ಉಡುಪಿ : ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಈ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರುContinue reading “ಮಹಾತ್ಮ ಗಾಂಧಿ ಚಿಂತನೆಯ ಖಾದಿ ಉತ್ಪನ್ನ ಬಳಸಿ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ : ಕುಯಿಲಾಡಿ”
Tag Archives: ಸ್ಥಳೀಯ ಸುದ್ದಿಗಳು
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಸಭೆ
ಕಾಪು ಬಿಜೆಪಿ ಕಚೇರಿಯಲ್ಲಿ ಇಂದು ಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಪ್ರಮುಖರ ಸಭೆ ನಡೆಯಿತು. ಮೋದೀಜಿ ಜನ್ಮದಿನದಿಂದ ಅ.07 ರ ವರೆಗಿನ *ಸೇವೆ ಮತ್ತು ಸಮರ್ಪಣೆ* ಕಾರ್ಯಕ್ರಮದ ಕುರಿತಂತೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿಸ್ತ್ರತವಾಗಿ ಮಾಹಿತಿ ನೀಡಿದರು. ಎಲ್ಲ ಶಕ್ತಿಕೇಂದ್ರ ಪ್ರಮುಖರು ಮಹಾಶಕ್ತಿಕೇಂದ್ರ ಪ್ರಮುಖರೊಡನೆ ನಿರಂತರ ಸಂಪರ್ಕದಲ್ಲಿದ್ದು ಪ್ರತಿಯೊಂದು ಕಾರ್ಯಕ್ರಮವನ್ನೂ ಬೂತ್ ಮಟ್ಟದಲ್ಲಿಯೂ ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು. ಗಾಂಧಿ ಜಯಂತಿಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಉಪಾಧ್ಯಕ್ಷರೂ ಕಾರ್ಯಕ್ರಮದ ಜಿಲ್ಲಾ ಸಂಚಾಲಕರೂ ಆದ ಸುಪ್ರಸಾದ್ ಶೆಟ್ಟಿ ವಿವರಿಸಿದರು. ಪರಿಸರ ಸಂಬಂಧಿತContinue reading “ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಸಭೆ”
ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ: ಸೇವೆ ಮತ್ತು ಸಮರ್ಪಣ ಅಭಿಯಾನ
ಕಾರ್ಕಳ :ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಸಲುವಾಗಿ ಬಿಜೆಪಿ ಮಹಿಳಾ ಮೋರ್ಚಾ ಮತ್ತು ಕುಕ್ಕುಂದೂರು ಮಹಾ ಶಕ್ತಿ ಕೇಂದ್ರದ ವತಿಯಿಂದ ಕೌಡೂರು ಗ್ರಾಮದ ವಿಕಲಚೇತನ ಮಕ್ಕಳಾದ ಅಕ್ಷಯ್ ಹಾಗೂ ಆದಿತ್ಯರವರ ನಿವಾಸಕ್ಕೆ ತೆರಳಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಜೊತೆಗೆ ಆರ್ಥಿಕ ನೆರವು ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ, ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಅಧ್ಯಕ್ಷೆContinue reading “ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ: ಸೇವೆ ಮತ್ತು ಸಮರ್ಪಣ ಅಭಿಯಾನ”
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಪು ಕ್ಷೇತ್ರದ ಕಾಜರಗುತ್ತಿನ ಸುಬ್ರಹ್ಮಣ್ಯ ಕಾಮತ್ ಮತ್ತು ಸುಪ್ರೀತ ಕಾಮತ್ ಇವರಿಗೆ ಕಾಪು ಬಿಜೆಪಿ ವತಿಯಿಂದ ಸನ್ಮಾನ
ಇತ್ತೀಚೆಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಪು ಕ್ಷೇತ್ರದ ಉಡುಪಿ ತಾಲೂಕಿನ ಕಾಜರಗುತ್ತಿನ ರಘುನಾಥ ಕಾಮತ್ ಮತ್ತು ರಾಧಿಕಾ ಕಾಮತ್ ಇವರ ಮಕ್ಕಳಾದ ಸುಬ್ರಹ್ಮಣ್ಯ ಕಾಮತ್ ಮತ್ತು ಸುಪ್ರೀತ ಕಾಮತ್ ಇವರಿಗೆ ಕಾಪು ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಗೌರವಾರ್ಪಣೆ ಸಲ್ಲಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ ನಿಮ್ಮನ್ನು ಗುರುತಿಸಿ ಗೌರವಾರ್ಪಣೆ ಮಾಡಿರುವುದು ನಿಮ್ಮ ಸಾಧನೆಗೆ ಅಭಿನಂದನೆ ಸಲ್ಲಿಸಲು ಇತರರಿಗೆ ಪ್ರೇರಣೆಯಾಗಿ ಮತ್ತಷ್ಟು ಜನ ಇದೇContinue reading “ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾಪು ಕ್ಷೇತ್ರದ ಕಾಜರಗುತ್ತಿನ ಸುಬ್ರಹ್ಮಣ್ಯ ಕಾಮತ್ ಮತ್ತು ಸುಪ್ರೀತ ಕಾಮತ್ ಇವರಿಗೆ ಕಾಪು ಬಿಜೆಪಿ ವತಿಯಿಂದ ಸನ್ಮಾನ”
ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ
ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರಿಗೆ ಸಮಾನ ಗೌರವ – ಶ್ರೀಕಾಂತ ನಾಯಕ್ ಪಡುಬಿದ್ರೆ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಇಂದು ಪಡುಬಿದ್ರೆ ಉದಯಾದ್ರಿಯಲ್ಲಿ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಿಗೂ ರಾಷ್ಟ್ರೀಯ ಅಧ್ಯಕ್ಷರಿಗೂ ಸಮಾನ ಗೌರವವಿದ್ದು ಅದನ್ನು ಬೂತ್ ಅಧ್ಯಕ್ಷರು ಅರ್ಥ ಮಾಡಿಕೊಂಡು ಪ್ರತೀ ಬೂತ್ ನಲ್ಲಿ ಅಧ್ಯಕ್ಷರುಗಳು ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ನಾಮಫಲಕ ಅಳವಡಿಸುವ ಸಂದರ್ಭದಲ್ಲಿ ಪ್ರತೀ ಬೂತ್ ಅಧ್ಯಕ್ಷರ ಮನೆಯಲ್ಲಿ ಕನಿಷ್ಠContinue reading “ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ ಪಡುಬಿದ್ರೆ ಬಿಜೆಪಿ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶ“
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ
ಉಡುಪಿ :ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಹಾಗೂ ಕಾಪು ಮಂಡಲ ಅಲ್ಪಸಂಖ್ಯಾತ ಮೋರ್ಚಾ ಇದರ ಜಂಟಿ ಆಶ್ರಯದಲ್ಲಿ ಅಲ್ಪಸಂಖ್ಯಾತರಿಗೆ ಸರಕಾರದಿಂದ ಲಭ್ಯವಿರುವ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ಶಿಬಿರವು ಸೆ.14ರಂದು ಮಹಿಳಾ ಮಂಡಲ ಕಟಪಾಡಿ ಇದರ ಸಭಾಂಗಣದಲ್ಲಿ ಜರಗಿತು. ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಹಾಗೂ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ದಾವೂದ್ ಅಬೂಬಕ್ಕರ್ ಜತೆಯಾಗಿ ಜ್ಯೋತಿ ಬೆಳಗಿಸುವುದರ ಮೂಲಕ ಮಾಹಿತಿ ಶಿಬಿರವನ್ನು ಉದ್ಘಾಟಿಸಿದರು. ಪ್ರಾಸ್ತಾವಿಕ ಮಾತನಾಡಿದ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ದಾವೂದ್Continue reading “ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಸರಕಾರದ ಸವಲತ್ತುಗಳ ಬಗ್ಗೆ ಮಾಹಿತಿ ಕಾರ್ಯಾಗಾರ”
ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ : ಯಾವುದಕ್ಕೆಲ್ಲಾ ಅನುಮತಿ ಇದೆ ಗಮನಿಸಿ
