ಕಾಪು ಪುರಸಭಾ ಚುನಾವಣೆ ಹಾಗೂ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಬಗ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು ಅಧ್ಯಕ್ಷತೆಯಲ್ಲಿ ಕಾಪುವಿನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪುರಸಭಾ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಹಾಗೂ ಬೂತ್ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾಗಿರುವ ಅಗತ್ಯ ಕಾರ್ಯಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮುಂದಿನ ಚುನಾವಣೆಯನ್ನು ಗೆಲ್ಲುವ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಯಿತು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿContinue reading “ಕಾಪು ಪುರಸಭಾ ಚುನಾವಣೆಗೆ ಬಿಜೆಪಿ ಪೂರ್ವತಯಾರಿ ಸಭೆ”
Tag Archives: ಸ್ಥಳೀಯ ಸುದ್ದಿ
ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಅನಾವರಣ
ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ಇಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಅನಾವರಣಗೊಂಡಿತು. ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಡಿಕ್ಷನರಿ ಅನಾವರಣಗೊಳಿಸಿ ಮಾತನಾಡಿ, ಕೊಪ್ಪರಿಗೆ ಡಿಕ್ಷನರಿಯಲ್ಲಿ ತುಳು ಭಾಷೆಯ 1200 ಪದಗಳಿಗಸ ಉಚ್ಚಾರ, ಅರ್ಥ ಸಹಿತ ವಿವರಿಸಿ ತಿಳಿದಲಾಗಿದೆ. ಅಲ್ಲದೆ ಇಂದಿನ ತಂತ್ರಜ್ಞಾನಕ್ಕೆ ಹೊಂದಾಣಿಕೆಯಾಗುವಂತೆ ಈ ಡಿಕ್ಷನರಿ ಆನ್ಲೈನ್ ಮೂಲಕ ಲಭ್ಯವಾಗುತ್ತಿರುವುದು ನಿಜವಾಗಿಯೂ ಸಂತೋಷದ ವಿಚಾರ ಎಂದು ತಿಳಿಸಿದರು.ಈ ಸಂದರ್ಭ ಜೈ ತುಳುನಾಡು ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯContinue reading “ತುಳುಭಾಷೆಯ ಪ್ರಪ್ರಥಮ ಆನ್ಲೈನ್ ಡಿಕ್ಷನರಿ ‘ಕೊಪ್ಪರಿಗೆ’ ಅನಾವರಣ”
ಸರಕಾರ ಕರಾಟೆ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಿ ಪ್ರೋತ್ಸಾಹಧನ ಒದಗಿಸುವಂತೆ ಮನವಿ: ವಾಮನ್ ಪಾಲನ್ ಅಂಬಲಪಾಡಿ
ಕರಾಟೆ ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಒಂದು ಅತ್ಯುತ್ತಮ ಕ್ರೀಡೆಯಾಗಿದೆ. ಶಾಲಾ ವಿದ್ಯಾರ್ಥಿಗಳಿಂದ ಮೊದಲ್ಗೊಂಡು ಎಲ್ಲ ವಯೋಮಾನದ ಜನತೆ ಆರೋಗ್ಯದ ಕಾಳಜಿಯಿಂದ ಕರಾಟೆ ಅಭ್ಯಾಸದಲ್ಲಿ ನಿರತರಾಗಿರುವುದು ವಾಸ್ತವ. ಆದರೆ ಕಠಿಣ ಪರಿಶ್ರಮದಿಂದ ಹಾಗೂ ಬದ್ಧತೆಯಿಂದ ಕರಾಟೆ ತರಗತಿಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಕರಾಟೆ ಶಿಕ್ಷಕರು ಕೋವಿಡ್ ನಿಯಂತ್ರಣಕ್ಕಾಗಿ ಸರಕಾರ ಕೈಗೊಂಡಿರುವ ಸಮಯೋಚಿತ ಲಾಕ್ ಡೌನ್ ನಿರ್ಧಾರದಿಂದ ಸಂಕಷ್ಟಕ್ಕೆ ಒಳಗಾಗಿದ್ದು ಜೀವನೋಪಾಯಕ್ಕಾಗಿ ಹರಸಾಹಸ ಪಡುತ್ತಿರುವುದು ಎಲ್ಲರಿಗೂ ತಿಳಿದ ವಿಚಾರವಾಗಿದೆ. ಕರಾಟೆ ಶಿಕ್ಷಕರು ಕೇವಲ ಕರಾಟೆ ತರಗತಿಗಳಿಗೆContinue reading “ಸರಕಾರ ಕರಾಟೆ ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸಿ ಪ್ರೋತ್ಸಾಹಧನ ಒದಗಿಸುವಂತೆ ಮನವಿ: ವಾಮನ್ ಪಾಲನ್ ಅಂಬಲಪಾಡಿ”
ಅಂಬಲಪಾಡಿ ಗ್ರಾಮ : 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ
ಹಡಿಲು ಭೂಮಿ ಕೃಷಿ ಅಂದೋಲನದಡಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಉಡುಪಿ ಇದರ ಆಶ್ರಯದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕ್ರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಜು.1ರಂದು ಅಂಬಲಪಾಡಿ ಗ್ರಾಮದ ಕುಂಜಗುಡ್ಡೆಯಲ್ಲಿ 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಎಮ್. ಗಂಗಾಧರ್ ರಾವ್ ಅಧ್ಯಕ್ಷರು ಯಕ್ಷಗಾನ ಕಲಾರಂಗ ಉಡುಪಿ ಹಾಗೂ ಎಮ್. ಗೋಪಾಲ್ ಭಟ್ ಅಧ್ಯಕ್ಷರು ಎ.ಸಿ.ಸಿ.ಇ.ಎ. ಉಡುಪಿ ಇವರು ಭೂ ಮಾತೆಗೆContinue reading “ಅಂಬಲಪಾಡಿ ಗ್ರಾಮ : 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ”
ಮಹಿಳಾ ಸಬಲೀಕರಣದಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ : ಶಶಿಕಲಾ ವಿ. ಟೆಂಗಳಿ
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಸಭೆಯಲ್ಲಿ ಭಾಗಿ ಮಹಿಳೆಯರು ಇಂದು ಸ್ವಾವಲಂಬನೆ ಮತ್ತು ಆತ್ಮ ವಿಶ್ವಾಸದೊಂದಿಗೆ ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಮಹಿಳಾ ಸಬಲೀಕರಣದತ್ತ ಬಿಜೆಪಿ ಮಹಿಳಾ ಮೋರ್ಚಾದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಬೇಟಿ ನೀಡಿ, ಜಿಲ್ಲಾ ಮಹಿಳಾ ಮೋರ್ಚಾದContinue reading “ಮಹಿಳಾ ಸಬಲೀಕರಣದಲ್ಲಿ ಮಹಿಳಾ ಮೋರ್ಚಾದ ಪಾತ್ರ ಮಹತ್ವಪೂರ್ಣ : ಶಶಿಕಲಾ ವಿ. ಟೆಂಗಳಿ”
ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ
ಉಡುಪಿ : ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ ನಾಗರಿಕರು ಕೋವಿಡ್‍ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಪ್ ಕ್ವಾರೆಂಟೈನ್ ಆಗಿರುವ ಸನ್ನಿವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‍ನಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ಸಹಾಯದೊಂದಿಗೆ ಲಸಿಕೆ ವಿತರಣಾ ಅಭಿಯಾನದಲ್ಲೂ ಸರಕಾರ ಮತ್ತು ಅಧಿಕಾರಿಗಳ ಜೊತೆ ಕೈಜೋಡಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಅಂತಹ ಎಲ್ಲ ಕಾರ್ಯಕರ್ತರ ಸೇವಾ ಮನೋಭಾವContinue reading “ಕೋವಿಡ್ ನಿರ್ವಹಣೆಯಲ್ಲಿ ಬಿಜೆಪಿ ಕಾರ್ಯಕರ್ತರ ಸೇವೆ ಮಹತ್ವಪೂರ್ಣ – ಗೃಹ ಸಚಿವ ಬಸವರಾಜ ಬೊಮ್ಮಾಯಿ”
ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು – ಖಾಸಗಿ ಬಸ್ ಮಾಲಕರ ಜತೆ ಶಾಸಕ ರಘುಪತಿ ಭಟ್ ಸಭೆ
ಕೋವಿಡ್ – 19 ಲಾಕ್ ಡೌನ್ ನಿಂದ ಬಸ್ಸು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಸ್ತುತ ಅನ್ ಲಾಕ್ ಆದರೂ ಬಸ್ಸು ಸಂಚಾರ ಆರಂಭಿಸದ ಹಿನ್ನಲೆಯಲ್ಲಿ ನಿತ್ಯದ ಕೆಲಸ ಕಾರ್ಯಗಳಿಗೆ ತೆರಳುವ ಜನ ಸಾಮಾನ್ಯರು ಸಂಕಷ್ಟ ಪಡುವುದನ್ನು ಗಮನಿಸಿ ಉಡುಪಿ ಶಾಸಕ ಕೆ. ರಘುಪತಿ ಭಟ್ ರವರು ಬಸ್ಸು ಸಂಚಾರ ಪುನರಾರಂಭಿಸಲು ಇಂದು ದಿನಾಂಕ 25-06-2021 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಖಾಸಗಿ ಬಸ್ ಮಾಲಕರ ಸಂಘದವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕೋವಿಡ್ ನಿಯಮಾವಳಿಯಂತೆ ಸಾಮಾಜಿಕContinue reading “ಉಡುಪಿ ಜಿಲ್ಲೆಯಲ್ಲಿ ಜುಲೈ 1 ರಿಂದ ಬಸ್ ಸಂಚಾರ ಆರಂಭಿಸುವ ಬಗ್ಗೆ ಅಧಿಕಾರಿಗಳು – ಖಾಸಗಿ ಬಸ್ ಮಾಲಕರ ಜತೆ ಶಾಸಕ ರಘುಪತಿ ಭಟ್ ಸಭೆ”
ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಭಾಗಿ
ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ತನ್ನ ಬದುಕನ್ನೇ ಮುಡಿಪಾಗಿಟ್ಟು ಹೋರಾಟ ನಡೆಸಿದ ಅಪ್ಪಟ ದೇಶಪ್ರೇಮಿ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನ ದಿನದ ಅಂಗವಾಗಿ ಜೂನ್ 23ರಂದು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಮುಜರಾಯಿ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದರು.ಅವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದುContinue reading “ಜನಸಂಘದ ಸಂಸ್ಥಾಪಕ, ಅಪ್ಪಟ ದೇಶ ಪ್ರೇಮಿ ಡಾ! ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯಲ್ಲಿ ಸಚಿವ ಕೋಟ ಭಾಗಿ”
ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ – ಕುಯಿಲಾಡಿ
ಅಂದು ಅಖಂಡ ಭಾರತದ ಪರಿಕಲ್ಪನೆಗೆ ಬೀಜ ಬಿತ್ತಿದವರು ಡಾ! ಶ್ಯಾಮಪ್ರಸಾದ್ ಮುಖರ್ಜಿಯವರು. ಅದನ್ನು ಇಂದು ಸಾಕಾರಗೊಳಿಸಿದವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರವರು. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ಮತ್ತು 35ಎ ರದ್ದುಗೊಳಿಸುವ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಅಖಂಡ ಭಾರತದ ಕನಸನ್ನು ನನಸಾಗಿಸಿದೆ. ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ದೂರದರ್ಶಿತ್ವದ ಚಿಂತನೆಗಳು, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ ಎಂದು ಬಿಜೆಪಿ ಜಿಲ್ಲಾಧ್ಯಕ್ಷContinue reading “ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ದೂರದರ್ಶಿತ್ವದ ಚಿಂತನೆ, ತತ್ವಾದರ್ಶಗಳು, ತ್ಯಾಗ, ಬಲಿದಾನ ಕಾರ್ಯಕರ್ತರಿಗೆ ದಾರಿದೀಪ – ಕುಯಿಲಾಡಿ”
ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ವ್ರಕ್ಷಾಪರೋಹಣ – ಕುಯಿಲಾಡಿ ಸುರೇಶ್ ನಾಯಕ್
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ವ್ರಕ್ಷಾಪರೋಹಣಕ್ಕೆ ಚಾಲನೆ ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಕಾಪಾಡಲು ಬಲಿದಾನಗೈದ ಅಪ್ರತಿಮ ದೇಶಭಕ್ತ, ಜನಸಂಘದ ಸಂಸ್ಥಾಪಕ ಡಾ! ಶ್ಯಾಮಪ್ರಸಾದ್ ಮುಖರ್ಜಿ ಯವರ ಬಲಿದಾನದ ದಿನ ಜೂನ್ 23ರಿಂದ ಅವರ ಜನ್ಮ ದಿನ ಜುಲೈ 6ರ ವರೆಗೆ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ಸಸಿ ನೆಡುವ ಕಾರ್ಯಕ್ರಮದ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳನ್ನು ಗೌರವಿಸಲಾಗುವುದು. ಈ ಬ್ರಹತ್ ಅಭಿಯಾನದಲ್ಲಿ ಪಕ್ಷದ ಎಲ್ಲContinue reading “ಡಾ! ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಪ್ರಯುಕ್ತ ಜಿಲ್ಲೆಯಾದ್ಯಂತ ವ್ರಕ್ಷಾಪರೋಹಣ – ಕುಯಿಲಾಡಿ ಸುರೇಶ್ ನಾಯಕ್”