ಕೊರೋನಾ ವಾರಿಯರ್ಸ್ ಗೆ ಸನ್ಮಾನ

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನತೆಯ ಆರೋಗ್ಯ ಸಂರಕ್ಷಣೆಯ ಸತ್ಕಾರ್ಯದಲ್ಲಿ ಸೇವಾ ನಿರತರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರಾದ ಉಡುಪಿಯ ಪ್ರವೀಣ, ಮಲ್ಪೆಯ ವಿಶಾಲ ನಾಯ್ಕ್ ಹಾಗೂ ಆಶಾ ಕಾರ್ಯಕರ್ತೆಯರಾದ ಅಂಬಲಪಾಡಿ ನಗರದ ಸರಸ್ವತಿ ಕೆ. ಶ್ರೀಯಾನ್, ಅಂಬಲಪಾಡಿ ಗ್ರಾಮಾಂತರದ ಗಾಯತ್ರಿ, ಕಪ್ಪೆಟ್ಟು ವಾರ್ಡಿನ ನಿಶಾ ಕಿದಿಯೂರು ಮತ್ತು ಉಚಿತ ಆಟೋ ಸೇವೆ ನೀಡುತ್ತಿರುವ ಆಟೋ ಚಾಲಕ ಶ್ರೀನಿವಾಸ್ ಕಪ್ಪೆಟ್ಟು ಇವರನ್ನು ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅಂಬಲಪಾಡಿContinue reading “ಕೊರೋನಾ ವಾರಿಯರ್ಸ್ ಗೆ ಸನ್ಮಾನ”

ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ

ಪ್ರಾರಂಭದ ದಿನಗಳಿಂದಲೂ ಕೋವಿಡ್ ಲಸಿಕೆಯ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸಿಗರು ತಾವು ಮಾತ್ರ ಗುಟ್ಟಾಗಿ ಲಸಿಕೆ ಪಡೆದುಕೊಂಡು ಜನಸಾಮಾನ್ಯರ ದಾರಿತಪ್ಪಿಸಿ ವಂಚಿಸುವ ಕಾಯಕದಲ್ಲಿ ನಿರತರಾಗಿರುವ ಜೊತೆಗೆ ಇದೀಗ ಲಸಿಕೆ ಕೊಡಿಸಲು ಒತ್ತಾಯಿಸುವ ನಾಟಕವಾಡುತ್ತಿರುವುದು ಹಾಸ್ಯಾಸ್ಪದ. ಕೇವಲ ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಹೇಳಿದ್ದಾರೆ. ಅವರು ಲಸಿಕೆ ಹೆಸರಲ್ಲಿ ಬಿಜೆಪಿ ಸ್ವಜನ ಹಿತಾಸಕ್ತಿ ಎಂಬ ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ನಕ್ರೆಯವರ ಆರೋಪವನ್ನು ಖಂಡಿಸಿ, ಕಾಂಗ್ರೆಸಿಗರಿಗೆContinue reading “ಅಪಪ್ರಚಾರವೇ ಕಾಂಗ್ರೆಸಿಗರ ಮೂಲ ಉದ್ದೇಶ: ಗುರುಪ್ರಸಾದ್ ಶೆಟ್ಟಿ ಕಟಪಾಡಿ”

ಪ್ರಧಾನಿ ಮೋದಿ ಆಡಳಿತದ ಸಾರ್ಥಕ 7 ವರ್ಷಗಳ ಪ್ರಯುಕ್ತ ಜಿಲ್ಲೆಯಾದ್ಯಂತ ಸೇವಾ ಕಾರ್ಯಗಳ ಮಹಾಪೂರ: ಕುಯಿಲಾಡಿ ಸುರೇಶ್ ನಾಯಕ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸಾರ್ಥಕ ಆಡಳಿತದ ಏಳನೇ ವರ್ಷ ಪೂರೈಸಿರುವ ಸುಸಂದರ್ಭದಲ್ಲಿ ರಾಜ್ಯ ಬಿಜೆಪಿಯ ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಮೇ 30ರಂದು ಸೇವಾ ಹೀ ಸಂಘಟನ್ ತತ್ವದಡಿ ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಹಾಗೂ ವಿವಿಧ ಸ್ಥಳಗಳಲ್ಲಿ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಮೋರ್ಚಾಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರ ನೇತೃತ್ವದಲ್ಲಿ ಒಟ್ಟು 1,297 ಸೇವಾ ಕಾರ್ಯಗಳು ಯಶಸ್ವಿಯಾಗಿ ನಡೆದಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ವಿವಿಧContinue reading “ಪ್ರಧಾನಿ ಮೋದಿ ಆಡಳಿತದ ಸಾರ್ಥಕ 7 ವರ್ಷಗಳ ಪ್ರಯುಕ್ತ ಜಿಲ್ಲೆಯಾದ್ಯಂತ ಸೇವಾ ಕಾರ್ಯಗಳ ಮಹಾಪೂರ: ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವತಿಯಿಂದ ಉಡುಪಿ ಜಿಲ್ಲೆಗೆ ಉಚಿತ ಆಂಬುಲೆನ್ಸ್ ಸೇವೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ರವರು ಉಡುಪಿ ಜಿಲ್ಲಾ ಬಿಜೆಪಿಯ ಜಿಲ್ಲಾ ಕೋವಿಡ್ ಸಹಾಯವಾಣಿಗೆ ಕೊಡಮಾಡಿದ ಅಂಬ್ಯುಲೆನ್ಸ್ ನ್ನು ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಕೋವಿಡ್ ಸಂಬಂಧಿತ ತುರ್ತು ಉಪಯೋಗಕ್ಕಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ,Continue reading “ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವತಿಯಿಂದ ಉಡುಪಿ ಜಿಲ್ಲೆಗೆ ಉಚಿತ ಆಂಬುಲೆನ್ಸ್ ಸೇವೆ.”

ಜನ ಸೇವೆಯ ಜೊತೆಗೆ ಸ್ವಯಂ ಕಾಳಜಿ ಅಗತ್ಯ: ಡಾ! ನಿ.ಬೀ. ವಿಜಯ ಬಲ್ಲಾಳ್

ಕೋವಿಡ್ ವಾರಿಯರ್ಸ್ ಹಾಗೂ ಕೋವಿಡ್-19 ಹೆಲ್ಪ್ ಡೆಸ್ಕ್ ಸೇವಾ ನಿರತ ಕಾರ್ಯಕರ್ತರು ಜನ ಸೇವೆಯ ಜೊತೆಗೆ ಸ್ವಯಂ ಅರೋಗ್ಯ ಪಾಲನೆಯ ಕಾಳಜಿಯನ್ನೂ ವಹಿಸುವುದು ಅತೀ ಅಗತ್ಯ ಎಂದು ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು. ಅವರು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ನೇತೃತ್ವದಲ್ಲಿ ಉಡುಪಿ ನಗರ ಆರಕ್ಷಕ ಠಾಣೆಯ ಮಾರ್ಗದರ್ಶನದಲ್ಲಿ ಯುವಕ ಮಂಡಲ (ರಿ.) ಅಂಬಲಪಾಡಿ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳContinue reading “ಜನ ಸೇವೆಯ ಜೊತೆಗೆ ಸ್ವಯಂ ಕಾಳಜಿ ಅಗತ್ಯ: ಡಾ! ನಿ.ಬೀ. ವಿಜಯ ಬಲ್ಲಾಳ್”

ದೇಶವಿರೋಧಿ ಕಾಂಗ್ರೆಸ್ ಟೂಲ್ ಕಿಟ್ : ಕುಯಿಲಾಡಿ ಸುರೇಶ್ ನಾಯಕ್ ಖಂಡನೆ

ದೇಶ ವಿರೋಧಿ ಕಾಂಗ್ರೆಸ್ ಟೂಲ್ ಕಿಟ್ ಕುಕೃತ್ಯ ಬಹಿರಂಗಗೊಳ್ಳುವ ಮೂಲಕ ಕಾಂಗ್ರೆಸ್ ಪಕ್ಷದ ಮುಖವಾಡ ಕಳಚಿ ಬಿದ್ದಿದೆ. ಇಡೀ ದೇಶವು ಕೋವಿಡ್ ವಿರುದ್ಧ ಒಗ್ಗಟ್ಟಿನಿಂದ ಹೋರಾಡುತ್ತಿರುವ ಈ ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಪರಿಸ್ಥಿತಿಯ ದುರ್ಲಾಭ ಪಡೆದು ದೇಶದ ವಿರುದ್ಧ ಅವಮಾನಕರ ಸನ್ನಿವೇಶವನ್ನು ಸೃಷ್ಟಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ದೇಶದಲ್ಲಿನ ಸಾವು ನೋವುಗಳ ವೈಭವೀಕರಣದ ಜೊತೆಗೆ ಉತ್ತರಾಖಂಡದ ಕುಂಭ ಮೇಳದ ಕುರಿತು ಸೂಪರ್ ಸ್ಪ್ರೆಡರ್ ಎಂದು ಬಿಂಬಿಸಿರುವುದು, ಆಸ್ಪತ್ರೆಗಳಲ್ಲಿಹಾಸಿಗೆಗಳ ಕೃತಕ ಕೊರತೆContinue reading “ದೇಶವಿರೋಧಿ ಕಾಂಗ್ರೆಸ್ ಟೂಲ್ ಕಿಟ್ : ಕುಯಿಲಾಡಿ ಸುರೇಶ್ ನಾಯಕ್ ಖಂಡನೆ”

ಕೋವಿಡ್ ಸಂಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದ ಸ್ಪಂದನೆ ಅಭಿನಂದನೀಯ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ : ರಾಜ್ಯದಾದ್ಯಂತ ಕೋವಿಡ್-19 2ನೇ ಅಲೆಯ ಸಂಕಷ್ಟಕ್ಕೆ ಒಳಗಾಗಿರುವ ಕೃಷಿಕರು, ಕಟ್ಟಡ ಕಾರ್ಮಿಕರು, ಆಟೋ ಟ್ಯಾಕ್ಸಿ ಚಾಲಕರು ಹಾಗೂ ಹಲವು ವೃತ್ತಿ ನಿರತ ಸಮುದಾಯಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದಿಂದ ರೂ.1,250 ಕೋಟಿಗೂ ಹೆಚ್ಚಿನ ಮೌಲ್ಯದ ಆರ್ಥಿಕ ಪರಿಹಾರ ಘೋಷಣೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದ್ದಾರೆ. ಕೋವಿಡ್ ಸಂಕಷ್ಟದ ನಡುವೆ ರಾಜ್ಯ ಸರಕಾರದ ಈ ಆರ್ಥಿಕ ನೆರವಿನ ಪ್ಯಾಕೇಜ್‍ನಿಂದ ರೈತರು ಮತ್ತು ಅಸಂಘಟಿತ ವಲಯಗಳ ಶ್ರಮಿಕರಿಗೆ ಪ್ರಯೋಜನವಾಗಲಿದೆ. ಇದರ ಜೊತೆಗೆContinue reading “ಕೋವಿಡ್ ಸಂಕಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರದ ಸ್ಪಂದನೆ ಅಭಿನಂದನೀಯ : ಕುಯಿಲಾಡಿ ಸುರೇಶ್ ನಾಯಕ್”

ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಉಳುಮೆಗೆ ಶಾಸಕ ರಘುಪತಿ ಭಟ್ ಚಾಲನೆ – ತೋಡುಗಳ ಹೂಳೆತ್ತುವಿಕೆ ವೀಕ್ಷಣೆ.

ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಸಂಬಂಧ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ವಾರ್ಡಿನಲ್ಲಿ ಗ್ರಾಮಸ್ಥರು, ಭೂ ಮಾಲಕರು ಮತ್ತು ಸ್ಥಳೀಯ ಪ್ರಮುಖರೊಂದಿಗೆ ಶಾಸಕ ಕೆ.ರಘುಪತಿ ಭಟ್ ಭೂಮಿ ಪೂಜೆ ನೆರವೇರಿಸಿ ಹಡಿಲು ಕೃಷಿ ಭೂಮಿಯ ಉಳುಮೆಗೆ ಚಾಲನೆ ನೀಡಿದರು. ಬಳಿಕ ಹಡಿಲು ಭೂಮಿಯ ಸುತ್ತಮುತ್ತಲಿನ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿ ಗದ್ದೆಗಳ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ತೋಡುಗಳನ್ನು ಪುನಶ್ಚೇತನಗೊಳಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷContinue reading “ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಡಿಲು ಭೂಮಿ ಉಳುಮೆಗೆ ಶಾಸಕ ರಘುಪತಿ ಭಟ್ ಚಾಲನೆ – ತೋಡುಗಳ ಹೂಳೆತ್ತುವಿಕೆ ವೀಕ್ಷಣೆ.”

ಲೋಕ ಕ್ಷೇಮಕ್ಕಾಗಿ ಉಡುಪಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ಸೇವೆ

ಉಡುಪಿ ಕ್ಷೇತ್ರದ ಸದ್ಭಕ್ತರೆಲ್ಲಾ ಸೇರಿ ಕೊರೋನಾ ಮುಕ್ತ ಭಾರತ, ಸುಖೀ ಸಮೃದ್ಧ ಸುಭಿಕ್ಷ ಶಾಂತಿಪೂರ್ಣ ನೆಮ್ಮದಿಯ ಭಾರತ ಮತ್ತು ಲೋಕ ಕ್ಷೇಮಕ್ಕಾಗಿ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಯವರಿಗೆ ಕೊರೋನಾ ಸಂಕಷ್ಟದ ಹೋರಾಟದಲ್ಲಿ ಅದ್ಭುತ ಯಶಸ್ಸು ಸಿಗಲೆಂದು ಪ್ರಾರ್ಥಿಸಿ ಉಡುಪಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ಸೇವೆಯನ್ನು ಸಲ್ಲಿಸಿದರು. ಪೂಜ್ಯ ಪಲಿಮಾರು ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥContinue reading “ಲೋಕ ಕ್ಷೇಮಕ್ಕಾಗಿ ಉಡುಪಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ಸೇವೆ”

ಪ.ಬಂಗಾಲ ಗೂಂಡಾಗಿರಿ ಮಮತಾ ಬ್ಯಾನರ್ಜಿಯ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ: ಶೋಭಾ ಕರಂದ್ಲಾಜೆ

ಪಶ್ಚಿಮ ಬಂಗಾಲದಲ್ಲಿ ಚುನಾವಣಾ ಫಲಿತಾಂಶದ ಬಳಿಕ ಸಂಭವಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ತ್ರಣಮೂಲ ಕಾಂಗ್ರೆಸ್ ಗೂಂಡಾಗಿರಿ, ದಾಂಧಲೆ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ ಬರೆದಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಪ.ಬಂಗಾಲದಲ್ಲಿ ಮಮತಾ ಬ್ಯಾನರ್ಜಿಯ ಟಿ.ಎಂ.ಸಿ. ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಿಂಸಾಚಾರ, ಗೂಂಡಾಗಿರಿ ಪ್ರತಿಭಟಿಸಿ, ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಪ್ಪತೈದು ವರ್ಷಗಳ ಪರ್ಯಂತ ಒಂದೇ ಮುಖ್ಯಮಂತ್ರಿಯನ್ನು ಮುಂದುವರಿಸಿಕೊಂಡು ಬಂದು ಕಮ್ಯುನಿಷ್ಟ್ ರಾಜ್ಯವೆನಿಸಿಕೊಂಡಿದ್ದರೂContinue reading “ಪ.ಬಂಗಾಲ ಗೂಂಡಾಗಿರಿ ಮಮತಾ ಬ್ಯಾನರ್ಜಿಯ ತ್ರಣಮೂಲ ಕಾಂಗ್ರೆಸ್ ಅಧಪತನಕ್ಕೆ ಮುನ್ನುಡಿ: ಶೋಭಾ ಕರಂದ್ಲಾಜೆ”

Design a site like this with WordPress.com
Get started