ಜನವರಿ 12, 2021ರಂದು ರಾಜ್ಯ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಉಡುಪಿ ಅಂಬಾಗಿಲು ಅಮೃತ್ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ”ದ ಪೂರ್ವಭಾವಿ ಸಭೆಯು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ನಗರ ಬಿಜೆಪಿ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಮಾವೇಶದContinue reading “ಬಿಜೆಪಿ ಜಿಲ್ಲಾ ಮಟ್ಟದ “ಜನ ಸೇವಕ ಸಮಾವೇಶ” ದ ಪೂರ್ವಭಾವಿ ಸಭೆ”
Tag Archives: ಸ್ಥಳೀಯ ಸುದ್ದಿ
ಗ್ರಾ.ಪಂ. ಚುನಾವಣಾ ಸೋಲಿನ ಭಯದಿಂದ ಮಾಜಿ ಸಚಿವ ಸೊರಕೆ ಅಪಪ್ರಚಾರ: ಜಿಲ್ಲಾ ಬಿಜೆಪಿ ಖಂಡನೆ
ದೇಶದೆಲ್ಲೆಡೆ ನಡೆಯುತ್ತಿರುವ ಹಲವಾರು ಚುನಾವಣೆಗಳ ನಿರಂತರ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಇದೀಗ ಗ್ರಾಮ ಪಂಚಾಯತ್ ಚುನಾವಣಾ ಸೋಲಿನ ಭಯದಿಂದ ಬಿಜೆಪಿ ವಿರುದ್ಧ ಅಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದೆ. ಚುನಾವಣಾ ಅಕ್ರಮಕ್ಕೆ ಹೆಸರುವಾಸಿಯಾಗಿರುವ ಕಾಂಗ್ರೆಸಿಗರಿಗೆ ಅಪಪ್ರಚಾರವೇ ಜೀವಾಳ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಾಗದೇ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಬಿಜೆಪಿ ಮೇಲೆ ಗೂಬೆ ಕೂರಿಸುವ ನಿಟ್ಟಿನಲ್ಲಿ ನೀಡಿರುವ ಹತಾಶ ಮನೋಭಾವದ ಹೇಳಿಕೆ ಖಂಡನೀಯ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. ಬಿಜೆಪಿContinue reading “ಗ್ರಾ.ಪಂ. ಚುನಾವಣಾ ಸೋಲಿನ ಭಯದಿಂದ ಮಾಜಿ ಸಚಿವ ಸೊರಕೆ ಅಪಪ್ರಚಾರ: ಜಿಲ್ಲಾ ಬಿಜೆಪಿ ಖಂಡನೆ”
ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ
ಗೂಂಡಾ ಸಂಸ್ಕೃತಿಗೆ ಹೆಸರುವಾಸಿಯಾಗಿರುವ ಕಾಂಗ್ರೆಸ್ ರಾಜ್ಯ ವಿಧಾನ ಪರಿಷತ್ ನಲ್ಲಿ ಗೌರವಾನ್ವಿತ ಉಪ ಸಭಾಪತಿಯವರನ್ನು ಪೀಠದಿಂದ ಎಳೆದಾಡಿದ ಫಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ. ಕಾಂಗ್ರೆಸ್ ನಾಯಕರ ವ್ಯಕ್ತಿತ್ವವನ್ನು ಬಿಂಬಿಸುವ ಇಂತಹ ಅನಾಗರಿಕ ಗೂಂಡಾಗಿರಿ ವರ್ತನೆ ಕಾಂಗ್ರೆಸ್ ಅಧಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಸಂವಿಧಾನ ಅಪಾಯದಲ್ಲಿದೆ ಎಂದು ಬೊಬ್ಬಿರಿಯುತ್ತಿದ್ದ ಕಾಂಗ್ರೆಸ್ ನಾಯಕರು ಸ್ವತಃ ಮೇಲ್ಮನೆ ಉಪ ಸಭಾಪತಿಯ ಸಾಂವಿಧಾನಿಕ ಹುದ್ದೆಗೆ ಅಪಮಾನಗೈದಿದ್ದಾರೆ. ಕಾಂಗ್ರೆಸಿನ ವಿಧಾನ ಪರಿಷತ್ ಸದಸ್ಯರContinue reading “ವಿಧಾನ ಪರಿಷತ್ ನಲ್ಲಿ ಗೂಂಡಾಗಿರಿ ಕಾಂಗ್ರೆಸ್ ಅಧಪತನಕ್ಕೆ ನಾಂದಿ: ಕುಯಿಲಾಡಿ”
ಕೌನ್‌ಬನೇಗಾ ಕರೋಡ್‌ಪತಿಗೆ ಆಯ್ಕೆಯಾದ ಉಡುಪಿಯ ಅನಾಮಯ ಯೋಗೇಶ್ ದಿವಾಕರ್
ಉಡುಪಿ, ಡಿ.12 : ಇಲ್ಲಿನ ವಿದ್ಯೋದಯ ಪಬ್ಲಿಕ್ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೇಶ್ ದಿವಾಕರ್ ಕೌನ್ ಬನೇಗಾ ಕರೋಡ್‌ಪತಿಯ ವಿಶೇಷ ಸಂಚಿಕೆಯಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ. ಕೆಬಿಸಿಯ ಸ್ಟುಡೆಂಟ್ ಸ್ಪೆಷಲ್ ಸಪ್ತಾಹಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ವೇದಾಂತ ಆನ್‌ಲೈನ್ ಲರ್ನಿಂಗ್ ಆಪ್ ಅ.5 ರಿಂದ 25ರವರೆಗೆ ಕ್ವಿಝ್ ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು. ಈ ಕ್ವಿಝ್‌ನಲ್ಲಿ ದೇಶದಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಎಂಟು ಮಂದಿ ಫೈನಲಿಸ್ಟ್ ವಿದ್ಯಾರ್ಥಿಗಳಲ್ಲಿ ಉಡುಪಿಯ ಅನಾಮಯ ಯೋಗೇಶ್Continue reading “ಕೌನ್‌ಬನೇಗಾ ಕರೋಡ್‌ಪತಿಗೆ ಆಯ್ಕೆಯಾದ ಉಡುಪಿಯ ಅನಾಮಯ ಯೋಗೇಶ್ ದಿವಾಕರ್”
ಅಂಬಲಪಾಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ
ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತಗಳು, ಪ್ರಧಾನಿ ನರೇಂದ್ರ ಮೋದಿ ಕಾರ್ಯ ವೈಖರಿ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದ ಜನಪರ ಆಡಳಿತ ಮತ್ತು ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ನಡೆಯುತ್ತಿರುವ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಅಂಬಲಪಾಡಿ ಪರಿಸರದ ಕಾಂಗ್ರೆಸ್ ನಾಯಕರಾದ ಶಿವಾಜಿ ಸನಿಲ್ ಬಂಕೇರ್ಕಟ್ಟ ಮತ್ತು ಸುಮಂತ್ ಪ.ಜಾ. ಕಾಲನಿ ಇವರು ಅಂಬಲಪಾಡಿ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪಕ್ಷದ ಧ್ವಜವನ್ನುContinue reading “ಅಂಬಲಪಾಡಿ: ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆ”
ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಭ್ಯರ್ಥಿಗಳನ್ನು ಗೆಲ್ಲಿಸಿ: ಕೆ.ರಘುಪತಿ ಭಟ್
ಉಡುಪಿ: ಗ್ರಾಮಗಳ ಉದ್ಧಾರವೇ ದೇಶದ ಉದ್ಧಾರ. ಇಂದು ಗ್ರಾಮ ಪಂಚಾಯತ್ ಸಹಿತ ವಿವಿಧ ಸ್ತರದ ಸ್ಥಳೀಯಾಡಳಿತ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಅಭಿವೃದ್ಧಿ ಪರ ಆಡಳಿತವಿದೆ. ಈ ಪರ್ವ ಕಾಲದಲ್ಲಿ ಗ್ರಾಮಗಳ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಭ್ಯರ್ಥಿಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಗೆಲ್ಲಿಸಿಕೊಡುವ ಮೂಲಕ ಜನತೆ ಗ್ರ್ರಾಮಾಭಿವೃದ್ಧಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದರು. ಅವರು ಪಂದುಬೆಟ್ಟುನಲ್ಲಿ ನಡೆದ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯContinue reading “ಸಮಗ್ರ ಗ್ರಾಮಾಭಿವೃದ್ಧಿಗಾಗಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಅಭ್ಯರ್ಥಿಗಳನ್ನು ಗೆಲ್ಲಿಸಿ: ಕೆ.ರಘುಪತಿ ಭಟ್”