Design a site like this with WordPress.com
Get started

ನಿಧನ

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಸ್ಥಾಪಕ ಸದಸ್ಯರಲ್ಲೊಬ್ಬರಾದ ದಿ! ಕೊರಗ ಪೂಜಾರಿ‌ಯವರ ಧರ್ಮಪತ್ನಿ‌ ಶ್ರೀಮತಿ ರಾಧು‌ ಪೂಜಾರ್ತಿಯವರು (91 ವರ್ಷ) ಮೇ 14ರ ರಾತ್ರಿ‌ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಕೃಷ್ಣ ಬಿ. ಪೂಜಾರಿ ಮೂಡುತೋನ್ಸೆ ನಿಧನ

ಕಲ್ಯಾಣಪುರ ಮೂಡುತೋನ್ಸೆ ಗ್ರಾಮದ ಉಗ್ಗೆಕುದ್ರು ಮೂಡುಬೆಟ್ಟು ನಿವಾಸಿ ಕೃಷ್ಣ ಬಿ. ಪೂಜಾರಿ (80 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ನ.11ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಮುಂಬೈನ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ವಾಹನ ಚಾಲಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೇಗೌಡರವರ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ

ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೇಗೌಡರವರು ರಾಜ್ಯಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಧೀಮಂತ ನಾಯಕರು. ಗ್ರಾಮ ಪಂಚಾಯತ್ ಮಟ್ಟದಿಂದ ಮೊದಲ್ಗೊಂಡು ಸಹಕಾರಿ ಕ್ಷೇತ್ರ ಸಹಿತ ರಾಜಕೀಯ ಕ್ಷೇತ್ರದ ವಿವಿಧ ಮಜಲುಗಳಲ್ಲಿ ಪಕ್ಷ ನಿಷ್ಠೆ ಮತ್ತು ಬದ್ಧತೆಯಿಂದ ಜನಸೇವೆಗೈದು ಯಶಸ್ಸಿನ ಉತ್ತುಂಗಕ್ಕೇರಿದ ಜನ ನಾಯಕರು. ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೆಗೌಡರವರ ಅಕಾಲಿಕ ಅಗಲುವಿಕೆಯು ರಾಜ್ಯಕ್ಕೆ ತುಂಬಲಾರದ ನಷ್ಟವೆನಿಸಿದೆ. ಅವರ ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಎಂಬ ಪ್ರಾರ್ಥನೆಯೊಂದಿಗೆ ಉಡುಪಿContinue reading “ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಸ್.ಎಲ್. ಧರ್ಮೇಗೌಡರವರ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ”

ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವಾರ್ಪಣೆ.

ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಚ್ಚುಗೆ ಪಡೆದ ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿರುವ ನವ ದಂಪತಿ ಅನುದೀಪ್ ಹೆಗ್ಡೆ ಮತ್ತು ಮಿನುಷಾ ಕಾಂಚನ್ ರವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಡುಪಿ ಅಜ್ಜರಕಾಡು ನಿವಾಸದಲ್ಲಿ ಬೇಟಿಯಾಗಿ ಆಭಿನಂದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾContinue reading “ಬೈಂದೂರಿನ ಸೋಮೇಶ್ವರ ಬೀಚ್ ಸ್ವಚ್ಛಗೊಳಿಸಿದ ನವ ದಂಪತಿಗಳಿಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಶ್ಲಾಘನೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವಾರ್ಪಣೆ.”

ಸಾರ್ವಜನಿಕವಾಗಿ ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿಲ್ಲ’- ಉಡುಪಿ ಜಿಲ್ಲಾಧಿಕಾರಿ

 “ಹೊಸ ವರ್ಷದಂದು ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿಲ್ಲ” ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಈ ಕುರಿತು ವೀಡಿಯೊವೊಂದರಲ್ಲಿ ಮಾಹಿತಿ ನೀಡಿದ ಅವರು “ರಾಜ್ಯ ಸರ್ಕಾರದ ಆದೇಶದ ಪ್ರಕಾರ ಹೊಸ ವರ್ಷದ ಆಚರಣೆಯ ಸಮಯದಲ್ಲಿ ಕೂಡ ಎಲ್ಲಾ ರೀತಿಯ ಕೊರೊನಾ ನಿಯಮಗಳನ್ನು ಪಾಲಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಸರ್ಕಾರ ಹೊರಡಿಸಿದ ವಿಶೇಷ ಮಾರ್ಗಸೂಚಿಗಳು ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ನಾಲ್ಕು ದಿನಗಳವರೆಗೆ ಅನ್ವಯಿಸುತ್ತವೆ” ಎಂದರು. ಇನ್ನು “ಈ ಸಮಯದಲ್ಲಿ ಯಾವುದೇ ಪಬ್,Continue reading “ಸಾರ್ವಜನಿಕವಾಗಿ ಹೊಸ ವರ್ಷ ಸಂಭ್ರಮಾಚರಣೆಗೆ ಅವಕಾಶವಿಲ್ಲ’- ಉಡುಪಿ ಜಿಲ್ಲಾಧಿಕಾರಿ”