗೆ ಸೋಂಕು’ ದೃಢ”