ಸ್ಪೀಕರ್ ಖಾದರ್ ಮೆಚ್ಚಿಸಲು ಶಾಸಕರ ವಿರುದ್ಧ ಪ್ರಸಾದ್ ಕಾಂಚನ್ ಹತಾಶ ಹೇಳಿಕೆ : ದಿನೇಶ್ ಅಮೀನ್

ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಅಪ್ರಬುದ್ಧ ಹೇಳಿಕೆಯ ಮೂಲಕ ಪ್ರಸಾದ್ ಕಾಂಚನ್ ಇದೀಗ ಕಾಂಗ್ರೆಸ್ ಪಕ್ಷದಲ್ಲೇ ಮೂಲೆಗುಂಪಾಗಿದ್ದು, ಸದಾ ಶಾಸಕ ಯಶ್ಪಾಲ್ ಸುವರ್ಣರನ್ನು ಟೀಕಿಸುವ ಮೂಲಕ ಸ್ಪೀಕರ್ ಖಾದರ್ ರವರನ್ನು  ಮೆಚ್ಚಿಸಲು ಪ್ರಯತ್ನ ಮಾಡುತ್ತಿದ್ದು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಶಾಸಕರಿಗೆ ಬಿಟ್ಟಿ ಉಪದೇಶ ನೀಡುವ ಅಗತ್ಯವಿಲ್ಲ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ವ್ಯಂಗ್ಯವಾಡಿದ್ದಾರೆ. ಸದನದಲ್ಲಿ ಶಾಸಕರು ತನ್ನ ಕ್ಷೇತ್ರದ ಸಮಸ್ಯೆ ಬಗ್ಗೆ ಕೇವಲ 3 ನಿಮಿಷ ಮಾತ್ರ ಮಾತಾಡಿದ್ದು, 30 ಸೆಕೆಂಡ್ ಮಾತಾಡುವಾಗಲೇ ಸ್ಪೀಕರ್Continue reading “ಸ್ಪೀಕರ್ ಖಾದರ್ ಮೆಚ್ಚಿಸಲು ಶಾಸಕರ ವಿರುದ್ಧ ಪ್ರಸಾದ್ ಕಾಂಚನ್ ಹತಾಶ ಹೇಳಿಕೆ : ದಿನೇಶ್ ಅಮೀನ್”

‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ಅನುಮತಿ ಕೋರಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಕೆ

ಉಡುಪಿ: ಡಿ.23ರಂದು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಶ್ರೀ ವೀರ ವಿಠಲ ಸಭಾಭವನದಲ್ಲಿ ಹಮ್ಮಿಕೊಂಡಿರುವ ‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸದ್ರಿ ನಾಟಕ ಪ್ರದರ್ಶನವನ್ನು ವಿರೋಧಿಸಿ ದಸಂಸ ಜಿಲ್ಲಾ ನಾಯಕ ಜಯನ್ ಮಲ್ಪೆ ಅವರು ಆಕ್ಷೇಪಣೆ ಸಲ್ಲಿಸಿರುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದ್ದು, ಈ ಆಕ್ಷೇಪಣೆಗೆ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದ ಸಂಪೂರ್ಣ ವಿರೋಧ ಇರುತ್ತದೆ. ಈ ನಾಟಕದಲ್ಲಿContinue reading “‘ನಿಜ ಮಹಾತ್ಮ ಬಾಬಾ ಸಾಹೇಬ’ ನಾಟಕ ಪ್ರದರ್ಶನಕ್ಕೆ ಅನುಮತಿ ಕೋರಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಕೆ”

ಇತಿಹಾಸ ಪ್ರಸಿದ್ಧ ಉಡುಪಿ ಪರ್ಯಾಯಕ್ಕೆ ಅನುದಾನದ ಬೇಡಿಕೆಗೆ ಸ್ಪೀಕರ್ ಖಾದರ್ ಪೂರ್ವಾಗ್ರಹ ಪೀಡಿತ ಮನಸ್ಥಿತಿಯ ವರ್ತನೆ ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ‘ನಾಡ ಹಬ್ಬ ಮೈಸೂರು ದಸರಾ’ದಂತೆಯೇ ‘ಕರಾವಳಿ ಕರ್ನಾಟಕದ ನಾಡ ಹಬ್ಬ’ ಎಂದೆನಿಸಿರುವ ‘ಉಡುಪಿ ಪರ್ಯಾಯ’ಕ್ಕೆ ವಿಧಾನಸಭಾ ಅಧಿವೇಶನದಲ್ಲಿ ಅನುದಾನದ ಬೇಡಿಕೆ ಇಟ್ಟಿರುವ ಸ್ಥಳೀಯ ಶಾಸಕ ಯಶ್ಪಾಲ್ ಸುವರ್ಣ ಅವರ ಮಾತನ್ನು ಹಗುರವಾಗಿ ಪರಿಗಣಿಸಿ, ಹಿಂದೂ ಧರ್ಮದ ಅಸ್ಮಿತೆಯ ಭಾಗವಾದ ಹರಿಕಥೆಯನ್ನು ತಿರಸ್ಕಾರ ಭಾವದಿಂದ ಉಲ್ಲೇಖಸಿ ಸಮಸ್ತ ಹಿಂದೂಗಳ ಧಾರ್ಮಿಕ ಭಾವನೆಗೆ ಘಾಸಿಯನ್ನುoಟುಮಾಡಿರುವ ವಿಧಾನಸಭಾ ಸ್ಪೀಕರ್ ಅಬ್ದುಲ್ ಖಾದರ್ ಅವರ ರಾಜಕೀಯ ಪ್ರೇರಿತ ಕ್ಷುಲ್ಲಕ ವರ್ತನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್Continue reading “ಇತಿಹಾಸ ಪ್ರಸಿದ್ಧ ಉಡುಪಿ ಪರ್ಯಾಯಕ್ಕೆ ಅನುದಾನದ ಬೇಡಿಕೆಗೆ ಸ್ಪೀಕರ್ ಖಾದರ್ ಪೂರ್ವಾಗ್ರಹ ಪೀಡಿತ ಮನಸ್ಥಿತಿಯ ವರ್ತನೆ ಖಂಡನೀಯ : ಕುತ್ಯಾರು ನವೀನ್ ಶೆಟ್ಟಿ”

ನ.30 : ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’, ಜೋಡುಕಟ್ಟೆಯಿಂದ ‘ಕುಣಿತ ಭಜನೋತ್ಸವ’

ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ಗೀತಾ ಮಾಸೋತ್ಸವ’ದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಸಮಿತಿಯ ಸಹಯೋಗದೊಂದಿಗೆ ನ.30 ರವಿವಾರ ಬೆಳಿಗ್ಗೆ ಗಂಟೆ 9.30ರಿಂದ ಉಡುಪಿ ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’ ಹಾಗೂ ಮಧ್ಯಾಹ್ನ ಗಂಟೆ 2.30ರಿಂದ ಜೋಡುಕಟ್ಟೆಯಿಂದ ರಾಜಾoಗಣದ ವರೆಗೆ ‘ಕುಣಿತದ ಭಜನೋತ್ಸವ’ ನಡೆಯಲಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ತಿಳಿಸಿದ್ದಾರೆ. ನ.30ರ ಬೆಳಿಗ್ಗೆ ಗಂಟೆ 9.00ರಿಂದ ರಾಜಾoಗಣದಲ್ಲಿ ‘ಸಾಮೂಹಿಕ ಗೀತಾ ಪಾರಾಯಣ’ ನಡೆಯಲಿದೆ. ಬೆಳಿಗ್ಗೆ ಗಂಟೆ 10.00ಕ್ಕೆContinue reading “ನ.30 : ರಾಜಾoಗಣದಲ್ಲಿ ‘ಗೀತಾ ಭಜನೋತ್ಸವ’, ಜೋಡುಕಟ್ಟೆಯಿಂದ ‘ಕುಣಿತ ಭಜನೋತ್ಸವ’”

ನ.28ರ ‘ಲಕ್ಷ ಕಂಠ ಗೀತೋತ್ಸವ’ ಯಶಸ್ವಿಗೊಳಿಸಲು ನಾಗರಾಜ ಆಚಾರ್ಯ ಕರೆ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ‘ವಿಶ್ವ ಗೀತಾ ಪರ್ಯಾಯ’ದ ವಿಶಿಷ್ಟ ಕಾರ್ಯಕ್ರಮವಾಗಿ ನ.28ರಂದು ಉಡುಪಿ ರಾಜಾoಗಣದ ಪಾರ್ಕಿಂಗ್ ಸ್ಥಳದ ಬಳಿ ನಡೆಯಲಿರುವ ‘ಲಕ್ಷ ಕಂಠ ಗೀತೋತ್ಸವ’ದ ಐತಿಹಾಸಿಕ ಕಾರ್ಯಕ್ರಮದಲ್ಲಿ ವಿಶ್ವ ನಾಯಕ, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡು ಭಗವದ್ಗೀತೆಯ 15ನೇ ಅಧ್ಯಾಯವನ್ನು ನೆರೆದ ಎಲ್ಲರೊಂದಿಗೆ ಸಾಮೂಹಿಕ ಪಠಣ ಮಾಡಲಿದ್ದಾರೆ. ಈ ಅಪೂರ್ವ ಕ್ಷಣಗಳಲ್ಲಿ ಶ್ರೀ ಕೃಷ್ಣ ಭಕ್ತರು, ಸಮಸ್ತ ಭಜನಾ ಮಂಡಳಿಗಳ ಸದಸ್ಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಸಹಿತ ಜಿಲ್ಲೆಯContinue reading “ನ.28ರ ‘ಲಕ್ಷ ಕಂಠ ಗೀತೋತ್ಸವ’ ಯಶಸ್ವಿಗೊಳಿಸಲು ನಾಗರಾಜ ಆಚಾರ್ಯ ಕರೆ”

ನ. 28 : ಉಡುಪಿ ಬನ್ನಂಜೆಯಿಂದ ಕಲ್ಸoಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ನ.28 ಶುಕ್ರವಾರ ಬೆಳಿಗ್ಗೆ ಗಂಟೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ರೋಡ್ ಶೋ’ ಉಡುಪಿ-ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸoಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸoಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರುContinue reading “ನ. 28 : ಉಡುಪಿ ಬನ್ನಂಜೆಯಿಂದ ಕಲ್ಸoಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ‘ರೋಡ್ ಶೋ’ : ಕುತ್ಯಾರು ನವೀನ್ ಶೆಟ್ಟಿ”

ನ.14ರಂದು ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಮಾಲೋಚನಾ ಸಭೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಉಡುಪಿಯಲ್ಲಿ ನ.28ರಂದು ನಡೆಯುವ ‘ಲಕ್ಷ ಕಂಠ ಗೀತಾ ಪಾರಾಯಣ’ ಮತ್ತು ನ.30ರಂದು ನಡೆಯುವ ‘ಸಂತ ಸಂಗಮ’ ಮತ್ತು ‘ಭಜನೋತ್ಸವ’ದ ಪೂರ್ವಭಾವಿಯಾಗಿ ಉಡುಪಿ ತಾಲೂಕು ವ್ಯಾಪ್ತಿಯ ಸಮಸ್ತ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಭೆಯು ನ.14 ಶುಕ್ರವಾರ ಸಂಜೆ ಗಂಟೆ 4.00ಕ್ಕೆ ಉಡುಪಿ ಶ್ರೀ ಕೃಷ್ಣ ಮಠದ ‘ಕನಕ ಮಂಟಪ’ದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಮಠದ ದಿವಾನ ನಾಗರಾಜ ಆಚಾರ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷContinue reading “ನ.14ರಂದು ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳ ಸಮಾಲೋಚನಾ ಸಭೆ”

ನ.28ರ ಪ್ರಧಾನಿ ನರೇಂದ್ರ ಮೋದಿ ಶ್ರೀ ಕೃಷ್ಣ ಮಠ ಬೇಟಿ ಕಾರ್ಯಕ್ರಮ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ

ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಬನ್ನಂಜೆಯ ಡಾ! ವಿ.ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಕಲ್ಸoಕ ಜಂಕ್ಷನ್ ವರೆಗೆ ರೋಡ್ ಶೋ ಮೂಲಕ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ‘ಲಕ್ಷ ಕಂಠ ಗೀತೋತ್ಸವ’ದ ಸಾಮೂಹಿಕ ಭಗವದ್ಗೀತಾ ಪಠಣದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ಮಹಾ ಜನತೆಯ ಸಹಿತ ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಪಕ್ಷದ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನ.28ರ ಪ್ರಧಾನಿ ನರೇಂದ್ರ ಮೋದಿ ಶ್ರೀ ಕೃಷ್ಣ ಮಠ ಬೇಟಿ ಕಾರ್ಯಕ್ರಮ ಯಶಸ್ವಿಗೊಳಿಸಲು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ”

ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ : ಸಂಧ್ಯಾ ರಮೇಶ್

ಉಡುಪಿ: ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣವನ್ನು ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ತಿಳಿಸಿದ್ದಾರೆ. ಪ್ರಸಕ್ತ ಕಾಲಘಟ್ಟದಲ್ಲಿ ಸಮಾಜದಲ್ಲಿ ಹೆಚ್ಚುತ್ತಿರುವ ಇಂತಹ ಸಾಮಾಜಿಕ ಪಿಡುಗನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನಾತ್ಮಕ ಕಟ್ಟುನಿಟ್ಟಿನ ಕ್ರಮಗಳನ್ನು ಜರಗಿಸುತ್ತಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡೆ ಅಭಿನಂದನಾರ್ಹ ಎಂದು ಅವರು ತಿಳಿಸಿದ್ದಾರೆ.Continue reading “ಮಣಿಪಾಲದಲ್ಲಿ ನಡೆದ ಘಟನೆಯ ಬಗ್ಗೆ ಪೋಕ್ಸೊ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕ್ರಮ ಸ್ವಾಗತಾರ್ಹ : ಸಂಧ್ಯಾ ರಮೇಶ್”

ದೇಶದ ಹಿತಾಸಕ್ತಿಗೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಸಮರ್ಪಣಾ ಭಾವದ ಸೇವೆ ಸದಾ ಸ್ಮರಣೀಯ : ಕೆ. ಉದಯ ಕುಮಾರ್ ಶೆಟ್ಟಿ

ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ‘ಏಕತಾ ನಡಿಗೆ’ ಉಡುಪಿ: ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಜನತೆ ಸದಾ ನೆನಪಿಸಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಒಂದು ದೇಶ ಎಂಬ ಪರಿಕಲ್ಪನೆಯಡಿ ರಾಷ್ಟ್ರೀಯ ಏಕೀಕರಣದ ರೂವಾರಿಯಾಗಿ ದೇಶದ ಸಮಗ್ರತೆಗೆ ಸಮರ್ಪಣಾ ಭಾವದ ಸೇವೆ ಸಲ್ಲಿಸಿರುವ ಧೀಮಂತ ನಾಯಕ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜೀವನಾದರ್ಶ ಸದಾ ಸ್ಮರಣೀಯ ಎಂದು ಬಿಜೆಪಿContinue reading “ದೇಶದ ಹಿತಾಸಕ್ತಿಗೆ ಸರ್ದಾರ್ ವಲ್ಲಭ ಭಾಯಿ ಪಟೇಲ್ ಸಮರ್ಪಣಾ ಭಾವದ ಸೇವೆ ಸದಾ ಸ್ಮರಣೀಯ : ಕೆ. ಉದಯ ಕುಮಾರ್ ಶೆಟ್ಟಿ”

Design a site like this with WordPress.com
Get started