ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ನಡಿಗೆ’

ಉಡುಪಿ: ಭಾರತದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ, ರಾಷ್ಟ್ರೀಯ ಏಕೀಕರಣದ ರೂವಾರಿ, ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಬಾಯಿ ಪಠೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ನಗರದ ಸಹಯೋಗದೊಂದಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಏಕತಾ ನಡಿಗೆ’ಯು ಅ.31 ಶುಕ್ರವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿ ಕಲ್ಸಂಕ ರಾಜಾಂಗಣ ಪಾರ್ಕಿಂಗ್ ರಸ್ತೆಯ ಬಳಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಛೇರಿಯ ವರೆಗೆContinue reading “ಅ.31ರಂದು ಸರ್ದಾರ್ ವಲ್ಲಭಬಾಯಿ ಪಠೇಲ್ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಬಿಜೆಪಿ ವತಿಯಿಂದ ‘ಏಕತಾ ನಡಿಗೆ’”

ಅ.16 : ‘ಜಿಎಸ್ಟಿ ಸುಧಾರಣೆಗಳು’ ವಿಚಾರ ಸಂಕಿರಣ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯContinue reading “ಅ.16 : ‘ಜಿಎಸ್ಟಿ ಸುಧಾರಣೆಗಳು’ ವಿಚಾರ ಸಂಕಿರಣ”

ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ವಿಶ್ವದ ಅತಿ ದೊಡ್ಡ ಸೇವಾ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಸರನ್ನು ಪದೇ ಪದೇ ಜಪಿಸುತ್ತಾ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಂಡು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಪ್ರಿಯಾಂಕ ಖರ್ಗೆ ವರ್ತನೆ ಹಾಸ್ಯಸ್ಪದ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ರಾಷ್ಟ್ರ ಭಕ್ತಿಯ ಚಿಂತನೆಯೊಂದಿಗೆ ವ್ಯಕ್ತಿತ್ವ ನಿರ್ಮಾಣದ ಸತ್ಕಾರ್ಯದಲ್ಲಿ ತೊಡಗಿಸಿಕೊಂಡು ಹೆಮ್ಮರವಾಗಿ ಬೆಳೆದಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಮೂಲ್ಯ ಸೇವಾ ಕಾರ್ಯಗಳ ಕುರಿತು ಎಳ್ಳಷ್ಟೂ ಪರಿಜ್ಞಾನವಿಲ್ಲದ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಚಟುವಟಿಕೆಗಳ ಮೇಲೆContinue reading “ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಆರ್.ಎಸ್.ಎಸ್. ಹೆಸರನ್ನು ಜಪಿಸುತ್ತಿರುವ ಪ್ರಿಯಾಂಕ್ ಖರ್ಗೆ ವರ್ತನೆ ಹಾಸ್ಯಾಸ್ಪದ: ಕುತ್ಯಾರು ನವೀನ್ ಶೆಟ್ಟಿ”

ಅ.3 : ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’ವು ಅ.3 ಶುಕ್ರವಾರ ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಗುಂಡಿಬೈಲು-ಅಂಬಾಗಿಲು ರಸ್ತೆ, ಟಾಟಾ ಮೋಟರ್ಸ್ ಬಳಿ ಇರುವ ನಿವೇಶನದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಜಿಲ್ಲೆಯ ಸಂಸದರು, ಶಾಸಕರು ಮತ್ತು ಪಕ್ಷದContinue reading “ಅ.3 : ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ನೂತನ ಕಟ್ಟಡದ ‘ಭೂಮಿ ಪೂಜೆ’, ‘ಶಿಲಾನ್ಯಾಸ’ ಸಮಾರಂಭ ಮತ್ತು ‘ಕಾರ್ಯಕರ್ತರ ಸಮಾವೇಶ’”

‘ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಗೆದುಕೊಂಡ ಜಿಎಸ್ಟಿ ಸುಧಾರಣೆಯ ನಿರ್ಣಯ ವಿಶ್ವದಲ್ಲೇ ಅತ್ಯಂತ ತ್ವರಿತ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಭಾರತದ ಪ್ರಗತಿಗೆ ಇನ್ನಷ್ಟು ವೇಗ ನೀಡುವಲ್ಲಿ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ. ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೇರಿಕಾ ಭಾರತದ ಅಭಿವೃದ್ಧಿಯ ನಾಗಾಲೋಟವನ್ನು ಸಹಿಸದೆ ಭಾರತಕ್ಜೆ ಗರಿಷ್ಠ 50% ತೆರಿಗೆಯನ್ನು ವಿಧಿಸುವ ಮೂಲಕ ದೇಶದ ಅಭಿವೃದ್ಧಿಯ ವೇಗವನ್ನು ತಡೆಯಲು ಯತ್ನಿಸಿದರೂ, ಪ್ರಧಾನಿ ನರೇಂದ್ರ ಮೋದಿContinue reading “‘ವಿಕಸಿತ ಭಾರತಕ್ಕೆ ಜಿಎಸ್ಟಿ ಸುಧಾರಣೆಯ ಗರಿ’ – ಜಿಲ್ಲೆಯಾದ್ಯಂತ ಬಿಜೆಪಿ ಸಂಭ್ರಮಾಚರಣೆ : ಕುತ್ಯಾರು ನವೀನ್ ಶೆಟ್ಟಿ”

ಸೆ.01 ರ ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಉಡುಪಿ ಜಿಲ್ಲೆಯಿಂದ 15,000 ಮಂದಿ ಭಾಗಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ಉಡುಪಿ:  ಅಸಂಖ್ಯಾತ ಭಕ್ತರ ಧಾರ್ಮಿಕ ಶೃದ್ದಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ, ಪ್ರಕರಣದ ತನಿಖೆಯನ್ನು ಎನ್.ಐ.ಎ. ಗೆ ವಹಿಸಬೇಕು ಎಂಬ ಆಗ್ರಹದೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ನಡೆಯಲಿರುವ ರಾಜ್ಯ ಮಟ್ಟದ ‘ಧರ್ಮಸ್ಥಳ ಚಲೋ’ ಅಭಿಯಾನದಲ್ಲಿ ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಾದ್ಯಂತ ಸುಮಾರು 15,000ಕ್ಕೂ ಮಿಕ್ಕಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಭಕ್ತಾಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್Continue reading “ಸೆ.01 ರ ‘ಧರ್ಮಸ್ಥಳ ಚಲೋ’ ಅಭಿಯಾನಕ್ಕೆ ಉಡುಪಿ ಜಿಲ್ಲೆಯಿಂದ 15,000 ಮಂದಿ ಭಾಗಿ: ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”

ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ : ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಅಸಂಖ್ಯಾತ ಭಕ್ತರ ಶೃದ್ದಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿರಂತರ ನಡೆಯುತ್ತಿರುವ ಅಪಪ್ರಚಾರಗಳು ವ್ಯವಸ್ಥಿತ ಷಡ್ಯಂತ್ರ ಎಂಬ ಅಂಶ ಬಟ್ಟಾಬಯಲಾಗಿದೆ. ಶಬರಿಮಲೆ, ತಿರುಪತಿ, ಇಶಾ ಫೌಂಡೇಶನ್ ಬಳಿಕ ಇದೀಗ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫಲಗೊಳಿಸಿ ಹಿಂದೂಗಳ ಶೃದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ, ಉಡುಪಿ ಜಿಲ್ಲೆಯಾದ್ಯoತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಮಂಡಲಗಳ ವ್ಯಾಪ್ತಿಯಲ್ಲಿContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ : ಕುತ್ಯಾರು ನವೀನ್ ಶೆಟ್ಟಿ”

ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಗ್ರಾ.ಪಂ. ವ್ಯಾಪ್ತಿಯ ಪಿಲಾರು ಮತ್ತು ಕಾರ್ಕಳ ತಾಲೂಕಿನ ಬೆಳ್ಮಣ್, ನಂದಳಿಕೆ, ಸೂಡ, ರೆಂಜಾಳ, ಬೈಲೂರು, ಯರ್ಲಪಾಡಿ ಮುಂತಾದ ಪ್ರದೇಶಗಳಲ್ಲಿ ಆ.18ರಂದು ಬೀಸಿದ ಬೀಕರ ಸುಂಟರ ಗಾಳಿಯಿಂದ ಸುಮಾರು ಒಂದೂವರೆ ಕಿ.ಮೀ. ಅಗಲ ಹಾಗೂ ಏಳೆoಟು ಕಿ.ಮೀ. ಉದ್ದಕ್ಕೆ ಸಾಲು ಸಾಲು ಮರಗಳು ಉರುಳಿ ಬಿದ್ದು ಅನೇಕ ಮನೆಗಳು ಮತ್ತು ಆಸ್ತಿ ಪಾಸ್ತಿಗೆ ಅಪಾರ ಹಾನಿ ಸಂಭವಿಸಿದ್ದು, ಸದ್ರಿ ಪ್ರಕೃತಿ ವಿಕೋಪವನ್ನು ಜಿಲ್ಲೆಯ ವಿಶೇಷ ಪ್ರಕರಣವೆಂದು ಪರಿಗಣಿಸಿ ಆದ್ಯತೆ ಮೇರೆಗೆContinue reading “ಭೀಕರ ಸುಂಟರಗಾಳಿಯಿಂದ ಕಾಪು ಮತ್ತು ಕಾರ್ಕಳ ತಾಲೂಕಿನಾದ್ಯಂತ ಆಗಿರುವ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗ್ರಹ”

ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಉಡುಪಿ: ಅಸಂಖ್ಯಾತ ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಮಹೇಶ್ ಶೆಟ್ಟಿContinue reading “ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ”

ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರ್ಯ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ತಾಲ್ಲೂಕು ಮಟ್ಟದ ವತಿಯಿಂದ ಇಂದು ದಿನಾಂಕ 15-08-2025 ರಂದು ನಡೆದ “ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರೋತ್ಸವ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾಪು ತಹಶೀಲ್ದಾರರಾದ ಪ್ರತೀಭಾ ಆರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷ ಸರೀತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ,Continue reading “ಕಾಪು ತಾಲ್ಲೂಕು ಮಟ್ಟದ 79 ನೇ ಸ್ವಾತಂತ್ರ್ಯ ದಿನಾಚರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ”

Design a site like this with WordPress.com
Get started