ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಯುವ ಮೋರ್ಚಾ ಸಹಯೋಗದೊಂದಿಗೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಮಂಗಳೂರು ವಿಭಾಗ ಪ್ರಬಾರಿ ಕೆ.ಉದಯಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಮುಡ ಭೂ ಹಗರಣ, ವಾಲ್ಮೀಕಿ ನಿಗಮContinue reading “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಂಧನ ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ”
Tag Archives: ರಾಜಕೀಯ
ಮುಡ ಭೂ ಹಗರಣದ ನೈತಿಕ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಕೋಟ
ಉಡುಪಿ: ರಾಜ್ಯದಲ್ಲದೆ ಕೋಲಾಹಲ ಎಬ್ಬಿಸಿರುವ ಮುಡ ಭೂ ಹಗರಣ ರಾಜ್ಯದ ಮುಖ್ಯಮಂತ್ರಿ ಅವರ ಕುಟುಂಬದ ಸುತ್ತ ಗಿರಕಿ ಹೊಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮುಡ ಹಗರಣದ ಕುರಿತು ಈ ಕೆಳಗಿನ ಪ್ರಮುಖ ಅಂಶಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದಿಟ್ಟರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ಮಾಡಿ ವರದಿ ನೀಡಲು ಸರಕಾರವೇ ಸೂಚಿಸಬೇಕು.Continue reading “ಮುಡ ಭೂ ಹಗರಣದ ನೈತಿಕ ಜವಾಬ್ದಾರಿ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು : ಸಂಸದ ಕೋಟ”
ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ
ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು, ಕಟಪಾಡಿ ಸಿಎ ಬ್ಯಾಂಕ್ ನಿರ್ದೇಶಕರು, ಕಟಪಾಡಿ ಹಾಲು ಉತ್ಪಾದಕರ ಸಹಕಾರ ಸಂಘ (ನಿ) ಇದರ ಅಧ್ಯಕ್ಷರೂ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ ಹಾಲಿ ಸದಸ್ಯರೂ ಆದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮಪಂಚಾಯತ್ ಸದಸ್ಯರಾದ ಈಶ್ವರ ಕಟಪಾಡಿ ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಾಲು ಹೊದಿಸಿ ಪಕ್ಷದ ಧ್ವಜ ಕೊಟ್ಟುContinue reading “ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಅಶೋಕ್ ರಾವ್ ಹಾಗೂ ಪಂಚಾಯತ್ ಸದಸ್ಯರಾದ ಈಶ್ವರ್ ಕಟಪಾಡಿ ಬಿಜೆಪಿ ಸೇರ್ಪಡೆ”
ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ; ಬೆಲೆ ಏರಿಕೆ ಮೂಲಕ ಜನತೆಗೆ ಮೋಸ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ
ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಆಕಾಶ, ಭೂಮಿ, ಪಾತಾಳದಲ್ಲೂ ಹಗರಣಗಳನ್ನು ನಡೆಸಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬೆಲೆ ಏರಿಕೆಯ ಮೂಲಕ ಕಾಂಗ್ರೆಸ್ ಜನರಿಗೆ ಮಹಾ ಮೋಸ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದರು. ಅವರು ಜೂ.22ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿContinue reading “ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ; ಬೆಲೆ ಏರಿಕೆ ಮೂಲಕ ಜನತೆಗೆ ಮೋಸ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ”
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಒಂದು ಕ್ಷೇತ್ರಕ್ಕೆ ಒಂದೇ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ರಾ ಮಾಜಿ ಸಚಿವ ಈಶ್ವರಪ್ಪ? ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.ಕಳೆದContinue reading “ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ”
ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯ
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು. ಅವರು ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಡಿ.3ರಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದರು. ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದು ಅವರು ತಿಳಿಸಿದರು. ದತ್ತಪೀಠದ ವಿಚಾರದಲ್ಲಿContinue reading “ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ: ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ. ರವಿ ಅಭಿಪ್ರಾಯ”
ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ
ಚಿಕ್ಕಬಳ್ಳಾಪುರ : ಕಳೆದ 75 ವರ್ಷದಲ್ಲಿ ಭಾವುಟಗಳನ್ನೇ ಮರೆತಿದ್ದವರು, ರಾಷ್ಟ್ರಧ್ವಜವನ್ನೇ ಮರೆತಿದ್ದವರು ಪ್ರಧಾನಿಯವರು ಹರ್ ಘರ್ ತಿರಂಗ ಘೋಷಣೆ ನಂತರ ಬೆಂಗಳೂರಿನ ಬೀದಿಗಳಲ್ಲಿ ಧ್ವಜ ಹಿಡಿದು ಪಾದಯಾತ್ರೆ ಮಾಡಿರುವುದು ಬಯಲು ನಾಟಕವಲ್ಲವೇ ಎಂದು ಆರೋಗ್ಯ ಸಚಿವ ಡಾ! ಕೆ. ಸುಧಾಕರ್ ಪ್ರಶ್ನಿಸಿದ್ದಾರೆ. ಹರ್ ಘರ್ ತಿರಂಗ ಎಂಬುದು ನಾಟಕ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಯಲು ನಾಟಕ ಮಾಡುತ್ತಿರುವ ಕಾಂಗ್ರೆಸ್ ಗೆ ಕಳೆದ 75 ವರ್ಷದಲ್ಲಿ ರಾಷ್ಟ್ರಧ್ವಜ ನೆನಪಿತ್ತೇ? ಈಗContinue reading “ಕಾಂಗ್ರೆಸ್ ನವರದು ಬಯಲು ನಾಟಕ : ಆರೋಗ್ಯ ಸಚಿವ ಡಾ! ಕೆ.ಸುಧಾಕರ್ ಲೇವಡಿ 75 ವರ್ಷ ರಾಷ್ಟ್ರಧ್ವಜವನ್ನೇ ಮರೆತಿದ್ದವರು ಈಗ ಬೀದಿ ಬೀದಿಯಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ”
ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ
ಬೆಂಗಳೂರು: ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು. ಬೆಂಗಳೂರಿನ ಬಿಜೆಪಿ ನಗರ ಕಾರ್ಯಾಲಯ “ಭಾವುರಾವ್ ದೇಶಪಾಂಡೆ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಡಿಯೋ ಮಾಡಿContinue reading “ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ”
ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ
ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. , ಮೆದುಳಿನ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ಮರೆತು ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಕೇಂದ್ರದ ಮಾಜಿ ಸಚಿವರಾದ ಎಂ ವೀರಪ್ಪ ಮೊಯ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್,Continue reading “ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನ”
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ
Breaking News : ಗಾಂಧೀನಗರ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಸಂಗತಿಯನ್ನು ಘೋಷಿಸಿದರು. ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಲಾಗಿದೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ. ಐದು ವರ್ಷಗಳ ಕಾಲ ರಾಜ್ಯದ ಸೇವೆ ಮಾಡಲು ಪಕ್ಷ ನನಗೆ ಅವಕಾಶ ನೀಡಲಾಗಿದೆ. ನನ್ನ ಪಕ್ಷ ಏನು ಹೇಳಿದರೂ ಅದನ್ನು ನಾನು ಮಾಡುತ್ತೇನೆ ಎಂದು ರೂಪಾನಿ ಸುದ್ದಿಗಾರರಿಗೆ ತಿಳಿಸಿದರು.Continue reading “ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ”