ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆ ಸುಲಭ ಸಾಧ್ಯ : ಡಾ! ನಿ.ಬೀ. ವಿಜಯ ಬಲ್ಲಾಳ್

ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣದ ಲೋಕಾರ್ಪಣೆ ನವ ವಿಧ ಭಕ್ತಿಗಳಲ್ಲಿ ಭಜನೆಗೆ ಬಹಳ ಪ್ರಾಮುಖ್ಯತೆ ಇದೆ. ಕಳೆದ 64 ವರ್ಷಗಳಿಂದ ವಾರದ ಭಜನೆ, ಮಂಗಲೋತ್ಸವ ಸಹಿತ ವಿವಿಧ ಧಾರ್ಮಿಕ ಆಚರಣೆಗಳ ಜೊತೆಗೆ ನಿರಂತರ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಕಾರ್ಯವೈಖರಿ ಅನುಕರಣೀಯ. ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆಗಳ ಪರಿಪೂರ್ಣತೆContinue reading “ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆ ಸುಲಭ ಸಾಧ್ಯ : ಡಾ! ನಿ.ಬೀ. ವಿಜಯ ಬಲ್ಲಾಳ್”

ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ

ನಿಡಂಬೂರು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ, ಅಂಬಲಪಾಡಿ (ಮೂಡು ಪಾಲು) ಇದರ ವತಿಯಿಂದ ನಡೆದ ಶ್ರೀ ಬಬ್ಬು ಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವದ ಸಂದರ್ಭದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಖ್ಯಾತ ತಬಲಾ ವಾದಕ ಹಾಗೂ ಉಚಿತ ತಬಲಾ ತರಬೇತುದಾರ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರಿಗೆ ದಿ! ನಿ.ಬೀ. ಅಣ್ಣಾಜಿ ಬಲ್ಲಾಳ್ ಸ್ಮರಣಾರ್ಥ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿContinue reading “ಖ್ಯಾತ ತಬಲಾ ವಾದಕ, ತರಬೇತುದಾರ ಕೆ.ಮಂಜಪ್ಪ ಸುವರ್ಣರವರಿಗೆ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪ್ರಧಾನ”

ಇಂದು ಮಾ.30 ಮತ್ತು 31 ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೇಮೋತ್ಸವ, ಸಾಧಕರಿಗೆ ಸನ್ಮಾನ

ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ನೇಮೋತ್ಸವ ಸಮಿತಿಯ ನೇತೃತ್ವದಲ್ಲಿ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವವು ಇಂದು ಮಾರ್ಚ್ 30 ಶನಿವಾರ ಮತ್ತು ಮಾರ್ಚ್ 31 ರವಿವಾರ ಅಂಬಲಪಾಡಿ ಬಂಕೇರ್ಕಟ್ಟ ಅಂಗನವಾಡಿ ಬಳಿ ನಡೆಯಲಿದೆ. ಇಂದು ಮಾ.30 ಶನಿವಾರ ಬೆಳಿಗ್ಗೆ ಗಂಟೆ 7.30ಕ್ಕೆ ಮಹಾ ಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ ಗಂಟೆ 12.00ಕ್ಕೆ ಮಹಾ ಚಪ್ಪರದ ಆರೋಹಣ,12.30ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 4.00ಕ್ಕೆ ದೈವಸ್ಥಾನದಲ್ಲಿ ಮಹಾಪೂಜೆContinue reading “ಇಂದು ಮಾ.30 ಮತ್ತು 31 ಶ್ರೀ ಬಬ್ಬುಸ್ವಾಮಿ ದೇವಸ್ಥಾನ (ಪಡುಪಾಲು) ಅಂಬಲಪಾಡಿ : ನೇಮೋತ್ಸವ, ಸಾಧಕರಿಗೆ ಸನ್ಮಾನ”

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 64ನೇ ವಾರ್ಷಿಕ ಭಜನಾ ಮಂಗಳೋತ್ಸವದ ಅಂಗವಾಗಿ ಭಜನಾ ಮಂದಿರದಲ್ಲಿ ಪ್ರಾರಂಭಗೊಂಡ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಸಹ ಸಂಚಾಲಕ ಎ.ಮಾಧವ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ.Continue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಭಜನಾ ಸಪ್ತಾಹಕ್ಕೆ ಚಾಲನೆ”

ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ

ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ಜಿಲ್ಲಾ ಸಹಸಂಚಾಲಕರಾದ ವಿಜಯ್ ಕುಮಾರ್ ಉದ್ಯಾವರ ಪ್ರಸ್ತಾವನೆಗೈದರು. ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಚುನಾವಣಾ ಸಂಚಾಲಕರಾದ ಕುತ್ಯಾರು ನವೀನ್ ಶೆಟ್ಟಿ ಗ್ರಾಮ್ ಚಲೋ ಕಾರ್ಯಕ್ರಮದ ರೂಪುರೇಶೆಗಳನ್ನು ವಿವರಿಸಿದರು. ಕಾಪು ಮಂಡಲ ಸಂಚಾಲಕರಾದ ಮುರಳೀದರ್ ಪೈ ಕಾರ್ಯಕ್ರಮ‌ ನಿರೂಪಿಸಿದರು. ಈContinue reading “ಬಿಜೆಪಿ ಕಾಪು ಕ್ಷೇತ್ರ ಗ್ರಾಮ್ ಚಲೋ ಕಾರ್ಯಕ್ರಮಕ್ಕೆ ಚಾಲನೆ”

ಜ.22ರಂದು ಅಂಬಲಪಾಡಿ ದೇವಸ್ಥಾನದಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ

ಉಡುಪಿ: ಜ.22ರಂದು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಅಂಗವಾಗಿ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಆಶ್ರಯದಲ್ಲಿ ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 1.00ರ ವರೆಗೆ “ಶ್ರೀ ರಾಮೋತ್ಸವ” ಕಾರ್ಯಕ್ರಮವು ‘ಶ್ರೀ ಭವಾನಿ ಮಂಟಪ’ದಲ್ಲಿ ನಡೆಯಲಿದೆ. ಬೆಳಿಗ್ಗೆ ಗಂಟೆ 9.30ಕ್ಕೆ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ರವರು ಜ್ಯೋತಿ ಬೆಳಗಿಸಿ “ಶ್ರೀ ರಾಮೋತ್ಸವ”ಕ್ಕೆ ಚಾಲನೆ ನೀಡಲಿದ್ದಾರೆ. ಭಜನೆ, ಹನುಮಾನ್ ಚಾಲೀಸ್Continue reading “ಜ.22ರಂದು ಅಂಬಲಪಾಡಿ ದೇವಸ್ಥಾನದಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆ

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಇದರ ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆಯು ಭಜನಾ ಸೇವೆಯೊಂದಿಗೆ ವಿಜೃಂಭಣೆಯಿoದ ನೆರವೇರಿತು. ಈ ಸಂದರ್ಭದಲ್ಲಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು, ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಮ್., ಜನಜಾಗೃತಿ ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ತಾಲೂಕು ಸಮಿತಿ ಸದಸ್ಯರಾದ ಗಣೇಶ್ ಕುಮಾರ್ ಸಂಪಿಗೆನಗರ, ಪ್ರತಾಪ್ ಕುಮಾರ್ ಉದ್ಯಾವರ, ವಲಯ ಮೇಲ್ವಿಚಾರಕಿ ಪ್ರೇಮಾ, ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಅಧ್ಯಕ್ಷರು, ಕಾರ್ಯದರ್ಶಿಗಳು,Continue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಅಂಬಲಪಾಡಿ ವಲಯ ಕಛೇರಿಯಲ್ಲಿ ಧನಲಕ್ಷ್ಮೀ ಪೂಜೆ”

ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ

ಉಡುಪಿ: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಬಂಕೇರಕಟ್ಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಪುಟಾಣಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಸ್ಥಳೀಯ ಉದ್ಯಮಿ, ಶ್ರೀ ನಾಗರಾಜ ಸೇವಾ ಸಮಿತಿ ಬಂಕೇರಕಟ್ಟ ಇದರ ಗೌರವಾಧ್ಯಕ್ಷ ಎ.ವಿಶ್ವನಾಥ್ ಹೆಗ್ಡೆಯವರು ಕೊಡುಗೆ ನೀಡಿದ ಸ್ಟೀಲ್ ಕವಾಟನ್ನು ಅಂಗನವಾಡಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸ್ಥಳೀಯ ವಾರ್ಡ್ ಸದಸ್ಯ ರಾಜೇಶ್ ಸುವರ್ಣ, ಮಾಜಿ ಅಧ್ಯಕ್ಷರಾದ ರಾಜೇಂದ್ರ ಪಂದುಬೆಟ್ಟು, ಭಾರತಿ ಭಾಸ್ಕರ್, ಮಾಜಿ ಉಪಾಧ್ಯಕ್ಷರಾದ ಶಿವಕುಮಾರ್ ಅಂಬಲಪಾಡಿ, ಸೋಮನಾಥ್Continue reading “ಅಂಗನವಾಡಿ ಕೇಂದ್ರ ಬoಕೇರಕಟ್ಟ ಅಂಬಲಪಾಡಿ : ಮಕ್ಕಳ ದಿನಾಚರಣೆ, ಸ್ಟೀಲ್ ಕವಾಟು ಕೊಡುಗೆ ಹಸ್ತಾಂತರ”

ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಆಡಳಿತ ಪಾಲುದಾರ ಅಂಬಲಪಾಡಿ ಭರತ್ ಶೆಟ್ಟಿಯವರಿಗೆ ಸನ್ಮಾನ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವಾರದ ಭಜನಾ ಸೇವೆಗೆ ಪೂರಕವಾಗುವಂತೆ ಶಾಶ್ವತ ಧ್ವನಿವರ್ಧಕದ ವ್ಯವಸ್ಥೆ ಹಾಗೂ ಶ್ರೀ ನಾರಾಯಣ ಗುರು ಸಮುದಾಯ ಭವನದ ಕಾರ್ಯಕ್ರಮಗಳಿಗೆ ಉಪಯೋಗವಾಗುವಂತೆ ಸ್ಟೀಲ್ ಟೇಬಲ್ ಗಳ ಉದಾರ ಕೊಡುಗೆ ನೀಡಿರುವ ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಉಡುಪಿ ಇದರ ಆಡಳಿತ ಪಾಲುದಾರ, ಮೆಡಿಯರ್ಥ್ ಲೈಫ್ ಕೇರ್ ಮುಂಬೈ ಇದರ ಆಡಳಿತ ನಿರ್ದೇಶಕ ಭರತ್ ಶೆಟ್ಟಿ ಪಠೇಲರ ಮನೆ ಅಂಬಲಪಾಡಿ ಇವರನ್ನು ಸಂಘದ ವತಿಯಿಂದContinue reading “ದಿಶಾ ಸರ್ಜಿಕಲ್ಸ್ ಎಂಡ್ ಲೈಫ್ ಕೇರ್ ಆಡಳಿತ ಪಾಲುದಾರ ಅಂಬಲಪಾಡಿ ಭರತ್ ಶೆಟ್ಟಿಯವರಿಗೆ ಸನ್ಮಾನ”

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ‌ ಇಂದು ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೆರವೇರಿಸಿದರು.‌ ಬಳಿಕ ಮಾತನಾಡಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ ಜನ್ಮದಿನದಿಂದ ಗಾಂಧಿ ಜಯಂತಿ ತನಕ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಈ ಎಲ್ಲ ಸೇವಾ ಕಾರ್ಯಗಳ ಪುಣ್ಯದ ಫಲ ನಮ್ಮ ವಿಶ್ವನಾಯಕ ಮೋದೀಜಿಯವರಿಗೆContinue reading “ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ರಕ್ತದಾನ ಶಿಬಿರ”

Design a site like this with WordPress.com
Get started