ಉಡುಪಿ: ಆದಿಉಡುಪಿ ಭಾಗದಲ್ಲಿ ಸುಮಾರು ಒಂದು ವರ್ಷದಿಂದ ಕಾಮಗಾರಿ ಪ್ರಗತಿಯಲ್ಲಿದ್ದು 135 ಭೂ ಮಾಲೀಕರಿಗೆ ಸುಮಾರು 24.86 ಕೋಟಿ ರೂಪಾಯಿ ಪರಿಹಾರದ ಹಣ ಪಾವತಿಯಾಗಿದೆ. ತಕರಾರು ಇರುವಲ್ಲಿ ನಾನೇ ಅಧಿಕಾರಿಗಳೊಂದಿಗೆ ಕರಾವಳಿ ಜಂಕ್ಷನ್ ನಿಂದ ಮಲ್ಪೆಯವರೆಗೆ ವಿವಿಧ ಸ್ಥಳಗಳಿಗೆ ಹಲವು ಬಾರಿ ಭೇಟಿಕೊಟ್ಟು ಕಾಮಗಾರಿಗೆ ವೇಗ ನೀಡಲು ಪ್ರಯತ್ನಿಸಿದ್ದೆ. ಸುಮಾರು 90ರಷ್ಟು ಸಣ್ಣ ಸಣ್ಣ ಭೂಭಾಗಗಳ ಸರ್ವೆ ಮುಗಿಸಿ ಹಣ ಪಾವತಿಸಲು ವಿವಿಧ ಅಧಿಕಾರಿಗಳ ಸಭೆ ಕರೆದು ಪ್ರಗತಿ ಗಮನಿಸಿದ್ದೆ ಮತ್ತು ಸರ್ವೆ ಅಧಿಕಾರಿಗಳ ಮೂಲಕ ಈContinue reading “ಮಲ್ಪೆಯಿಂದ ಆಗುಂಬೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಯ ಬಗ್ಗೆ ಸ್ಪಷ್ಟನೆ”
Tag Archives: ರಾಜ್ಯ
ಮಾ.2 : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಉಡುಪಿಗೆ
ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.2 ರವಿವಾರ ಉಡುಪಿಗೆ ಬೇಟಿ ನೀಡಲಿದ್ದು, ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಆಗಮಿಸಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರದಿಂದ ಬಳಲಿರುವ ರೈತರ ಮೇಲೆ ಈ ಸರಕಾರ ಬರೆ ಎಳೆಯುತ್ತಿದೆ; ಬರಗಾಲ ನಿರ್ವಹಣೆಯಲ್ಲಿ ಅದು ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು. ಬೆಳಗಾವಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಮೊದಲೇ ವಿದ್ಯುತ್ ಕೊರತೆ ಇದೆ. ನಾವು 7 ಗಂಟೆ ವಿದ್ಯುತ್ ಕೊಡುತ್ತಿದ್ದೆವು. ಈ ಸರಕಾರ 5 ಗಂಟೆಯಷ್ಟೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಹೊಸ ಬೋರ್‍ವೆಲ್ ಕೊರೆಸಿದಾಗ ವಿದ್ಯುತ್ ಸಂಪರ್ಕಕ್ಕೆContinue reading “ಡಿ.13ರಂದು ಬಿಜೆಪಿ ಬೃಹತ್ ಹೋರಾಟ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್”
ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ದೋಖಾ: ಛಲವಾದಿ ನಾರಾಯಣಸ್ವಾಮಿ ಟೀಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರಿಗೆ ದೋಖಾ ಮಾಡುವ ಸರಕಾರ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಈ ಕುರಿತು ಪತ್ರಿಕಾಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪಾಯಿಯನ್ನು ಬಳಸುತ್ತಿರುವುದಾಗಿ ರಾಜ್ಯದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದು ದಲಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರು ಮತ್ತು ಸಮಾಜ ಕಲ್ಯಾಣ ಸಚಿವರು ಮಾಡುತ್ತಿರುವ ಮಹಾಮೋಸ ಎಂದು ಟೀಕಿಸಿದ್ದಾರೆ.Continue reading “ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ದೋಖಾ: ಛಲವಾದಿ ನಾರಾಯಣಸ್ವಾಮಿ ಟೀಕೆ”
ಶಂಕಿತ ಉಗ್ರರ ಜಾಲದ ತನಿಖೆಯನ್ನು ಎನ್‍ಐಎಗೆ ವಹಿಸಿ- ಸಿ.ಟಿ.ರವಿ ಆಗ್ರಹ
ಬೆಂಗಳೂರು: ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‍ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಕರ್ನಾಟಕ ರಾಜ್ಯ ವ್ಯಾಪ್ತಿಯನ್ನು ಮೀರಿ ವಿದೇಶಕ್ಕೂ ಈ ಜಾಲ ಹರಡಿದೆ ಎಂಬ ಸಂಶಯವಿದೆ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಎನ್‍ಐಎಗೆContinue reading “ಶಂಕಿತ ಉಗ್ರರ ಜಾಲದ ತನಿಖೆಯನ್ನು ಎನ್‍ಐಎಗೆ ವಹಿಸಿ- ಸಿ.ಟಿ.ರವಿ ಆಗ್ರಹ”
ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಒಂದು ರೀತಿ ಪ್ರತೀಕಾರದ ಬಜೆಟ್. ಈ ಬಜೆಟ್ ರಾಜ್ಯ ಸರಕಾರದ್ದೇ ಆದರೂ ಕೇಂದ್ರ ಬಿಜೆಪಿ ಸರಕಾರವನ್ನು ಗುರಿ ಮಾಡಿರುವುದು ಕಂಡುಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟೀಕಿಸಿದ್ದಾರೆ. ಇದೊಂದು ನಿರಾಶಾದಾಯಕ, ಪ್ರಗತಿಹೀನ ಬಜೆಟ್ ಎಂದಿರುವ ಅವರು, ಬಜೆಟ್ ಮಂಡಿಸುವ ವೇಳೆ ಕೇಂದ್ರ ಸರಕಾರ, ಮೋದಿಜಿ ಅವರನ್ನು ಟೀಕಿಸುವುದಕ್ಕಾಗಿಯೇ ಈ ಅವಕಾಶವನ್ನು ಉಪಯೋಗ ಮಾಡಿಕೊಂಡಿದ್ದಾರೆ. ರಾಜ್ಯಗಳ ಒಕ್ಕೂಟದ ಒಳಗಡೆ ಕೇಂದ್ರದ ಜೊತೆ ಸಂಘರ್ಷ,Continue reading “ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್‍ಕುಮಾರ್ ಕಟೀಲ್”
ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ; ಬೆಲೆ ಏರಿಕೆ ಮೂಲಕ ಜನತೆಗೆ ಮೋಸ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ
ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಆಕಾಶ, ಭೂಮಿ, ಪಾತಾಳದಲ್ಲೂ ಹಗರಣಗಳನ್ನು ನಡೆಸಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬೆಲೆ ಏರಿಕೆಯ ಮೂಲಕ ಕಾಂಗ್ರೆಸ್ ಜನರಿಗೆ ಮಹಾ ಮೋಸ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದರು. ಅವರು ಜೂ.22ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿContinue reading “ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ; ಬೆಲೆ ಏರಿಕೆ ಮೂಲಕ ಜನತೆಗೆ ಮೋಸ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿಬಿಜೆಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ”
ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಬಿಜೆಪಿ ತನ್ನ ಪ್ರಜಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ನಗರದ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಸಚಿವ ಡಾ ಕೆ ಸುಧಾಕರ್ (Dr K Sudhakar) ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಪ್ರಣಾಳಿಕೆ ಪ್ರಮುಖ ಅಂಶಗಳು: 🪷ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆContinue reading “ಕರ್ನಾಟಕ ಎಲೆಕ್ಷನ್ 2023: ಬಿಜೆಪಿಯಿಂದ ಪ್ರಜಾ ಪ್ರಣಾಳಿಕೆ ಬಿಡುಗಡೆ”
ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮಾಜಿ ಸಚಿವ ಶಿವಮೊಗ್ಗ ಕ್ಷೇತ್ರದ ಶಾಸಕರಾದ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.ಒಂದು ಕ್ಷೇತ್ರಕ್ಕೆ ಒಂದೇ ಟಿಕೆಟ್ ನೀಡುವ ಹಿನ್ನೆಲೆಯಲ್ಲಿ ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ರಾ ಮಾಜಿ ಸಚಿವ ಈಶ್ವರಪ್ಪ? ಈ ಸಂಬಂಧ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದಾರೆ. “ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ.ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ.ಕಳೆದContinue reading “ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ”
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶ್ರೀರಾಮನವಮಿ ಆಚರಣೆ
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಶ್ರೀರಾಮ ನವಮಿಯನ್ನು ಆಚರಿಸಲಾಯಿತು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಮತ್ತು ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.