ಉಡುಪಿ:ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳ ಮಧ್ಯೆ, ಉಡುಪಿಯಲ್ಲಿ ಎರಡು ದಿನಗಳ ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದೆ. ಇಂದಿನ ಆದೇಶಗಳ ಪ್ರಕಾರ, ರಾತ್ರಿ ಕರ್ಫ್ಯೂ ಎಲ್ಲಾ ದಿನಗಳಲ್ಲೂ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಕಾರ್ಯನಿರ್ವಹಿಸುತ್ತದೆ ಮತ್ತು ವಾರಾಂತ್ಯ ಕರ್ಫ್ಯೂಗಳು ಶುಕ್ರವಾರದಂದು ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 5 ರವರೆಗೆ ಇರುತ್ತದೆ. ಪಬ್‌ಗಳು ಮುಚ್ಚಿರುತ್ತವೆ. ಕೋವಿಡ್ ಪ್ರೋಟೋಕಾಲ್ ಹೊಂದಿರುವ ಕ್ರೀಡಾಪಟುಗಳಿಗೆ ಕ್ರೀಡಾಂಗಣಗಳು ಮತ್ತು ಈಜುಕೊಳಗಳನ್ನು ತೆರೆಯಲು ಅನುಮತಿಸಲಾಗುತ್ತದೆ ಆದರೆ ಪ್ರೇಕ್ಷಕರನ್ನು ಅನುಮತಿಸಲಾಗುವುದಿಲ್ಲ. 100% ಆಸನ ಸಾಮರ್ಥ್ಯದೊಂದಿಗೆContinue reading “ಉಡುಪಿಯಲ್ಲಿ ವಾರಾಂತ್ಯ ಕರ್ಫ್ಯೂ : ಯಾವುದಕ್ಕೆಲ್ಲಾ ಅನುಮತಿ ಇದೆ ಗಮನಿಸಿ”
ಆಗಸ್ಟ್ 18-19: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, ಉಡುಪಿ ಪುರಭವನದಲ್ಲಿ ಸಮಾಗಮ – ಜಿಲ್ಲಾ ಬಿಜೆಪಿ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಸರಕಾರದ ವಿವಿಧ ಜನಪರ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಜನಾಶೀರ್ವಾದ ಯಾತ್ರೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ 25 ಕಂದಾಯ ಜಿಲ್ಲೆಗಳಲ್ಲಿContinue reading “ಆಗಸ್ಟ್ 18-19: ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಗೆ ಹೆಬ್ರಿಯಲ್ಲಿ ಸ್ವಾಗತ, ಉಡುಪಿ ಪುರಭವನದಲ್ಲಿ ಸಮಾಗಮ – ಜಿಲ್ಲಾ ಬಿಜೆಪಿ.”
ನಾಳೆ ಆಗಸ್ಟ್ 7ರಂದು ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಅಹವಾಲು ಸ್ವೀಕಾರ
ನಾಳೆ ಆಗಸ್ಟ್ 7, 2021 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ನೂತನ ಸಚಿವರಾದ ಶ್ರೀ ವಿ.ಸುನೀಲ್ ಕುಮಾರ್ ರವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕ ಬಂಧುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ
ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿಯವರು ಕಲಾರಂಗಕ್ಕೆ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬೆಂಗಳೂರಿನ ವೈದ್ಯವಿಜ್ಞಾನಿ ಡಾ! ರಾಜಾ ವಿಜಯ್ ಕುಮಾರ್ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಶಾಲು-ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ವಿವರಿಸಿದರು. ಇದಕ್ಕೂ ಮೊದಲು ಉಭಯರು ಸಂಸ್ಥೆಯ ಸಾಧನೆಯನ್ನು ಒಳಗೊಂಡಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಸಂಸ್ಥೆಯ ವ್ಯಾಪಕವಾದ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿ ಸಾಮಾಜಿಮುಖಿಯಾಗಿContinue reading “ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ”