ಉದ್ಯಾವರ ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

ಉಡುಪಿ: ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆ ಉದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಂಬಲಪಾಡಿ ವಲಯದ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನೆರವೇರಿತು. ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಜಾನ್ ಎಮ್. ಡಿ’ಸೋಜಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿContinue reading “ಉದ್ಯಾವರ ಟ್ರಿನಿಟಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ”

ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣ ಸಹಿತ ವಿವಿಧ ಬೇಡಿಕೆಗಳೊಂದಿಗೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ ಸಲ್ಲಿಕೆ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಇದರ ಸರ್ವಿಸ್ ರಸ್ತೆಯ ಅಗಲೀಕರಣ ಮತ್ತು ಸಂಬಂಧಿತ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆ ಇದರ ವತಿಯಿಂದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮೂಲಕ ಮನವಿ ಸಲ್ಲಿಸಲಾಯಿತು. ರಾ.ಹೆ.66 ಅಂಬಲಪಾಡಿ ಇದರ ಅಗಲ ಕಿರಿದಾಗಿರುವ ಸರ್ವಿಸ್ ರಸ್ತೆಯನ್ನು ಮಳೆ ನೀರು ಹರಿಯುವ ಚರಂಡಿ ಸಹಿತ ಅಗಲೀಕರಣಗೊಳಿಸುವಂತೆ, ರಾ.ಹೆ.66 ಅಂಬಲಪಾಡಿContinue reading “ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಸರ್ವಿಸ್ ರಸ್ತೆ ಅಗಲೀಕರಣ ಸಹಿತ ವಿವಿಧ ಬೇಡಿಕೆಗಳೊಂದಿಗೆ ರಾ.ಹೆ.66 ಅಂಬಲಪಾಡಿ ಬಳಕೆದಾರರ ಹಿತ ರಕ್ಷಣಾ ವೇದಿಕೆಯಿಂದ ಸಂಸದರಿಗೆ ಮನವಿ ಸಲ್ಲಿಕೆ”

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ತಾಲೂಕು : 79ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಇದರ ವತಿಯಿಂದ ಅಂಬಲಪಾಡಿ ಪ್ರಗತಿ ಸೌಧ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜನಜಾಗೃತಿ ವೇದಿಕೆ ಉಡುಪಿ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ವೀರ ಸೇನಾನಿಗಳನ್ನು ಸ್ಮರಿಸಿದರು. ಉಡುಪಿ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕುContinue reading “ಶ್ರೀ ಕ್ಷೇ.ಧ.ಗ್ರಾ. ಯೋಜನೆ ಉಡುಪಿ ತಾಲೂಕು : 79ನೇ ಸ್ವಾತಂತ್ರ್ಯ ದಿನಾಚರಣೆ”

ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಶಸ್ತಿ

ಆ.10ರಂದು ಶಿವಮೊಗ್ಗದಲ್ಲಿ ನಡೆದ ‘ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಇವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರು ಕೃಷ್ಣ ಕುಂದರ್ ಹಾಗೂ ಗೀತಾ ಕರ್ಕೇರ ದಂಪತಿಗಳ ಪುತ್ರಿ. ಇವರು ಬುಡೋಕಾನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಸಂಸ್ಥೆಯ ಮುಖ್ಯ ಶಿಕ್ಷಕರ ವಾಮನ್ ಪಾಲನ್ ಹಾಗೂ ಮೇಘ ಇವರಿಂದContinue reading “ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಶಸ್ತಿ”

BSW ಪದವಿ ಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಕು.ಶ್ರೀನಿಧಿ ಯವರಿಗೆ ಹುಟ್ಟೂರ ಸನ್ಮಾನ

ಕಾಪು: ಅಲೆವೂರು ರಾಮಪುರದ ಶ್ರೀಪತಿ‌ ಆಚಾರ್ಯ ಮತ್ತು ಇಂದಿರಾ ಇವರ ಪುತ್ರಿ ಕು. ಶ್ರೀನಿಧಿ ಬಿ ಎಸ್ ರವರು ಮಂಗಳೂರು ವಿಶ್ವವಿದ್ಯಾನಿಲಯದ ಬಿಎಸ್ ಡಬ್ಲ್ಯೂ ಪದವಿ ಪರೀಕ್ಷೆಯಲ್ಲಿ ಪ್ರಥಮ   ರ‍್ಯಾಂಕ್ ಪಡೆದಿದ್ದು‌ ಅವರನ್ನು ಅವರ ಸ್ವಗ್ರಹದಲ್ಲಿ ಬೂತ್ ಅಧ್ಯಕ್ಷರಾದ ನಾರಾಯಣ ಆಚಾರ್ಯ‌ ಇವರ ನೇತ್ರತ್ವದಲ್ಲಿ ಸನ್ಮಾನ ಮಾಡಿ ಗೌರವಿಸಿ  ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ‌ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ  ಶ್ರೀಕಾಂತ್ ನಾಯಕ್,ಹಿರಿಯರಾದ ಅಶೋಕ್ ಶೆಟ್ಟಿಗಾರ್, ಪಕ್ಷದ ಪ್ರಮುಖರಾದ ಅರುಣ್ ಆಚಾರ್ಯ, ಹರೀಶ್ ಶೆಟ್ಟಿಗಾರ್, ಸುಧಾಮ ರಾಮಪುರ,Continue reading “BSW ಪದವಿ ಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಕು.ಶ್ರೀನಿಧಿ ಯವರಿಗೆ ಹುಟ್ಟೂರ ಸನ್ಮಾನ”

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ

ಉಡುಪಿ: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ನಡೆದ 65ನೇ ಭಜನಾ ಮಂಗಲೋತ್ಸವಕ್ಕೆ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವವು ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ, ಗೌರವಾಧ್ಯಕ್ಷ ಗೋಪಾಲ್ ಸಿ. ಬಂಗೇರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾContinue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಕಲಶೋತ್ಸವ, 65ನೇ ಭಜನಾ ಮಂಗಲೋತ್ಸವ ಸಂಪನ್ನ”

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಭಜನಾ ಮಂದಿರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಶಾಲು ಹೊದೆಸಿ ಗೌರವಿಸಿ, ಶ್ರೀದೇವರ ಪ್ರಸಾದವನ್ನು ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಮಾಜಿ ಅಧ್ಯಕ್ಷ ಕೆ.ಮಂಜಪ್ಪ ಸುವರ್ಣ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರContinue reading “ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ”

ಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 170ನೇ ಜನ್ಮ ದಿನಾಚರಣೆಯನ್ನು ಆ.20ರಂದು ಭಜನಾ ಸೇವೆ, ಮಹಾ ಪೂಜೆ ಮತ್ತು ಅನ್ನ ಸಂತರ್ಪಣೆಯೊಂದಿಗೆ ಭಜನಾ ಮಂದಿರದಲ್ಲಿ ಆಚರಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ‘ಸಂಘಟನೆಯಿಂದ ಬಲಯುತರಾಗಿರಿ, ವಿದ್ಯಾರ್ಜನೆಯಿಂದ ಸ್ವತಂತ್ರರಾಗಿರಿ’ ಎಂಬ ಅಮೃತ ವಾಣಿಯಂತೆ ಶ್ರೀ ಗುರು ಜಯಂತಿಯ ಪ್ರಯುಕ್ತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳಲ್ಲಿ ಉತ್ತಮ ಅಂಕ ಪಡೆದ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ 19Continue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘ : ಶ್ರೀ ಗುರು ಜಯಂತಿ ಆಚರಣೆ, ವಿದ್ಯಾರ್ಥಿ ವೇತನ ವಿತರಣೆ”

ಅಂಬಲಪಾಡಿ ಬಿಲ್ಲವ ಸೇವಾ ಸಂಘ, ಬಿಲ್ಲವ ಮಹಿಳಾ ಘಟಕ : 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಇದರ ವತಿಯಿಂದ 8ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಶ್ರೀ ದಯಾಕರ ಶಾಂತಿ ಬನ್ನಂಜೆ ಅವರ ಪೌರೋಹಿತ್ಯದಲ್ಲಿ ನಡೆಯಿತು. ಮಹಾ ಪೂಜೆ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಿತು. ಸುಮಾರು 350ಕ್ಕೂ ಮಿಕ್ಕಿ ಭಕ್ತಾಭಿಮಾನಿಗಳು ಶ್ರೀ ವರಮಹಾಲಕ್ಷ್ಮೀ ಪೂಜೆ ಸಲ್ಲಿಸಿದ್ದರು.

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸಂಘದ ವಠಾರದಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅವರು ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿ ಅವಿನಾಶ್ ಕುಮಾರ್, ಆಡಳಿತ ಸಮಿತಿಯ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ನಿತಿನ್ ಕುಮಾರ್, ವಿನಯ್ ಕುಮಾರ್, ಜನಾರ್ಧನ ಪೂಜಾರಿ, ಮಹಿಳಾ ಘಟಕದ ಸಹContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : 78ನೇ ಸ್ವಾತಂತ್ರ್ಯ ದಿನಾಚರಣೆ”

Design a site like this with WordPress.com
Get started