Design a site like this with WordPress.com
Get started

ನಾಳೆ ಆಗಸ್ಟ್ 7ರಂದು ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕಾರ

ನಾಳೆ ಆಗಸ್ಟ್ 7, 2021 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ನೂತನ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ರವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ಬಂಧುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ

ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿಯವರು ಕಲಾರಂಗಕ್ಕೆ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ವೈದ್ಯವಿಜ್ಞಾನಿ ಡಾ! ರಾಜಾ ವಿಜಯ್ ಕುಮಾರ್ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಶಾಲು-ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ವಿವರಿಸಿದರು. ಇದಕ್ಕೂ ಮೊದಲು ಉಭಯರು ಸಂಸ್ಥೆಯ ಸಾಧನೆಯನ್ನು ಒಳಗೊಂಡಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಸಂಸ್ಥೆಯ ವ್ಯಾಪಕವಾದ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿ ಸಾಮಾಜಿಮುಖಿಯಾಗಿContinue reading “ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ”

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೇಶದ್ರೋಹಕ್ಕೆ ಸಹಾಯ ಮಾಡಿದ ಬಗ್ಗೆ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ರಾಧಾಕೃಷ್ಣ ನಾಯಕ್ ಹಿರ್ಗಾನ ಎಂಬವರು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಯೋಧರ ಬಗ್ಗೆ ಅವಹೇಳನಕಾರಿ ಮತ್ತು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಬೆಂಬಲಿಸಿ ಭಾರತ ದೇಶಕ್ಕೆ ಕೆಡುಕು ಉಂಟುಮಾಡುವ ಸಂದೇಶವನ್ನು ಬಿತ್ತರಿಸಿರುವಂತೆ ಈ ಬಗ್ಗೆ ಅವರ ವಿರುದ್ಧ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಟ್ವೀಟರ್ ಖಾತೆಯಲ್ಲಿ ದೇಶದ್ರೋಹಿ ರಾಧಾಕೃಷ್ಣ ನಾಯಕ್ ನಿಗೆ ಬೆಂಬಲ ಸೂಚಿಸಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಈ ಬಗ್ಗೆ ಓರ್ವ ದೇಶದ್ರೋಹಿಯ ದೇಶದ್ರೋಹContinue reading “ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೇಶದ್ರೋಹಕ್ಕೆ ಸಹಾಯ ಮಾಡಿದ ಬಗ್ಗೆ ಪ್ರಕರಣ ದಾಖಲಿಸುವಂತೆ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು”

ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದೇಶದ ಭವ್ಯ ಸಂಸ್ಕೃತಿಯ ಪ್ರತೀಕವಾಗಿರುವ ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಖ್ಯಾತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ವಿಶ್ವದಾದ್ಯಂತ ಆಚರಿಸುವುದು ಭಾರತೀಯರಿಗೆ ಹೆಮ್ಮೆಯ ವಿಚಾರ. ಯೋಗಾಭ್ಯಾಸ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ಎಲ್ಲರ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಉಡುಪಿContinue reading “ಯೋಗ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರಲಿ : ಕುಯಿಲಾಡಿ ಸುರೇಶ್ ನಾಯಕ್”

ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:

ಕೋವಿಡ್-19 ಹೆಲ್ಪ್ ಡೆಸ್ಕ್ ಅಂಬಲಪಾಡಿ ವತಿಯಿಂದ ಅಂಬಲಪಾಡಿ ನಗರ, ಅಂಬಲಪಾಡಿ ಗ್ರಾಮಾಂತರ, ಕಪ್ಪೆಟ್ಟು ಮತ್ತು ಮೂಡನಿಡಂಬೂರು ಪ್ರದೇಶದ ಆಶಾ ಕಾರ್ಯಕರ್ತೆಯರಿಗೆ ದಾನಿಗಳು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್ ಗಳನ್ನು ಅಂಬಲಪಾಡಿ ಯುವಕ ಮಂಡಲ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಸಹಾಯಕ ಉಪ ನಿರೀಕ್ಷಕ ಜಯಕರ್ ಐರೋಡಿ, ದಾನಿಗಳಾದ ಬಾಳಿಗಾ ಫಿಶ್ ನೆಟ್ಸ್ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಶೈಲಜಾ ಚಂದ್ರಶೇಖರ್, ಯುವಕ ಮಂಡಲ ಅಧ್ಯಕ್ಷ ಹರೀಶ್ ಪಾಲನ್, ಗೌರವಾಧ್ಯಕ್ಷ ಕೀರ್ತಿ ಶೆಟ್ಟಿ,Continue reading “ಕೋವಿಡ್ ಹೆಲ್ಪ್ ಡೆಸ್ಕ್ ಅಂಬಲಪಾಡಿ: ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ:”