ಉಡುಪಿ ಜಿಲ್ಲೆಯ ಜನಾಶೀರ್ವಾದ ಯಾತ್ರೆಯ ಅಂಗವಾಗಿ ಬ್ರಹ್ಮಾವರದ ಪಡಿತರ ವಿತರಣಾ ಕೇಂದ್ರಕ್ಕೆ ಬೇಟಿ ನೀಡಲು ಆಗಮಿಸಿದ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವರ ನೇತೃತ್ವದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಇದರ ಸಹಯೋಗದೊಂದಿಗೆ, ಚಂಡೆ-ಕೊಂಬು-ಕಹಳೆ, ಯಕ್ಷಗಾನ ವೇಷದಾರಿಗಳ ಸಹಿತ ಪಕ್ಷದ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಮಾಗಮದೊಂದಿಗೆ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕೇಂದ್ರ ಸಚಿವೆ ಶೋಭಾContinue reading “ಬ್ರಹ್ಮಾವರ ಪಡಿತರ ವಿತರಣಾ ಕೇಂದ್ರಕ್ಕೆ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಭೇಟಿ: ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ ಅದ್ದೂರಿಯ ಸ್ವಾಗತ”
Tag Archives: ಸ್ಥಳೀಯ ಸುದ್ದಿ
ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ: ಹಿಂ.ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಜನ್ಮದಿನಾಚರಣೆ
ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ರಾಜ್ಯ ಕಂಡ ಹಿಂದುಳಿದ ವರ್ಗದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ನಾಯಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷೆ ಲೀಲಾ ಆರ್. ಅಮೀನ್ ರವರ ನಿವಾಸದಲ್ಲಿ ಪುಷ್ಪಾಂಜಲಿ ಕಾರ್ಯಕ್ರಮದೊಂದಿಗೆ ಗೌರವ ನಮನ ಸಲ್ಲಿಸಲಾಯಿತು. ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಪಣಿಯೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿContinue reading “ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ: ಹಿಂ.ವರ್ಗಗಳ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಜನ್ಮದಿನಾಚರಣೆ”
ಬಿಜೆಪಿ ಜಿಲ್ಲಾ ರೈತ ಮೋರ್ಚಾ: ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ
ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಯವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಜಿಲ್ಲಾ ರೈತ ಮೋರ್ಚಾ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಯವರು ಜ್ಯೋತಿ ಬೆಳಗಿಸಿ, ಭಾರತ ಮಾತೆಗೆ ಪುಷ್ಪಾರ್ಚನೆಗೈಯುವ ಮೂಲಕ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ರೈತ ಮೋರ್ಚಾ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯ ಕಾರ್ಯಸೂಚಿಯಂತೆ 75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಜಿಲ್ಲೆಯ 75 ಹಿರಿಯ ಕೃಷಿಕರನ್ನುContinue reading “ಬಿಜೆಪಿ ಜಿಲ್ಲಾ ರೈತ ಮೋರ್ಚಾ: ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಆ.16ರ ಪತ್ರಿಕಾ ಗೋಷ್ಠಿ
ಆಗಸ್ಟ್ 19: ಉಡುಪಿಯಲ್ಲಿ ನೂತನ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ* ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಶಯದಂತೆ ದೇಶಾದ್ಯಂತ ಕೇಂದ್ರ ಸಚಿವರ ನೇತೃತ್ವದಲ್ಲಿ ನೂತನ ಕೇಂದ್ರ ಸಚಿವರನ್ನು ಪರಿಚಯಿಸುವ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳನ್ನು ಪ್ರಚಲಿತಗೊಳಿಸುವ ನಿಟ್ಟಿನಲ್ಲಿ “ಜನಾಶೀರ್ವಾದ ಯಾತ್ರೆ”ಯು ಆಗಸ್ಟ್ 16ರಿಂದ ಪ್ರಾರಂಭಗೊಂಡಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಆಗಸ್ಟ್ 16ರಂದುContinue reading “ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಆ.16ರ ಪತ್ರಿಕಾ ಗೋಷ್ಠಿ”
ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ
ಸ್ವಾತಂತ್ರೋತ್ಸವದ ಪ್ರಯುಕ್ತ ಪ್ರತಿ ಸಂಚಾಯತ್ ಮಟ್ಟದಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನ ಚಾಲನೆ: ಕೆ. ರಘುಪತಿ ಭಟ್ , ಮಾನ್ಯ ಶಾಸಕರು, ಉಡುಪಿ ವಿಧಾನಸಭಾ ಕ್ಷೇತ್ರ ದಿನಾಂಕ: 15-08-2021 ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ತನಕ ಸ್ಥಳ: ಬಿಜೆಪಿ ಕಛೇರಿ, ಬ್ರಹ್ಮಾವರ
ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಅಧ್ಯಕ್ಷರಾಗಿ ವಾಮನ್ ಪಾಲನ್ ಆಯ್ಕೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಗೆ ಚೊಚ್ಚಲ ಪ್ರಶಸ್ತಿ
ಉಡುಪಿ: ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಹಿರಿಮೆಗೆ ಇನ್ನೊಂದು ಗರಿ ಸೇರ್ಪಡೆಯಾಗಿದೆ. ವರ್ಲ್ಡ್ ಅಸೋಸಿಯೇಶನ್ ಆಫ್ ಕಿಕ್ ಬಾಕ್ಸಿಂಗ್ ಅರ್ಗನೈಸೇಷನ್ಸ್ (ಡಬ್ಲ್ಯೂಎಕೆಒ) ವಕೊ ಇಂಡಿಯಾ ಇದರ ಅಂಗ ಸಂಸ್ಥೆಯಾದ ವಕೊ ಕರ್ನಾಟಕ ಇದರಿಂದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಗೆ ಸದಸ್ಯತ್ವದ ಮಾನ್ಯತೆ ದೊರೆತಿದೆ. ಉಡುಪಿ ಜಿಲ್ಲೆಯ ಕಿಕ್ ಬಾಕ್ಸಿಂಗ್ ಸಂಘಟನೆಯ ಅಧ್ಯಕ್ಷರನ್ನಾಗಿ ವಾಮನ್ ಪಾಲನ್ ಇವರನ್ನು ನೇಮಕ ಮಾಡಲಾಗಿದೆ. ಆಗಸ್ಟ್ 11 ರಂದು ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿContinue reading “ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಶನ್ ಅಧ್ಯಕ್ಷರಾಗಿ ವಾಮನ್ ಪಾಲನ್ ಆಯ್ಕೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಗೆ ಚೊಚ್ಚಲ ಪ್ರಶಸ್ತಿ”
ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬೇಟಿ
ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಚಿವರನ್ನು ಸ್ವಾಗತಿಸಿ ಶಾಲು ಹೊದೆಸಿ ಪುಸ್ತಕ ನೀಡಿ ಗೌರವಿಸಿದರು. ಸಚಿವರು ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷContinue reading “ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಬೇಟಿ”
ಉಡುಪಿ ಪುರಭವನದಲ್ಲಿ ಜಿಲ್ಲಾ ಬಿಜೆಪಿಯಿಂದ ಆಶೀರ್ವಾದ ಯಾತ್ರೆ, ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಅಭಿನಂದನೆ.
ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ’ವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16, ಸೋಮವಾರ ಬೆಳಿಗ್ಗೆ 11.45ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರContinue reading “ಉಡುಪಿ ಪುರಭವನದಲ್ಲಿ ಜಿಲ್ಲಾ ಬಿಜೆಪಿಯಿಂದ ಆಶೀರ್ವಾದ ಯಾತ್ರೆ, ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಅಭಿನಂದನೆ.”
ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಉಡುಪಿ ಮತ್ತು ದ.ಕ. ಜಿಲ್ಲೆಗಳ ನೂತನ ಸಚಿವರಿಗೆ ಪ್ರಮುಖ ಖಾತೆಗಳ ಹಂಚಿಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲೆಯ ಸುಳ್ಯ ಶಾಸಕ ಎಸ್.ಅಂಗಾರ ಮೀನುಗಾರಿಕೆ, ಬಂದರು ಮತ್ತುContinue reading “ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ “
ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ
ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರು ಹಾಗೂ ಕರಾಟೆ ಮುಖ್ಯ ಶಿಕ್ಷಕರು, ಮುಖ್ಯ ಪರೀಕ್ಷಕರು ಆಗಿರುವ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ ಇವರು ಕರಾಟೆ ಕ್ರೀಡೆಯ ಪ್ರಮುಖ ಘಟ್ಟವಾಗಿರುವ ಬ್ಲ್ಯಾಕ್ ಬೆಲ್ಟ್ ಆರನೇ ಪದವಿಯನ್ನು ಪಡೆಯುವುದರೊಂದಿಗೆ ಶಿಹಾನ್ ಶ್ರೇಣಿಯಿಂದ ರೆಂಷಿ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ. ಇವರು ಕರಾಟೆ ಬ್ಲ್ಯಾಕ್ ಬೆಲ್ಟ್ ಆರನೇ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ, ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಆಸ್ಟ್ರೇಲಿಯಾ ಇದರ ಏಷ್ಯಾ ಮುಖ್ಯ ಶಿಕ್ಷಕ ಹಂಷಿ ಬಿ. ಪರಮೇಶ್Continue reading “ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ”