‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’

79ನೇ ಸ್ವಾತಂತ್ರ್ಯ ದಿನಾಚರಣೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆ.14ರಂದು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು. ಉಡುಪಿ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಲ್ಲಿರುವ ದಿ! ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾಲಾರ್ಪಣೆಗೈದರು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಪ್ರತಿಮೆಗೆ ಪುಷ್ಪಾರ್ಚನೆಗೈಯುವ ಮೂಲಕ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ಕ್ಕೆ ಚಾಲನೆ ನೀಡಿದರು. ಈContinue reading “‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’”

ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ

ಉಡುಪಿ: ಆಷಾಢ ಮಾಸದ ಆಚರಣೆಗಳು ಹಾಗೂ ಆಹಾರ ಪದ್ಧತಿಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದಿಂದ ಗ್ರಾಮೀಣ ಬದುಕಿನ ಭವ್ಯ ಸಂಸ್ಕೃತಿಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಹೇಳಿದರು. ಅವರು ಆ.10ರಂದು ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪದಾಧಿಕಾರಿಗಳೊಂದಿಗೆ ಜ್ಯೋತಿ ಬೆಳಗಿಸಿ ಮಾತನಾಡಿದರು. ಕೃಷಿ ಪ್ರಧಾನವಾಗಿರುವ ಗ್ರಾಮೀಣ ಪ್ರದೇಶದಲ್ಲಿContinue reading “ಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ”

ಘಾಸಿ ಉಂಟುಮಾಡುವ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಸರದಲ್ಲಿ ಇತ್ತೀಚಿನ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಲಕ್ಷಾಂತರ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡುತ್ತಿದೆ. ಎಸ್.ಐ.ಟಿ. ತನಿಖೆ ನಡೆಯುತ್ತಿದ್ದಂತೆ ಹಲವಾರು ಸಮಾಜ ವಿದ್ರೋಹಿ ಹಾಗೂ ಎಡಪಂಥೀಯ ಮನಸ್ಥಿತಿಯ ಯು-ಟ್ಯೂಬರ್ ಗಳು ಮತ್ತು ಸ್ವಯಂಘೋಷಿತ ಹೋರಾಟಗಾರರು ಕೋಟ್ಯಾಂತರ ಭಕ್ತರ ಶೃದ್ದಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕರ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚುರಪಡಿಸಿ, ಅಪಪ್ರಚಾರ ಎಸಗುತ್ತಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಶ್ರೀContinue reading “ಘಾಸಿ ಉಂಟುಮಾಡುವ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ”

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್(ರಿ.) ಧರ್ಮಸ್ಥಳ ಇದರ ವತಿಯಿಂದ ಸೆ.14 ರಿಂದ ಸೆ.21ರ ವರೆಗೆ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆಯು ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ-ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು. ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಪೂರ್ವಭಾವಿ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ,Continue reading “ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು : ಶ್ರೀ ಕ್ಷೇತ್ರದಲ್ಲಿ ನಡೆಯುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆ”

ಛತ್ತೀಸ್ ಘಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ

ಉಡುಪಿ: ಇತ್ತೀಚಿಗೆ ಛತ್ತೀಸ್ಗಡದಲ್ಲಿ ನಡೆದ ಎರಡು ಸಿಸ್ಟರ್ ಗಳ ಬಂಧನಕ್ಕೆ ಸಂಬಂಧಿಸಿದಂತೆ ಸರಕಾರ ಕೂಡಲೇ ತನಿಖೆಯನ್ನು ತೀವ್ರಗೊಳಿಸಿ ಬಂಧಿತರಾಗಿರುವ ಸಿಸ್ಟರ್ ಗಳನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿ’ಸೋಜ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಭಟನೆಯ ಪ್ರಹಸನಕ್ಕೆ ಮುoದಾಗಿರುವ ಭಾರತೀಯ ಕ್ರೈಸ್ತ ಒಕ್ಕೂಟ ಉಡುಪಿ ಮತ್ತು ಕಥೋಲಿಕ್ ಸಭಾ ಉಡುಪಿ ಇದರ ನಡೆ ಖಂಡನೀಯ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಶಿವಮೊಗ್ಗದ ರೋಮನ್ ಕ್ಯಾಥೋಲಿಕ್Continue reading “ಛತ್ತೀಸ್ ಘಡದಲ್ಲಿ ಬಂಧಿಸಿರುವ ಸಿಸ್ಟರ್ ಗಳ ಬಿಡುಗಡೆಗೆ ಒತ್ತಾಯ, ಕ್ರೈಸ್ತ ಸಂಘಟನೆಯ ಸಮಯ ಸಾಧಕ ನಡೆ ಖಂಡನೀಯ : ರುಡಾಲ್ಪ್ ಡಿ’ಸೋಜ”

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಅಸಹಾಯಕರಿಗೆ ಮಾಸಾಶನದ ನೆರವು

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಉಡುಪಿ ಜಿಲ್ಲೆಯ 868 ಅಸಹಾಯಕರಿಗೆ ಮಾಸಾಶನದ ನೆರವು ಹಾಗೂ 779 ವಿಶೇಷ ಚೇತನರಿಗೆ ಉಚಿತ ಸಲಕರಣೆಗಳ ವಿತರಣೆ ಮಾಡಲಾಗಿದೆ. ಹಲವಾರು ಕಾರಣಗಳಿಗೆ ತಮ್ಮ ವೃದ್ಧಾಪ್ಯದ ಜೀವನದಲ್ಲಿ ಆರೈಕೆ ಮಾಡುವವರು ಯಾರೂ ಇಲ್ಲದೆ ಅನಾಥರಾಗಿರುವ ಅದೆಷ್ಟೋ ಹಿರಿ ಜೀವಗಳನ್ನು ಗಮನಿಸಬಹುದು. ತಮ್ಮ ಇಳಿ ವಯಸ್ಸಿನಲ್ಲಿ ನಡೆದಾಡಲು, ದುಡಿಯಲು ಸಾಧ್ಯವಾಗದೇ, ಜೀವನ ನಿರ್ವಹಣೆ ಹಾಗೂ ಒಪ್ಪತ್ತಿನ ಊಟಕ್ಕೂ ಪರದಾಡುವವರನ್ನು ಕಾಣುತ್ತೇವೆ. ದೈನಂದಿನ ಜೀವನ ನಿರ್ವಹಣೆ ಸಮಸ್ಯೆಯೊಂದಿಗೆ ವಯೋ ಸಹಜವಾದ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುವುದನ್ನುContinue reading “ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಅಸಹಾಯಕರಿಗೆ ಮಾಸಾಶನದ ನೆರವು”

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಉಡುಪಿ: ಜಿಲ್ಲೆಯಾದ್ಯಂತ 9/11 ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಸರಕಾರದ ವಿಳಂಬ ಧೋರಣೆಯಿಂದ ಜನಸಾಮಾನ್ಯರು ಅತೀವ ತೊಂದರೆಗೀಡಾಗಿದ್ದು, ಈ ಜ್ವಲoತ ಸಮಸ್ಯೆಯ ಪರಿಹಾರಕ್ಕೆ ಅಗ್ರಹಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಎಲ್ಲಾ ಮೋರ್ಚಾಗಳು ಮತ್ತು ಸಾರ್ವಜನಿಕರ ಸಹಯೋಗದಲ್ಲಿ ಜು.28ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಮುಂಬಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನುContinue reading “ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ”

ಹತಾಶ ಮನಸ್ಥಿತಿಯ ಪ್ರಸಾದ್ ಕಾಂಚನ್ ಗೆ ಶಾಸಕರನ್ನು ಟೀಕಿಸುವ ನೈತಿಕತೆ ಇಲ್ಲ: ಪ್ರಭಾಕರ ಪೂಜಾರಿ

ಉಡುಪಿ: ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕರ ವಿರುದ್ಧ ಅಸಂಬದ್ಧ ಹೇಳಿಕೆ ನೀಡುತ್ತಾ ಶಾಸಕರ ಮನೆಗೆ, ಕಛೇರಿಗೆ ಮುತ್ತಿಗೆ ಹಾಕುತ್ತೇನೆ ಎಂಬ ಬಾಲಿಶ ಹೇಳಿಕೆ ನೀಡುತ್ತಿರುವ, ತನ್ನದೇ ಕಾಂಗ್ರೆಸ್ ಪಕ್ಷದಲ್ಲಿ ಮೊಲೆಗುಂಪಾಗಿರುವ ಪ್ರಸಾದ್ ಕಾಂಚನ್ ಗೆ ಸದಾ ಕ್ಷೇತ್ರದ ಅಭಿವೃದ್ಧಿಯ ಕನಸನ್ನು ಹೊತ್ತು ಸಾರ್ಥಕ ಸೇವೆಗೈಯುತ್ತಿರುವ ಉಡುಪಿ ಶಾಸಕರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಸಾದ್ ಕಾಂಚನ್ ರನ್ನು ಉಡುಪಿಯ ಜನತೆContinue reading “ಹತಾಶ ಮನಸ್ಥಿತಿಯ ಪ್ರಸಾದ್ ಕಾಂಚನ್ ಗೆ ಶಾಸಕರನ್ನು ಟೀಕಿಸುವ ನೈತಿಕತೆ ಇಲ್ಲ: ಪ್ರಭಾಕರ ಪೂಜಾರಿ”

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಶಾಸಕ ವಿ.ಸುನಿಲ್ ಕುಮಾರ್ ಅವರ ಕನಸಿನ ಕೂಸು ಪರಶುರಾಮ ಥೀಮ್ ಪಾರ್ಕ್ ಯೋಜನೆಯ ವಿರುದ್ಧ ನಿರಂತರ ಅಪಪ್ರಚಾರದಲ್ಲಿ ತೊಡಗಿರುವ ಕಾರ್ಕಳ ಕಾಂಗ್ರೆಸ್ ಗೆ ಪೊಲೀಸ್ ಇಲಾಖೆಯ ತನಿಖೆಯ ಫಲಿತಾಂಶದಿಂದ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ನ ಅಪಪ್ರಚಾರವೆಲ್ಲವೂ ಸುಳ್ಳಾಗಿದೆ. ಫೈಬರ್ ಫೈಬರ್ ಎಂದು ಗೋಗರೆಯುತ್ತಾ ಕಳೆದ ಎರಡೂವರೆ ವರ್ಷದಿಂದ ಪ್ರವಾಸೋದ್ಯಮವನ್ನು ಹಾಳುಗೆಡಹಿರುವ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕುContinue reading “ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್”

ಬಿಜೆಪಿ ನಗರ ಯುವ ಮೋರ್ಚಾ: ‘ಯಕ್ಷ ಗುರು’ ಬನ್ನಂಜೆ ಸಂಜೀವ ಸುವರ್ಣರಿಗೆ ಗೌರವಾರ್ಪಣೆ

ಉಡುಪಿ: ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸ ನೇತೃತ್ವದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಖ್ಯಾತ ಯಕ್ಷ ಗುರು, ಉಡುಪಿಯ ‘ಯಕ್ಷ ಸಂಜೀವ ಯಕ್ಷಗಾನ ಕೇಂದ್ರ’ದ ಮುಖ್ಯಸ್ಥರಾದ ಬನ್ನಂಜೆ ಸಂಜೀವ ಸುವರ್ಣ ಅವರನ್ನು ಅವರ ನಿವಾಸದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು. ಸಂಜೀವ ಸುವರ್ಣ ಅವರು ಯಕ್ಷಗಾನದ ಹಲವಾರು ಪ್ರಕಾರಗಳಲ್ಲಿ ವಿಶೇಷ ಪರಿಣತಿಯನ್ನು ಹೊಂದಿದ್ದು ನೂರಾರು ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯ ತರಬೇತಿಯನ್ನು ನೀಡಿರುತ್ತಾರೆ. ಪ್ರತಿಭಾನ್ವಿತ ಯಕ್ಷಗಾನ ಕಲಾವಿದರಾಗಿ 30ಕ್ಕೂ ಹೆಚ್ಚು ದೇಶಗಳಲ್ಲಿContinue reading “ಬಿಜೆಪಿ ನಗರ ಯುವ ಮೋರ್ಚಾ: ‘ಯಕ್ಷ ಗುರು’ ಬನ್ನಂಜೆ ಸಂಜೀವ ಸುವರ್ಣರಿಗೆ ಗೌರವಾರ್ಪಣೆ”

Design a site like this with WordPress.com
Get started